ಸಚಿವ ಮಹದೇವಪ್ಪ, ತಮ್ಮ ನಡುವೆ ಭಿನ್ನಾಭಿಪಾಯವಿಲ್ಲ: ಧ್ರುವ

Team Udayavani, Jan 20, 2017, 12:20 PM IST

mys1.jpg

ನಂಜನಗೂಡು: ರಾಜ್ಯದ ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಹಾಗೂ ತಮ್ಮ ನಡುವೆ ಭಿನ್ನಾಭಿಪ್ರಾಯಗಳಿಲ್ಲ, ನಾವೆಲ್ಲ ಅನೋನ್ಯರಾಗಿಯೇ ಇದ್ದೇವೆ ಎಂದು ಲೋಕಸಭಾ ಸದಸ್ಯ ಆರ್‌.ಧ್ರುವ ನಾರಾಯಣ ಸ್ಪಷ್ಟಪಡಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ, ಉಪಚುನಾವಣಾ ಅಭ್ಯರ್ಥಿ ಕುರಿತಂತೆ ನಿಮ್ಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನಡುವೆ ಅಸಮಾಧಾನ ಭುಗಿಲೆದ್ದಿದೆ ಎಂಬ ವಿಷಯ ಕ್ಷೇತ್ರದಾದ್ಯಂತ ಹರಿದಾಡುತ್ತಿದೆ, ಅದಕ್ಕೆ ಸಾಕ್ಷಿ ಎಂಬಂತೆ ಮಹದೇವಪ್ಪನವರ ಬೆಂಬಲಿಗರ ಪಡೆ ಕಾಣುತ್ತಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇದು ಸತ್ಯಕ್ಕೆ ದೂರವಾದ ಸಂಗತಿ ಎಂದರು.

ನಾವಿರುವುದು ಕಾಂಗ್ರೆಸ್‌ ಪಕ್ಷದಲ್ಲಿ ಇಲ್ಲಿ ತನ್ನ ಅಭ್ಯರ್ಥಿ ಅವರ ಅಭ್ಯರ್ಥಿ ಎಂಬುದಿಲ್ಲ. ಹೈಕಮಾಂಡ್‌ ಯಾರನ್ನು ಸೂಚಿಸುತ್ತದೆಯೋ ಅವರೇ ನಮ್ಮೆಲ್ಲರ ಅಭ್ಯರ್ಥಿ. ಅವರ ಪರವಾಗಿ ದುಡಿಯುವುದು ಮಾತ್ರ ನಮ್ಮ ಕೆಲಸ. ನಮ್ಮಿಬ್ಬರಲ್ಲಿ ಭಿನ್ನಾಭಿಪ್ರಾಯವೇ ಇಲ್ಲ ಎಂದು ಹೇಳಿದರು. ಉಪಚುನಾವಣೆಗೆ ಅಭ್ಯರ್ಥಿ ಕಾಂಗ್ರೆಸ್ಸಿಗರೋ ಅಥವಾ ಬೇರೆ ಪಕ್ಷದವರೋ ಎಂಬ ಪ್ರಶ್ನೆಗೆ ಸಂಸದರು ನೇರವಾಗಿ ಉತ್ತರ ನೀಡದೆ ಕಾಂಗ್ರೆಸ್‌ ವರಿಷ್ಠರು ಈ ಕುರಿತು ನಿರ್ಧರಿಸುತ್ತಾರೆ ಎಂದಷ್ಟೇ ಉತ್ತರಿಸಿದರು.

16 ಕೋಟಿ ರೂ. ಬಿಡುಗಡೆ: ವಿವಿಧ ಸಮುದಾಯಗಳ ಭವನದ ನಿರ್ಮಾಣಕ್ಕಾಗಿ 15.95 ಕೋಟಿ ರೂ. ಬಿಡುಗಡೆಯಾಗಿದೆ. ಸದ್ಯದಲ್ಲೇ ಕಾಮಗಾರಿಗಳು ಪ್ರಾರಂಭವಾಗಲಿವೆ. ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಮುದಾಯ ಭವನ ನಿರ್ಮಿಸಲು ಬೇಡಿಕೆ ಸಲ್ಲಿಸಲಾಗಿತ್ತು. ಈ ಎಲ್ಲ 152 ಸುಮಾದಾಯ ಭವನಗಳ ನಿರ್ಮಾಣಕ್ಕಾಗಿ ಸರ್ಕಾರ ಹಣವನ್ನು ಜನವರಿ 9ರಂದು ಬಿಡುಗಡೆ ಮಾಡಿ 8 ಕಾಮಗಾರಿ ಆರಂಭಿಸಲು ಹಸಿರು ನಿಶಾನೆ ತೋರಿದೆ ಎಂದು ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯಿಂದ ಅಂಬೇಡ್ಕರ್‌ ಹಾಗೂ ಜಗಜೀವನರಾಂ ಸಮುದಾಯ ಭವನಕ್ಕಾಗಿ 6.30 ಕೋಟಿ ಹಾಗೂ 4.5 ಕೋಟಿ ರೂ. ಬಿಡುಗಡೆಯಾಗಿದೆ. ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 5. 65 ಕೋಟಿ ರೂ. ಸೇರಿದಂತೆ ಒಟ್ಟಾರೆ ನಂಜನಗೂಡು ವಿಧಾನಸಭಾ ಕ್ಷೇತ್ರದಾದ್ಯಂತ 152 ಸಮುದಾಯ ಭವನಗಳನ್ನು 15.95 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತದೆ. ಬಿಡುಗಡೆಯಾದ ಎಲ್ಲ ಹಣವೂ ಇಲ್ಲಿನ ವಿಧಾನಸಭಾ ಕ್ಷೇತ್ರಕ್ಕೆ ಮಾತ್ರ ಸೀಮಿತ. ವರುಣಾ ವ್ಯಾಪ್ತಿಯಲ್ಲಿ ಈಗಾಲೆ ಸಮುದಾಯ ಭವನಗಳ ಕಾಮಗಾರಿ ಪ್ರಾರಂಭವಾಗಿದೆ ಎಂದರು.

ಹೆಗ್ಗಡದೇವನಕೋಟೆಗೂ ಹಣ ಬಿಡುಗಡೆಯಾಗಿದೆ. ಆದರೆ ಇಲ್ಲಿ ಉಪ ಚುನಾವಣೆ ಇರುವುದರಿಂದ ಸ್ವಲ್ಪ ಹೆಚ್ಚು ಹಣ ಮಂಜೂರಾಗಿದೆ. ಉಪಚುನಾವಣೆ ಇರುವಲ್ಲಿ ಇದು ಸಹಜ ಪ್ರಕ್ರಿಯೆಯಾಗಿದೆ ಎಂದು ಸಮರ್ಥನೆ ನೀಡಿದರು. ಅಂಬೇಡ್ಕರ್‌ ಭವನ ಪರಿಪೂರ್ಣವಾಗಿಸಿ ಜನತೆ ಮಡಿಲಲ್ಲಿ ಇಡುವುದು ಮಾಜಿ ಸಚಿವ ವಿ.ಶ್ರೀನೀವಾಸ್‌ ಪ್ರಸಾದ್‌ ಆಶಯ, ಹಾಗಾಗಿ ತಡವಾಗುತ್ತಿದೆ. ಅದಕ್ಕೆ ಅವರೇ ಸಾಕಷ್ಟು ಹಣ ನೀಡಿದ್ದಾರೆ. ಆ ಹಣದಲ್ಲಿ ಪೀಠೊಪಕರಣಗಳು ಪಾತ್ರೆ ಪಗಡೆಗಳ ಖರೀದಿಯಾಗಬೇಕಿದೆ.

ಪರಿಪೂರ್ಣತೆಗೆ ಏನೇನು ಬೇಕೋ ಅದನ್ನು ಶೀಘ್ರದಲ್ಲಿಯೇ ಪೂರೈಸಿ ಬೃಹತ್‌ ಸಾಮೂಹಿಕ ವಿವಾಹ ಸಮಾರಂಭದ ಮೂಲಕ ಅದನ್ನು ಜನತೆಗೆ ಆದಷ್ಟು ಬೇಗ ಅರ್ಪಿಸಲಾಗುವುದು ಎಂದರು. ಜಿಪಂ ಸದಸ್ಯೆ ಲತಾ ಸಿದ್ದಶೆಟ್ಟಿ, ಟಿಎಪಿಸಿಎಂಎಸ್‌ ಅಧ್ಯಕ್ಷ ಹಾಗೂ ಎಪಿಎಂಸಿ ನೂತನ ನಿರ್ದೇಶಕ ಕುರಹಟ್ಟಿ ಮಹೇಶ, ಹುಲ್ಲಹಳ್ಳಿ ಮಾದಪ್ಪ, ತಾಪಂ ಮಾಜಿ ಅಧ್ಯಕ್ಷ ನಾಗೇಶರಾಜು, ಪುರಸಭಾ ಸದಸ್ಯ ಸಿ.ಎಂ.ಶಂಕರ ಇನ್ನಿತರರು ಉಪಸ್ಥತಿತರಿದ್ದರು.

ಟಾಪ್ ನ್ಯೂಸ್

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.