ಸಚಿವ ಮಹದೇವಪ್ಪ ತವರು ಕ್ಷೇತ್ರದಲ್ಲೇ ಕಳಪೆ ಕಾಮಗಾರಿ


Team Udayavani, May 15, 2017, 12:49 PM IST

mys5.jpg

ಬನ್ನೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಅವರ ತವರು ಕ್ಷೇತ್ರದಲ್ಲೇ ರಸ್ತೆ ಡಾಂಬರೀಕರಣದಲ್ಲಿ ಕಳಪೆ ಕಾಮಗಾರಿ ನಡೆದಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಕಳಪೆ ಕಾಮಗಾರಿಯ ಡಾಂಬರೀಕರಣದ ರಸ್ತೆಯನ್ನು ದುರಸ್ತಿಪಡಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಪಟ್ಟಣದ ಸಮೀಪದ ದೊಡ್ಡಮುಲಗೂಡು ಗ್ರಾಮದಲ್ಲಿ ಸಿರಾ ನಂಜನಗೂಡು ಎಸ್‌ಎಚ್‌84 ನಿಂದ ಗಾಮನಹಳ್ಳಿ, ದೊಡ್ಡಮುಲಗೂಡು ಮತ್ತು ಚಿಕ್ಕಮುಲಗೂಡಿನ ಚೈನೇಜ್‌ 0.002-4.5 ಕಿ.ಮೀನ ಡಾಂಬರೀಕರಣದ ರಸ್ತೆಯೇ ತೀರ ಕಳಪೆ ಕಾಮಗಾರಿಯಿಂದ ಕೂಡಿದ್ದು, ಡಾಂಬರೀಕರಣ ಮಾಡಿದ ನಾಲ್ಕೈದು ದಿನಗಳಲ್ಲೇ ಡಾಂಬರು ಎದ್ದು, ಅಲ್ಲಲ್ಲಿ ಹಳ್ಳಕೊಳ್ಳಗಳು ನಿರ್ಮಾಣವಾಗುತ್ತಿದೆ.

ಸುಮಾರು 1.80 ಕೋಟಿ ನಿರ್ಮಾಣದ ಕಾಮಗಾರಿಯು ತೀರಾ ಕಳಪೆಯಾಗಿದೆ ಎನ್ನುವ ಸಾರ್ವಜನಿಕರು ಡಾಂಬರೀಕರಣಕ್ಕಾಗಿ ಸರ್ಕಾರದಿಂದ ಕೋಟ್ಯಂತರ ರೂ ಹಣ ಪಡೆದಿರುವ ಗುತ್ತಿಗೆದಾರರು, ತೀರ ಕಳಪೆ ಮಟ್ಟದಲ್ಲಿ ಕಾಮಗಾರಿ ನಡೆಸಿರುವುದು. ಈ ರಸ್ತೆಗಳಲ್ಲಿ ವಾಹನ ಸಂಚಾರ ಹೇಗೆ ಸಾಧ್ಯವಾಗುತ್ತದೆ ಎಂದು ಪ್ರಶ್ನಿಸುವ ಗ್ರಾಮಸ್ಥರು ಇದರ ಬಗ್ಗೆ ಪರಿಶೀಲನೆ ನಡೆಸುವಂತೆಯೂ ಆಗ್ರಹಿಸಿದ್ದಾರೆ.

ದೊಡ್ಡಮುಲಗೂಡಿನ ಮಾಜಿ ಗ್ರಾಪಂ ಅಧ್ಯಕ್ಷ ಹಾಲಿ ಸದಸ್ಯ ಡಿ. ಆರ್‌.ಲೋಕೇಶ್‌ ಮಾತನಾಡಿ, ಗ್ರಾಮದ ಅಭಿವೃದ್ಧಿಯ ಉದ್ದೇಶದಿಂದ ರಸ್ತೆ ಡಾಂಬರೀಕರಣ ಮಾಡಿಸುವಂತೆ ಹಲವು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರ ಪರಿಣಾಮ ಸಿರಾ ನಂಜನಗೂಡು ಎಸ್‌ಎಚ್‌84 ನಿಂದ ಗಾಮನಹಳ್ಳಿ, ದೊಡ್ಡಮುಲಗೂಡು ಮತ್ತು ಚಿಕ್ಕಮುಲಗೂಡಿನ ಚೈನೇಜ್‌ ರಸ್ತೆಯ ಡಾಂಬರೀಕರಣದ ಕಾಮಗಾರಿ ಆರಂಭಿಸಲಾಯಿತು.

ಇದಕ್ಕಾಗಿ ಸರಕಾರದಿಂದ ಸುಮಾರು 1 ಕೋಟಿ 80 ಲಕ್ಷ ರೂ ಅನುದಾನ  ಬಿಡುಗಡೆ ಮಾಡಲಾಯಿತು. ಆದರೆ ಗುತ್ತಿಗೆದಾರರು ಸಮರ್ಪಕವಾಗಿ ಕಾರ್ಯ ನಿರ್ವಹಿಸದ ಪರಿಣಾಮ ಈ ರಸ್ತೆಯ ಉದ್ದಗಲ ಅಲ್ಲಲ್ಲಿ ಡಾಂಬರು ಎದ್ದು ಹಳ್ಳಕೊಳ್ಳಗಳು ನಿರ್ಮಾಣವಾಗುತ್ತಿದೆ. ಜೊತೆಗೆ ರಸ್ತೆಯ ಮೇಲ್‌ ಮಟ್ಟಕ್ಕೆ ಎಂಬಂತೆ ಡಾಂಬರನ್ನು ಬಳಿದು ವಾಹನಗಳು ಓಡಾಡುವ ಮುನ್ನವೇ ರಸ್ತೆ ಪುನಃ ಹಳೆಯ ಸ್ಥಿತಿಗೆ ಹೋಗುತ್ತಿರುವುದು ಕಾಮಗಾರಿ ಎಷ್ಟರ ಮಟ್ಟಿಗೆ ನಡೆದಿದೆ ಎನ್ನುವುದನ್ನು ಎತ್ತಿಹಿಡಿಯುತ್ತದೆ ಎಂದು ಆರೋಪಿಸಿದರು.

ಕಾಮಗಾರಿಯ ವೇಳೆ ಹಾಜರಾಗುತ್ತಿದ್ದ ಸಹಾಯಕ ಎಂಜಿನಿಯರ್‌ ಸತೀಶ್‌ಚಂದ್ರರಿಗೆ ರಸ್ತೆಯ ಅವ್ಯವಸ್ಥೆಯ ಬಗ್ಗೆ ದೂರು ನೀಡಿದರೆ, ಹಾಳಾಗಿರುವ ರಸ್ತೆಗೆ ಪ್ಯಾಚ್‌ ವರ್ಕ್‌ ಮಾಡಿಸುವುದಾಗಿ ಹೇಳುತ್ತಿದ್ದಾರೆ. ಆದರೆ ರಸ್ತೆಯ ಕಳಪೆ ಕಾಮಗಾರಿ ಮಾಡಿರುವವರ ಮೇಲೆ ಯಾವುದೇ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡುತ್ತಿಲ್ಲ ಎಂದು ತಿಳಿಸಿದರು.

ಲೋಕೋಪಯೋಗಿ ಸಚಿವರ ತವರು ಕ್ಷೇತ್ರದಲ್ಲೇ ಅಧಿಕಾರಿಗಳು ಈ ರೀತಿಯಲ್ಲಿ ಕಾರ್ಯ ನಿರ್ವಹಿಸಿದರೆ ಯಾವ ಅನುಕೂಲವಾಗುತ್ತದೆ ಎಂದು ಪ್ರಶ್ನಿಸಿದ ಅವರು ಹಾಳಾಗಿರುವ ರಸ್ತೆ ಸರಿಪಡಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿ, ಮೇಲಧಿಕಾರಿಗಳಿಗೂ ದೂರು ನೀಡುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

14-uv-fusion

Bamboo: ಬಿದಿರು ಎಂದು ಮೂಗು ಮುರಿಯದಿರಿ

Kukke Shree Subrahmanya Temple: ಮೂಲ ಮೃತ್ತಿಕಾ ಪ್ರಸಾದ ವಿತರಣೆ

Kukke Shree Subrahmanya Temple: ಮೂಲ ಮೃತ್ತಿಕಾ ಪ್ರಸಾದ ವಿತರಣೆ

4

Belthangady: ನೇಣು ಬಿಗಿದು ವ್ಯಕ್ತಿ ಆತ್ಮಹ*ತ್ಯೆ

man-a

Udupi: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

13-

Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.