ಹಿಜಾಬ್- ಕೇಸರಿ ವಿವಾದ: ಸಂಘಟನೆಗಳಿಗೆ ಖಡಕ್ ಎಚ್ಚರಿಕೆ ನೀಡಿದ ಸಚಿವ ಸೋಮಣ್ಣ
Team Udayavani, Feb 12, 2022, 3:22 PM IST
ಮೈಸೂರು: ಯಾರ್ಯಾರು ಏನೇನು ಮಾಡುತ್ತಿದ್ದಾರೆ ಎನ್ನುವುದನ್ನು ಸರ್ಕಾರ ಗಂಭೀರವಾಗಿ ಗಮನಿಸುತ್ತಿದೆ. ಇಲ್ಲಿ ಯಾರು ದೊಡ್ಡವರಲ್ಲ, ಎಲ್ಲರಿಗಿಂತ ದೇಶ ದೊಡ್ಡದು. ಸಮಾಜದ ಸ್ವಾಸ್ಥ್ಯ ಹಾಳು ಮಾಡುವಂತಹ ಸಂಘಟನೆಗಳನ್ನು ಬಗ್ಗು ಬಡಿಯುವ ಕೆಲಸವನ್ನ ಸರ್ಕಾರ ಮಾಡಲಿದೆ ಎಂದು ಸಚಿವ ವಿ.ಸೋಮಣ್ಣ ಅವರು ಹಿಜಾಬ್ -ಕೇಸರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘಟನೆಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಘಜಿನಿ ಮಹಮ್ಮದ್ 17 ಬಾರಿ ದಂಡೆತ್ತಿ ಬಂದ, ಅನೇಕ ರಾಜರು ದಾಳಿ ಮಾಡಿದರು. ಆದರೂ ಭಾರತ ಭಾರತವಾಗಿಯೇ ಇದೆ. ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡದಿರಿ ಎಂದರು.
ಟಾರ್ಗೆಟ್ ಸಾಕು: ಬಿಜೆಪಿ ಸರ್ಕಾರ ಒಂದೂ ಮನೆ ನೀಡಿಲ್ಲ ಎಂಬ ಸಿದ್ದರಾಮಯ್ಯ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ‘ಸುಡುಗಾಡು ಸಿದ್ದ’ ಮಾಡಿದ್ದನ್ನು ನಾವು ಸರಿ ಮಾಡಿದ್ದೇವೆ. ಅವರ ಕಾಲದಲ್ಲಿ ಬರೀ ಘೋಷಣೆಯಾಗಿತ್ತು, ನಾವು ಮನೆ ಕಟ್ಟಿಕೊಡುತ್ತಿದ್ದೇವೆ. ಇದು ನಿರಂತರ ಪ್ರಕ್ರಿಯೆಯಾಗಿದೆ. ರಾಜಕಾರಣಕ್ಕಾಗಿ ನನ್ನ ಮೇಲೆ ಆರೋಪ ಮಾಡಬೇಡಿ ಎಂದರು.
ಇದನ್ನೂ ಓದಿ:ನಮ್ಮನ್ನು ಡಿಕ್ಟೇಟ್ ಮಾಡ್ತೀರಾ : ಮಾಧ್ಯಮಗಳ ವಿರುದ್ಧ ಹರಿಹಾಯ್ದ ಶ್ರೀರಾಮುಲು
ನಾವು ಕೊಟ್ಟಿದ್ದು, ನೀವು ಕೊಟ್ಟಿದ್ದು ಎನ್ನುವುದು ಮುಖ್ಯವಲ್ಲ, ಜನರಿಗೆ ಮನೆ ಸಿಗಬೇಕು. ಸಿದ್ದರಾಮಯ್ಯ ಸಹ ಅವರ ಮನೆಯಿಂದ ತಂದು ಕೊಟ್ಟಿಲ್ಲ. ನಾನೂ ಮನೆಯಿಂದ ತಂದು ಕೊಡಲ್ಲ. ಇನ್ನು ಮುಂದೆಯಾದರೂ ಸೋಮಣ್ಣನನ್ನು ಟಾರ್ಗೆಟ್ ಮಾಡುವುದನ್ನು ಬಿಡಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.