ಹಾಡಿ ಮಕ್ಕಳೊಂದಿಗೆ ಕುಣಿದು ಕುಪ್ಪಳಿಸಿದ ಸಚಿವ

Team Udayavani, Sep 6, 2022, 1:26 PM IST

ಹಾಡಿ ಮಕ್ಕಳೊಂದಿಗೆ ಕುಣಿದು ಕುಪ್ಪಳಿಸಿದ ಸಚಿವ

ಮೈಸೂರು: ಅರಮನೆ ಅಂಗಳದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಾಡಿ ಮಕ್ಕಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್‌ ಅವರೂ ನೃತ್ಯ ಪ್ರದರ್ಶಿಸಿ ಸಂಭ್ರಮಿಸಿದರು.

ಅರಮನೆ ಆವರಣದಲ್ಲಿ ಭಾನುವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಆಯುಷ್‌ ಹಾಗೂ ಅರಣ್ಯ ಇಲಾಖೆಯಿಂದ ಏರ್ಪಡಿಸಿದ್ದ ಮಾವುತರು, ಕಾವಾಡಿ ಮಕ್ಕಳ ತಾತ್ಕಾಲಿಕ ಶಾಲೆ ಹಾಗೂ ಪಂಚಕರ್ಮ ಚಿಕಿತ್ಸಾ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಾಡಿ ಮಕ್ಕಳು ಪ್ರದರ್ಶಿಸಿದ ಜಾನಪದ ನೃತ್ಯ ಕಾರ್ಯಕ್ರಮದಲ್ಲಿ ಸಚಿವರೂ ಮಕ್ಕಳೊಂದಿಗೆ ಹೆಜ್ಜೆ ಹಾಕುವ ಮೂಲಕ ಮಕ್ಕಳಲ್ಲಿ ಭರವಸೆ ಮೂಡಿಸಿದರು. ಬಳಿಕ ಮಾತನಾಡಿದ ಸಚಿವ ಎಸ್‌.ಟಿ.ಸೋಮಶೇಖರ್‌, ತಾತ್ಕಾ ಲಿಕ ಶಾಲೆ ಉದ್ಘಾಟನೆ ವೇಳೆ ಹಾಡಿ ಮಕ್ಕಳು 2 ನೃತ್ಯ ಮಾಡಿದರು.

ಮೈಸೂರಿನಲ್ಲಿ ನನ್ನೊಂದಿಗೆ ಡ್ಯಾನ್ಸ್‌ ಮಾಡಿದ್ದನ್ನು ಮಕ್ಕಳು ನೆನಪಿನಲ್ಲಿಟ್ಟು ಕೊಳ್ಳುತ್ತಾರೆ ಎಂದು ಹೇಳಿದರು. ದಸರಾ ಸಾಂಸ್ಕೃತಿಕ ಕಾರ್ಯಕ್ರಮ ಗಳಿಗೆ ಉತ್ತಮ ಸ್ಪಂದನೆ ಬಂದಿದೆ. ನೆರೆಯ ಜಿಲ್ಲೆಗಳಿಂದಲೂ ಅವಕಾಶ ಕ್ಕಾಗಿ ಕಲಾವಿದರು ಮನವಿ ಸಲ್ಲಿಸಿ ದ್ದಾರೆ. ದಸರಾ ಪ್ರಾಯೋಜಕತ್ವದ ಬಗ್ಗೆ ಸೆ.6ರಂದು ಸಭೆ ನಡೆಸಿ ಮಾಹಿತಿ ಪಡೆಯಲಾಗುವುದು. ಈವರೆಗೂ ದಸರಾ ಉದ್ಘಾಟಕರು ಅಂತಿಮಗೊಂಡಿಲ್ಲ ಎಂದರು.

ತಾತ್ಕಾಲಿಕ ಶಾಲೆ: ತಾತ್ಕಾಲಿಕ ಶಾಲೆಯಲ್ಲಿ ವಿವಿಧ ಆನೆ ಶಿಬಿರಗಳಿಂದ ಆಗಮಿಸಿರುವ 18 ಮಕ್ಕಳಿದ್ದಾರೆ. ಮಕ್ಕಳ ವಿದ್ಯಾಭ್ಯಾಸಕ್ಕೆ ತೊಡಕಾಗಬಾರೆಂದು ಶಾಲೆ ಆರಂಭಿಸಿದ್ದೇವೆ. ಹಿರಿಯ ಐವರು ಶಿಕ್ಷಕರನ್ನು ನಿಯೋಜಿಸಲಾಗಿದೆ. ಪುಸ್ತಕ, ಸಮವಸ್ತ್ರ, ಶೈಕ್ಷಣಿಕ ಪರಿಕರ ನೀಡಿದ್ದೇವೆ ಎಂದು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ರಾಮಾರಾಧ್ಯ ತಿಳಿಸಿದರು. ಪ್ರತಿ ವರ್ಷ ಟೆಂಡ್‌ ಶಾಲೆ ಆರಂಭಿಸಲಾಗುತ್ತಿತ್ತು. ಈ ವರ್ಷ ಅರಮನೆ ಮಂಡಲಿ ಸಹಕಾರದೊಂದಿಗೆ ಆನೆ ಶಿಬಿರದ ಪಕ್ಕದಲ್ಲಿರುವ ಕಟ್ಟಡದಲ್ಲಿ ಶಾಲೆ ಆರಂಭಿಸಿದ್ದೇವೆ. ಪಠ್ಯದ ಜತೆಗೆ ಆಟೋಟಗಳು, ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಪಾಲ್ಗೊಳ್ಳಲಿದ್ದಾರೆ. ಇಸ್ಕಾನ್‌ನಿಂದ ಮಧ್ಯಾಹ್ನದ ಬಿಸಿಯೂಟ ಕೊಡಲಾಗುವುದು ಎಂದು ತಿಳಿಸಿದರು.

ಪಂಚಕರ್ಮ ಚಿಕಿತ್ಸಾ ಗಟಕ ಉದ್ಘಾಟನೆ: ಅರಮನೆ ಆವರಣದಲ್ಲಿ ಮಾವುತರು ಮತ್ತು ಕಾವಾಡಿಗಳ ಆರೋಗ್ಯದ ದೃಷ್ಟಿಯಿಂದ ಆಯುಷ್‌ ಇಲಾಖೆಯಿಂದ ತೆರೆದಿರುವ ತಾತ್ಕಾಲಿಕ ಪಂಚಕರ್ಮ ಚಿಕಿತ್ಸೆ ಹಾಗೂ ಹೋರ ರೋಗಿ ಚಿಕಿತ್ಸಾ ಘಟಕವನ್ನು ಸಚಿವ ಸೋಮಶೇಖರ್‌ ಉದ್ಘಾಟಿಸಿದರು. ಈ ವೇಳೆ ಚಿಕಿತ್ಸಾ ವಿಧಾನದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಅವರು, ಮಾವುತರು ಮತ್ತು ಕಾವಾಡಿಗಳಷ್ಟೇ ಅಲ್ಲದೆ, ಅವರ ಮಕ್ಕಳ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸುವಂತೆ ಸಲಹೆ ನೀಡಿದರು.

ಜಿಪಂ ಸಿಇಒ ಪೂರ್ಣಿಮಾ, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ್‌, ಡಿಸಿಎಫ್ ವಿ.ಕರಿಕಾಳನ್‌, ಅರಮನೆ ಮಂಡಳಿ ಉಪ ನಿರ್ದೇಶಕ ಸುಬ್ರಹ್ಮಣ್ಯ, ಪಾಲಿಕೆ ಸದಸ್ಯ ಬಿ.ವಿ.ಮಂಜುನಾಥ್‌, ಬಿಜೆಪಿ ಮುಖಂಡ ಅನಿಲ್‌ಥಾಮಸ್‌, ಮೈಸೂರು ವಿವಿ ಸಿಂಡಿಕೇಟ್‌ ಸದಸ್ಯ ಡಾ.ವಸಂತಕುಮಾರ್‌, ಪ್ರಭಾಕರ್‌ ಸಿಂಧ್ಯಾ ಮುಂತಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.