ಶೂ ಹಾಕಿಕೊಂಡೇ ದಸರಾ ಗಜಪಡೆಗೆ ಪೂಜೆ ಸಲ್ಲಿಸಿದ ಸಚಿವ ಉಮೇಶ್ ಕತ್ತಿ!
Team Udayavani, Aug 7, 2022, 11:05 AM IST
ಮೈಸೂರು: ಪ್ರಸಿದ್ಧ ಮೈಸೂರು ದಸರಾದ ಆರಂಭ ಎಂಬಂತಿರುವ ಗಜ ಪಯಣ ಕಾರ್ಯಕ್ರಮಕ್ಕೆ ಭಾನುವಾರ ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಬಳಿ ಭಾನುವಾರ ಸಂಭ್ರಮ, ಸಾಂಪ್ರದಾಯಿಕ ಚಾಲನೆ ದೊರೆಯಿತು. ಆದರೆ ಈ ವೇಳೆ ಅರಣ್ಯ ಸಚಿವ ಉಮೇಶ್ ಕತ್ತಿ ಶೂ ಧರಿಸಿಕೊಂಡೇ ಪೂಜೆ ಸಲ್ಲಿಸಿದ ಪ್ರಸಂಗ ನಡೆಯಿತು.
ಶೂ ಹಾಕಿಕೊಂಡೇ ಅಂಬಾರಿ ಆನೆ ಅಭಿಮನ್ಯುಗೆ ಪೂಜೆ ಸಲ್ಲಿಸಿದ ಅವರು, ಗಜಪಡೆಗೆ ಪುಷ್ಪಾರ್ಚನೆ ಮಾಡಿ, ಕಬ್ಬು, ಕಡಬು ತಿನ್ನಿಸಿದರು.
ಸಚಿವ ಎಸ್.ಟಿ. ಸೋಮಶೇಖರ್, ಶಾಸಕ ಎಚ್.ಪಿ. ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ಎಚ್. ವಿಶ್ವನಾಥ್, ಮಂಜೇಗೌಡ ಹಾದಿಯಾಗಿ ಎಲ್ಲರೂ ಶೂ, ಚಪ್ಪಲಿ ತೆಗೆದು ಪೂಜೆ ಸಲ್ಲಿಸಿದರು. ಆದರೆ ಅರಣ್ಯ ಸಚಿವ ಉಮೇಶ್ ಕತ್ತಿ ಮಾತ್ರ ಶೂ ಹಾಕಿಕೊಂಡು ಪೂಜೆ ಸಲ್ಲಿಸಿದರು.
ತುಂತುರು ಮಳೆಯ ನಡುವೆಯೂ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮ ಪಂಚಾಯಿತಿಯ ವೀರನಹೊಸಹಳ್ಳಿ ಬಳಿಯಿರುವ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಗೇಟ್ ಬಳಿ ವಿಶೇಷವಾಗಿ ಅಲಂಕೃತಗೊಂಡು ಸಾಲಾಗಿ ನಿಂತಿದ್ದ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಒಂಬತ್ತು ಆನೆಗಳಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗಜಪಯಣಕ್ಕೆ ಚಾಲನೆ ನೀಡಲಾಯಿತು. ಜಾನಪದ ಕಲಾ ತಂಡಗಳು, ಮುತ್ತೈದೆಯರು, ಹಾಡಿಯ ಜನರು ಈ ಸಾಂಪ್ರದಾಯಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಇದನ್ನೂ ಓದಿ:ಮೈಸೂರು ದಸರಾ: ಮಳೆಯ ನಡುವೆಯೇ ಗಜ ಪಯಣಕ್ಕೆ ಸಂಭ್ರಮದ ಚಾಲನೆ
ಸಿಂಗಾರಗೊಂಡು ಸಾಲಾಗಿ ನಿಂತಿದ್ದ ಕ್ಯಾಪ್ಟನ್ ಅಭಿಮನ್ಯು, ಅರ್ಜುನ, ಧನಂಜಯ, ಗೋಪಾಲಸ್ವಾಮಿ, ಭೀಮ, ಮಹೇಂದ್ರ, ಕಾವೇರಿ, ಚೈತ್ರಾ, ಕಾವೇರಿ ಆನೆಗಳ ಪಾದ ತೊಳೆದು ಹೂ, ಹರಿಶಿನ, ಕುಂಕುಮ ಹಚ್ಚಿ ಪೂಜೆ ಸಲ್ಲಿಸಿದರು. ಆನೆಗಳಿಗೆ ಗಂಧ, ಸುಗಂಧಭರಿತ ಪಂಚಫಲ, ಕಡುಬು, ಚಕ್ಕುಲಿ, ನಿಪ್ಪಟ್ಟು, ಹೋಳಿಗೆ, ಬೆಲ್ಲ, ಕಬ್ಬು, ದ್ರಾಕ್ಷಿ, ಗೋಡಂಬಿ, ಕಲ್ಲು ಸಕ್ಕರೆ, ಮೋದಕ ನೈವೇದ್ಯ ನೀಡಿ, ಶೋಡಷೋಪಚಾರ ಪೂಜೆ, ಗಣಪತಿ ಅರ್ಚನೆಯೊಂದಿಗೆ ವನದೇವತೆ ಹಾಗೂ ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿದರು. ಆನೆಗಳು ಕಾಡಿನಿಂದ ನೇರವಾಗಿ ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯಭವನಕ್ಕೆ ಆಗಮಿಸಲಿದ್ದು, ಆ.10ರಂದು ಅರಮನೆ ಪ್ರವೇಶಿಸಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.