ಕ್ಷೇತ್ರದ ಅಭಿವೃದ್ಧಿಗೆ 950 ಕೋಟಿ ರೂ. ವಿನಿಯೋಗ
Team Udayavani, Apr 21, 2023, 3:04 PM IST
ಮೈಸೂರು: ಕಳೆದ 5 ವರ್ಷಗಳಲ್ಲಿ 950 ಕೋಟಿ ರೂ.ಗೂ ಹೆಚ್ಚು ಅನುದಾನವನ್ನು ತಂದು, ವಿವಿಧ ಅಭಿವೃದ್ಧಿ ಕಾಮಗಾರಿಗೆ ವಿನಿಯೋಗಿಸುವ ಮೂಲಕ ಚಾಮರಾಜ ಕ್ಷೇತ್ರದ ಸರ್ವತೋಮುಖ ಪ್ರಗತಿಗೆ ಶ್ರಮಿಸಿದ್ದೇನೆ ಎಂದು ಶಾಸಕ ಎಲ್. ನಾಗೇಂದ್ರ ಹೇಳಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಚಾಮರಾಜ ಕ್ಷೇತ್ರದ ಶಾಸಕನಾದ ಬಳಿಕ 950 ಕೋಟಿ ರೂಪಾಯಿಗೂ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಇದ್ದ ಕುಡಿ ಯುವ ನೀರಿನ ಸಮಸ್ಯೆ ಹೋಗಲಾಡಿಸುವ ಸಲುವಾಗಿ ಅಮೃತ್ ಯೋಜನೆಯಡಿ 333 ಕೋಟಿ ರೂ. ಅನುದಾನ ವಿನಿಯೋಗಿಸಿ ಕಾವೇರಿ ನೀರು ಪೂರೈಕೆ ಹಾಗೂ 06 ಟ್ಯಾಂಕ್ ನಿರ್ಮಾಣ ಸೇರಿದಂತೆ ಪೈಪ್‌ಲೈನ್ ಕಾಮಗಾರಿ ಮಾಡಲಾಗಿದೆ ಎಂದರು.
50 ಸಾವಿರ ಕಿಟ್ ವಿತರಣೆ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರದಲ್ಲಿ ಶಾಸಕನಾಗಿ ಇರಬೇಕು ಎಂಬ ಕನಸಿತ್ತು. ಅದರಂತೆ 2018ರ ಚುನಾವಣೆಯಲ್ಲಿ ಗೆದ್ದು ಶಾಸಕನಾದೆ. ಆದರೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಿಂದ 1 ವರ್ಷ ಕ್ಷೇತ್ರಕ್ಕೆ ಯಾವುದೇ ಅನು ದಾನ ಬಾರದ ಹಿನ್ನೆಲೆ ಅಭಿವೃದ್ಧಿ ಕುಂಠಿತಗೊಂಡಿತು. ಬಳಿಕ ನಮ್ಮದೇ ಸರ್ಕಾರ ರಚನೆಯಾ ದಾಗ ಕೋವಿಡ್ ಸೋಂಕು ಆವರಿಸಿ ಎರಡು ವರ್ಷ ಸಂಕಷ್ಟಕ್ಕೆ ಸಿಲುಕಿತು. ಈ ವೇಳೆ ಕ್ಷೇತ್ರದ ಜನತೆಗೆ ಅನುಕೂಲವಾಗುವ ದೃಷ್ಟಿಯಿಂದ 50 ಸಾವಿರ ಕಿಟ್ ವಿತರಣೆ ಹಾಗೂ ಆಸ್ಪತ್ರೆಗಳಲ್ಲಿ ಹಾಸಿಗೆ, ಆಕ್ಸಿಜನ್ ಸೌಲಭ್ಯಕ್ಕೆ ಒತ್ತು ನೀಡಲಾಯಿತು ಎಂದು ತಿಳಿಸಿದರು.
ಕಾಮಗಾರಿ ಆರಂಭಿಸಲಾಗಿದೆ: 350 ಕೋಟಿ ರೂ. ವೆಚ್ಚದಲ್ಲಿ ಕ್ಷೇತ್ರದ ಎಲ್ಲಾ ರಸ್ತೆಗಳನ್ನು ಅಭಿವೃ ದ್ಧಿಗೊಳಿಸಿರುವುದಲ್ಲದೇ, ಬೀದಿ ದೀಪ ವ್ಯವಸ್ಥೆ, ಒಳಚರಮಡಿ, ಚರಂಡಿ, ಆಸ್ಪತ್ರೆಗಳಿಗೆ ಮೂಲಸೌಕರ್ಯ, ಗ್ರಂಥಾಲಯ ಕಟ್ಟಡಗಳ ನಿರ್ಮಾಣ, ಉದ್ಯಾನಗಳ ಉನ್ನತೀಕರಣ ಶ್ರಮಿಸಿದ್ದೇನೆ. ಜತೆಗೆ ಶತಮನೋತ್ಸವ ಆಚರಿಸಿಕೊಳ್ಳುತ್ತಿರುವ ನಗರದ ಕೆ.ಆರ್. ಆಸ್ಪತ್ರೆ ದುಸ್ತಿಯಲ್ಲಿರುವುದನ್ನು ಮನಗಂಡು ಸರ್ಕಾರದಿಂದ ಆಸ್ಪತ್ರೆ ನವೀಕರಣಕ್ಕೆ 90 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಲಾಯಿತು. ಜತೆಗೆ ಮೆಡಿಕಲ್ ಕಾಲೇಜು ಹಾಸ್ಟೆಲ್ ಹಾಗೂ ಕಾಲೇಜಿನ ಕಟ್ಟಡ ನಿರ್ಮಾಣಕ್ಕೆ 42 ಕೋಟಿ ರೂ. ಅನುದಾನವನ್ನು ಸರ್ಕಾರದಿಂದ ಬಿಡುಗಡೆ ಮಾಡಿಸಿ ಕಾಮಗಾರಿ ಆರಂಭಿಸಲಾಗಿದೆ ಎಂದು ವಿವರಿಸಿದರು.
ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿ ನಡೆದಿದ್ದ ಕಳಪೆ ಡಾಂಬರೀಕರಣ ಕಾಮಗಾರಿಯನ್ನು ಪತ್ತೆ ಮಾಡಿದ್ದೇ ನಾನು. ಕಾಮಗಾರಿ ಕಳಪೆಯಾಗಿದೆ ಎಂದು ತಿಳಿಯುತ್ತಿದ್ದಂತೆ ಕೂಡಲೇ ಕೆಲಸವನ್ನು ಸ್ಥಗಿತಗೊಳಿಸುವಂತೆ ಸೂಚಿಸಿ, ಮರು ಡಾಂಬರೀಕರಣ ಮಾಡುವಂತೆ ಕ್ರಮ ಕೈಗೊಂಡಿದ್ದೇನೆ. ನನ್ನ ಕ್ಷೇತ್ರದಲ್ಲಿ ಕಳಪೆ ಕಾಮಗಾರಿ ಅವಕಾಶ ಮಾಡಿಕೊಟ್ಟಿಲ್ಲ. ನನ್ನ ಈ ಅಭಿವೃದ್ಧಿ ಕಾರ್ಯವನ್ನು ಜನರು ಒಪ್ಪಿಕೊಂಡಿದ್ದು, ಈ ಬಾರಿಯೂ ನನ್ನ ಪರ ನಿಲ್ಲಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು.
ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಬಿಜೆಪಿ ಜಿಲ್ಲಾ ವಕ್ತಾರ ಡಾ.ಕೆ. ವಸಂತ್ ಕುಮಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
PAK Vs SA: ಸರಣಿ ಕ್ಲೀನ್ ಸ್ವೀಪ್ ಗೈದ ಪಾಕಿಸ್ಥಾನ
Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ
BCCI: ಇನ್ನೆರಡು ಟೆಸ್ಟ್ ನಿಂದ ಮೊಹಮ್ಮದ್ ಶಮಿ ಹೊರಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.