ಹುಣಸೂರು ಕ್ಷೇತ್ರದಲ್ಲಿ ಶಾಸಕ ಮಂಜುನಾಥ್ ಪ್ರಚಾರ
Team Udayavani, Apr 13, 2018, 12:48 PM IST
ಹುಣಸೂರು: ಕಳೆದ 10 ವರ್ಷಗಳಲ್ಲಿ ಜನರ ಕಷ್ಟಗಳಿಗೆ ಸ್ಪಂದಿಸಿದ್ದೇನೆ. ಜೊತೆಗೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ತಾಲೂಕಿನಲ್ಲಿ ಜನಮೆಚ್ಚುವ ಅಭಿವೃದ್ಧಿ ಕೆಲಸ ಮಾಡಿದ್ದೇನೆ ಎಂದು ಶಾಸಕ, ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ಎಚ್.ಪಿ.ಮಂಜುನಾಥ್ ಮನವಿ ಮಾಡಿದರು.
ತಾಲೂಕಿನ ಗಾವಡಗೆರೆ ಹೋಬಳಿಯ ಹರವೆ, ರಾಮೇನಹಳ್ಳಿ, ಹರವೆಕಲ್ಲಹಳ್ಳಿ, ಹಿರಿಕ್ಯಾತನಹಳ್ಳಿ, ಮೋದೂರು, ಮೋದೂರು ಎಂ ಕೊಪ್ಪಲು, ಜಾಬಗೆರೆ, ಕೆರೆಯೂರು, ಬಿಳಿಗೆರೆ, ಕಳ್ಳಿಕೊಪ್ಪಲು, ಚಿಕ್ಕಾಡಿಗನಹಳ್ಳಿ ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮಾತನಾಡಿ, ತಾಲೂಕಿನ ನೀರಾವರಿ ಯೋಜನೆ, ಹಾರಂಗಿ ನಾಲೆಗಳ ಆಧುನೀಕರಣ, ಏತನೀರಾವರಿ ಮೂಲಕ ಕೆರೆಗಳಿಗೆ ನೀರು ತುಂಬಿಸುವ ಯೋಜನೆ, ರಸ್ತೆ ಅಭಿವೃದ್ಧಿ ಸೇರಿ ಅನೇಕ ಜನಪರ ಕೆಲಸ ಮಾಡಿರುವ ಆತ್ಮ ತೃಪ್ತಿ ತಮಗಿದೆ ಎಂದು ಹೇಳಿದರು.
ಜಲದಾಹ ನೀಗಿಸಿದ್ದೇನೆ: ತಾಲೂಕಿನ ಗಡಿಯಂಚಿನ ಗ್ರಾಮ ಜಾಬಗೆರೆಯಲ್ಲಿ ಕುಡಿವ ನೀರಿನ ಸಮಸ್ಯೆಯಿಂದ ಬಳಲುತ್ತಿದ್ದ ಇಲ್ಲಿಗೆ ಕಾವೇರಿ ನೀರನ್ನು ಪೂರೈಸಲಾಗಿದೆ. ಇದೇ ಗ್ರಾಮಕ್ಕೆ 3 ಕೋಟಿ ರೂ.ಗೂ ಹೆಚ್ಚು ಅನುದಾನ ನೀಡಿ ಅಭಿವೃದ್ಧಿಪಡಿಸಿದ್ದೇನೆ. ಅಲ್ಲದೆ, ತಾಲೂಕಿನ ಬಹುತೇಕ ಗ್ರಾಮಗಳ ಎಸ್‌ಸಿ, ಎಸ್‌ಟಿ ಕಾಲೋನಿಗಳ ಸಮಗ್ರ ಅಭಿವೃದ್ಧಿ ಪಡಿಸಿದ್ದು, ಮತ್ತಷ್ಟು ಅಭಿವೃದ್ಧಿಗೆ ಆಶೀರ್ವದಿಸಬೇಕೆಂದು ಮನವಿ ಮಾಡಿದರು.
ಶಾಸಕರೊಂದಿಗೆ ಜಿಪಂ ಸದಸ್ಯೆ ಸಾವಿತ್ರಿ ಮಂಜು, ಮಾಜಿ ಸದಸ್ಯರಾದ ಸಿ.ಟಿ.ರಾಜಣ್ಣ, ದೇವರಾಜ್, ತಾಲೂಕು ಕಾಂಗ್ರೆಸ್ ಅಧ್ಯಕ್ಷರಾದ ಬಸವರಾಜು, ನಾರಾಯಣ್, ಮಾಜಿ ಅಧ್ಯಕ್ಷ ಬಿಳಿಕೆರೆಬಸವರಾಜು, ತಾಪಂ ಅಧ್ಯಕ್ಷೆ ಪದ್ಮಮ್ಮ, ಸದಸ್ಯ ತಿಮ್ಮನಾಯ್ಕ, ಗ್ರಾಪಂ ಅಧ್ಯಕ್ಷೆ ಶೋಭಾ, ಉಪಾಧ್ಯಕ್ಷೆ ಶಾಲಿನಿ, ಎಪಿಎಂಸಿ ಸದಸ್ಯೆ ಲಲಿತಾ, ಮುಖಂಡರಾದ ಶೀರೇನಹಳ್ಳಿ ಬಸವರಾಜೇಗೌಡ, ಸೋಮಶೇಖರ್, ಮರಿಯಪ್ಪ, ರವಿಸಾಲಿಯಾನ, ಗಣೇಶ, ನೇರಳಕುಪ್ಪೆಮಹದೇವ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.