16ರಿಂದ ಕಬ್ಬು ಅರೆಯುವ ಕಾರ್ಯ ಆರಂಭ: ಸಾರಾ
Team Udayavani, Sep 12, 2022, 1:32 PM IST
ಭೇರ್ಯ: ಚುಂಚನಕಟ್ಟೆ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆಗೆ ಪಡೆದಿರುವ ನಿರಾಣಿ ಶುಗರ್ನವರು ಸೆ.16ರಿಂದ ಕಬ್ಬು ಅರೆಯುವ ಕಾರ್ಯವನ್ನು ಆರಂಭಿಲಿದ್ದಾರೆ ಎಂದು ಶಾಸಕ ಸಾ. ರಾ.ಮಹೇಶ್ ಹೇಳಿದರು.
ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆಯ ಕಬ್ಬು ಅರೆಯುವ ಕಾರ್ಯಕ್ಕೆ ಪೂರ್ವ ಭಾವಿಯಾಗಿ ಬಾಯ್ಲರ್‌ಗೆ ಅಗ್ನಿ ಸ್ಪರ್ಶಿಸಿ ಮಾತನಾಡಿದರು. ಕಳೆದ 12 ವರ್ಷಗಳಿಂದ ಕಬ್ಬು ಅರೆಯುವ ಕಾರ್ಯ ಸ್ಥಗಿತಗೊಳಿಸಿದ್ದ ಕಾರ್ಖಾನೆ ಪ್ರಸಕ್ತ ತಿಂಗಳಲ್ಲಿ ಕಾರ್ಯಾರಂಭ ಮಾಡಲಿದ್ದು ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಸಂತಸ ವ್ಯಕ್ತಪಡಿಸಿದ ಅವರು, ಕಾರ್ಖಾನೆಯವರು ರೈತರಿಗೆ ಯಾವುದೇ ತೊಂದರೆ ನೀಡಬಾರದು ಎಂದು ಆಡಳಿತ ಮಂಡಳಿಯವರಿಗೆ ಸೂಚಿಸಿದರು. ಕಾರ್ಖಾನೆ ಪ್ರಸ್ತುತ ನಿತ್ಯ 1,250 ಟನ್ ಕಬ್ಬು ಅರೆಯಲಿದ್ದು ಮುಂದಿನ ದಿನಗಳಲ್ಲಿ ಕನಿಷ್ಠ 5 ಸಾವಿರ ಟನ್ ಕಬ್ಬು ಅರೆಯುವ ಸಾಮರ್ಥಯ ಹೊಂದಲಿದ್ದು ಇದರಿಂದ ರೈತರು ಮತ್ತು ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಮಾಹಿತಿ ನೀಡಿದರು.
ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ತಾಲೂಕುಗಳ ಭಾಗದಲ್ಲಿ ಉತ್ತಮವಾದ ನೀರಾವರಿ ಮತ್ತು ರಸ್ತೆ ವ್ಯವಸ್ಥೆ ಇದ್ದು ರೈತರು ಕಬ್ಬು ಬೆಳೆದು ಲಾಭ ಗಳಿಸಬೇಕೆಂದು ಕಿವಿಮಾತು ಹೇಳಿದರು. ಕಾರ್ಖಾನೆ ಕಬ್ಬು ಅರೆಯುವ ಕಾರ್ಯ ಆರಂಭಿಸುವುದರಿಂದ ಈ ಭಾಗದ ಮತ್ತು ಇತರ ತಾಲೂಕುಗಳ ಸಾವಿರಾರು ಮಂದಿ ರೈತರು ಮತ್ತು ಕಾರ್ಮಿಕರಿಗೆ ಉದ್ಯೋಗ ಸಿಗಲಿದ್ದು ಇದು ಹಲವು ಜನರ ಜೀವನಕ್ಕೆ ದಾರಿಯಾಗಲಿದೆ ಎಂದರು.
ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಎಚ್ ಡಿ . ಕೆ. ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಕಾರ್ಖಾನೆಯನ್ನು ಖಾಸಗಿಯವರಿಗೆ ಗುತ್ತಿಗೆಗೆ ನೀಡಲು ಪ್ರಕ್ರಿಯೆ ಆರಂಭಿಸಿದ್ದು ಅನಂತರ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್. ಯಡಿಯೂರಪ್ಪನವರು ಮತ್ತು ಪ್ರಸ್ತುತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಎಲ್ಲಾ ಸಹಕಾರ ನೀಡಿದ್ದಾರೆ ಎಂದು ಕೃತಜ್ಞತೆ ವ್ಯಕ್ತಪಡಿಸಿದರು.
ಕಾರ್ಖಾನೆ ಆರಂಭಿಸಿ ಅನಂತರ ಸ್ಥಳೀಯರಿಗೆ ಉದ್ಯೋಗದಲ್ಲಿ ಅವಕಾಶ ನೀಡುವುದರ ಜೊತೆಗೆ ಕಬ್ಬು ಬೆಳೆಗಾರರ ಹಿತ ಕಾಪಾಡಲು ಆಡಳಿತ ಮಂಡಳಿ ಮೊದಲ ಆದ್ಯತೆ ನೀಡುವದರೊಂದಿಗೆ ಕಾಲ ಕಾಲಕ್ಕೆ ನನಗೆ ಕಾರ್ಖಾನೆಯ ಅಭಿವೃದ್ಧಿ ಮತ್ತು ಸ್ಥಿತಿ ಗತಿಗಳ ಬಗ್ಗೆ ವರದಿ ನೀಡಬೇಕೆಂದು ಶಾಸಕರು ಆದೇಶಿಸಿದರು.
ಆ ನಂತರ ಶಾಸಕರು ಕಾರ್ಖಾನೆಯ ಎಲ್ಲಾ ವಿಭಾಗಗಳನ್ನು ಪರಿಶೀಲಿಸಿ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ಸಲಹೆ ಮತ್ತು ಸೂಚನೆ ನೀಡಿದರಲ್ಲದೆ ಯಾವುದೇ ಸಮಸ್ಯೆ ಮತ್ತು ದೂರುಗಳಿದ್ದರೆ ತಕ್ಷಣ ನನಗೆ ವರದಿ ನೀಡಬೇಕೆಂದರು.
ಈ ಸಂದರ್ಭದಲ್ಲಿ ನಿರಾಣಿ ಶುಗರ್ ಮುಖ್ಯಸ್ಥ ಯರಗಟ್ಟಿ, ಪ್ರಧಾನ ವ್ಯವಸ್ಥಾಪಕ ಬೋರೇಗೌಡ, ಮುಖ್ಯ ಎಂಜಿನಿಯರ್ ನಾಗೈಗೌಡ, ಕಬ್ಬು ಅಭಿವೃದ್ಧಿ ಅಧಿಕಾರಿ ರವಿಚಂದ್ರನ್, ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಷಿ ಚಂದ್ರಶೇಖರ್ ಜಿ.ಪಂ. ಮಾಜಿ ಸದಸ್ಯ ಎಂ. ಟಿ. ಕುಮಾರ್, ಟಿಎಪಿಸಿಎಂಎಸ್ ಮಾಜಿ ನಿರ್ದೇಶಕ ಎಸ್. ಟಿ. ಕೀರ್ತಿ ಮತ್ತು ಇತರ ರೈತ ಮುಖಂಡರು ಹಾಗೂ ಕಾರ್ಖಾನೆ ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.