ಹಂದಿಜೋಗಿ ಕಾಲೋನಿಗೆ ಎಂಎಲ್ಸಿ ವಿಶ್ವನಾಥ್ ಭೇಟಿ ಸೌಲಭ್ಯ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ


Team Udayavani, Jan 30, 2022, 1:43 PM IST

ಹಂದಿಜೋಗಿ ಕಾಲೋನಿಗೆ ಎಂಎಲ್ಸಿ ವಿಶ್ವನಾಥ್ ಭೇಟಿ ಸೌಲಭ್ಯ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ

ಪಿರಿಯಾಪಟ್ಟಣ: ನೂರಾರು ವರಷಗಳಿಂದ ಪಟ್ಟಣದ ಹೃದಯ ಬಾಗದಲ್ಲಿ ನೆಲೆಸಿರುವ ಹಂದಿಜೋಗಿಗಳ ಕಾಲೋನಿಗೆ ಮೂಲಭೂತ  ಸೌಲಭ್ಯಗಳನ್ನು ನೀಡದೆ ನಿರ್ಲಕ್ಷ್ಯ ಮಾಡಿರುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಯೊಂದಿಗೆ ಮಾತನಾಡುವುದಾಗಿ ವಿಧಾನ ಪರಿಷತ್ ಸದಸ್ಯ ಎ.ಹೆಚ್.ವಿಶ್ವನಾಥ್ ತಿಳಿಸಿದರು.

ಪಟ್ಟಣದ ಹಂದಿಜೋಗಿಗಳ ಕಾಲೋನಿಗೆ ಭೇಟಿ ನೀಡಿ ಅಲ್ಲಿನ ಜನರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಆಲಿಸಿ ಮಾತನಾಡಿದರು.

ಸರ್ಕಾರ ಪರಿಶಿಷ್ಟ ಜಾತಿ ಮತ್ತು ವರ್ಗ ಸೇರಿದಂತೆ ಅಲೆಮಾರಿ ಅರೆ ಅಲೆಮಾರಿ ಎಂಬ ಅತೀ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿಗಾಗಿ ಸಾವಿರಾರು ಕೋಟಿ ರೂ. ಅನುದಾನ ಮೀಸಲಿಟ್ಟಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಂಬಂಧಪಟ್ಟವರಿಗೆ ಅವು ತಲುಪುತ್ತಿಲ್ಲ,  ಹಾಗಾಗಿ ಈ ಸಮುದಾಯಗಳು ನಿರ್ಗತಿಕರಾಗಿ ಪ್ರಾಣಿಗಳಿಗಿಂತ ಹೀನಾಯ ಸ್ಥಿತಿಯಲ್ಲಿ ಜೀವಿಸಬೇಕಾಗಿದೆ. ಇದು ನಿಜಕ್ಕೂ ಕೂಡ ನಾಗರಿಕ ಸಮಾಜ ತಲೆತಗ್ಗಿಸುವ ಸಂಗತಿ. ಶಿಕ್ಷಣದಿಂದ ವಂಚಿತವಾಗಿರುವ ಹಂದಿಜೋಗಿಗಳ ಸಮುದಾಯ ಹಂದಿಸಾಕಣೆ ಮತ್ತು ಛತ್ರಗಳಲ್ಲಿ ಹೆಂಜಲು ಬಾಚಿ ಜೀವನ ಸಾಗಿಸುತ್ತಿವೆ. ಇಂಥ ಸೂಕ್ಷ್ಮ ಸಮುದಾಯಕ್ಕೆ ಅರಿವಿನ ಕೊರತೆ ಇದ್ದು, ಇವರನ್ನು ನಾಗರಿಕ ಸಮಾಜದೆಡೆಗೆ ಕೊಂಡೊಯ್ಯಬೇಕಾದ್ದು ಅಧಿಕಾರಿಗಳ ಜವಾಬ್ದಾರಿ ಆದರೆ ಅಧಿಕಾರಿಗಳು ಇವರಲ್ಲಿ ಜಾಗೃತಿ ಮೂಡಿಸದೆ ಅಕ್ರಮ ದಾಖಲೆಗಳನ್ನು ಸೃಷ್ಠಿಸಿ ಖಾಸಗಿ ವ್ಯಕ್ತಿಗಳು, ಭೂಗಳ್ಳರು ಮತ್ತು ರಾಜಕೀಯ ಪುಡಾರಿಗಳ ಒತ್ತಡಕ್ಕೆ ಮಣಿದು ಹಂದಿಜೋಗಿಗಳನ್ನು ಸ್ಥಳಾಂತರ ಮಾಡಿಸುವ ಹುನ್ನಾರ ಮಾಡುತ್ತಿರುವುದು ಕೇಳಿ ಬಂದಿದ್ದು, ಇದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಯಾವ ವ್ಯಕ್ತಿ ಒಂದು ಜಾಗದಲ್ಲಿ 12 ವರ್ಷಗಳ ಕಾಲ ನೆಲೆಸಿರುತ್ತಾನೋ ಅವನಿಗೆ ಈ ಜಾಗದ ಮೇಲೆ ಸಂಪೂರ್ಣ ಅಧಿಕಾರವಿರುತ್ತದೆ ಎಂದರು.

ಸ್ಲಂ ಬೋರ್ಡ್ ಕೂಡ ಇಂಥ ಅಸಹಾಯಕರಿಗೆ ನೆರವಾಗಲು ಹಾಗೂ ಅನುದಾನ ಮೀಸಲಿಟ್ಟಿದೆ ಆದ್ದರಿಂದ ಇಲ್ಲಿನ ನಿವಾಸಿಗಳು ಯಾರ ಒತ್ತಡಕ್ಕೂ ಮಣಿಯುವುದುಬೇಡ, ಈ ವಿಷಯವನ್ನು ಪೌರಾಡಳಿತ ಇಲಾಖೆಯ ಜೊತೆ ಚರ್ಚಿಸಿ, ಕೂಡಲೇ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲು ಏರ್ಪಾಡು ಮಾಡುತ್ತೇನೆ. ಇಲ್ಲಿನ ತಹಶೀಲ್ದಾರ್ ಹಾಗೂ ಪುರಸಭಾ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕೂಡಲೇ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ ಯಾರೂ ಜಾಗ ಬಿಟ್ಟು ಕದಲಬೇಡಿ ಎಂದರು.

ಹಂದಿಜೋಗಿ ಸಮಾಜದ ಹೋರಾಟಗಾರ್ತಿ ನಾಗಮಣಿ ಮಾತನಾಡಿ ಅನೇಕ ದಶಕಗಳಿಂದ ಈ ಸ್ಥಳದಲ್ಲಿ ನಮ್ಮ ಹಿರಿಯರು ವಾಸವಾಗಿದ್ದರೂ ಅವರಿಗೂ ಇಲ್ಲಿನ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಯಾವ ಸೌಲಭ್ಯಗಳನ್ನು ಕಲ್ಪಿಸಲು ಮುಂದೆ ಬರಲಿಲ್ಲ, ಸರ್ಕಾರದಲ್ಲಿ ನಮಗೆ  ಅನುದಾನ ಮೀಸಲಿಟ್ಟಿದ್ದರೂ ಅದು ಬಾಯಿ ಮಾತಿಗೆ ಮಾತ್ರ ಸೀಮಿತವಾಗಿದೆ ಕಾರ್ಯರೂಪಕ್ಕೆ ಇನ್ನೂ ಬಂದಿಲ್ಲ, ಎಲ್ಲಾ ನಾಗರಿಕರಂತೆ ನಾವು  ಸಮನಾವಾಗಿ ಸ್ವಾವಲಂಬಿಗಳಾಗಿ ಬದುಕಲು ಅವಕಾಶ ಕಲ್ಪಿಸದೆ ಇಲ್ಲಿನ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ  ಜೊತೆ ಸೇರಿ ನಮ್ಮನ್ನು ಜಾಗ ಖಾಲಿ ಮಾಡಿಸಲು ಹುನ್ನಾರ ಮಾಡುತ್ತಿದ್ದಾರೆ ಜಿಲ್ಲಾಧಿಕಾರಿಗಳು ನಮಗೆ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿದರು.

ಹಂದಿಜೋಗಿ ಸಮಾಜದ ಮುಖಂಡ ಯೋಗೇಶ್ ಮಾತನಾಡಿ ಮನುಷ್ಯರು ಮತ್ತು ಹಂದಿಗಳು ನಡೆಸುತ್ತಿರುವ ಬದುಕಿಗೆ ವ್ಯತ್ಯಾಸವೇ ಇಲ್ಲದಂತಾಗಿದೆ ಹಂದಿ ಮಲಗುವ ಜಾಗದಲ್ಲಿ ನಾವು ಮಲಗುವಂತಾಗಿದೆ. ಕೆರೆ ಅಂಗಳದಲ್ಲಿ ನೀರು ಬಂದಾಗ ಗೋಳಾಟ ಒಂದೆಡೆಯಾದರೆ, ಗುಡಿಸಲುಗಳಲ್ಲಿ ಅನೇಕ ವಿಷ ಜಂತುಗಳು ಕಚ್ಚಿ ಸಾವನ್ನಪ್ಪಿರುವ, ಬೆಂಕಿಗೆ ಆಹುತಿಯಾಗಿರುವ ಘಟನೆಗಳು ಇದ್ದರೂ ಸಹ ಯಾರೊಬ್ಬರೂ ಇತ್ತ ಗಮನ ಹರಿಸುತ್ತಿಲ್ಲ. ಈ ನೆಲದಲ್ಲಿ ನೆಲೆಸಲು ಬಿಡದೆ ನಮಗೆ ಕಿರುಕುಳ ನೀಡುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ದಸಂಸ ಮುಖಂಡ ಹುಣಸೂರು ಕುಮಾರ್, ಸಂಗೊಳ್ಳಿ ರಾಯಣ್ಣ ಯುವ ಗರ್ಜಗೆ ಸಂಘಟನೆಯ ರಾಜ್ಯ ಉಪಾಧ್ಯಕ್ಷ ನೆರಲೆಕುಪ್ಪೆ ನವೀನ್, ಹಂದಿಜೋಗಿ ಸಮಾಜದ ಮುಖಂಡರಾದ ರಮೇಶ್, ವೆಂಕಟೇಶ್, ಯೋಗೇಶ್, ಶೇಖರ್, ವೆಂಕಟಸ್ವಾಮಿ, ಅಪ್ಪಣ್ಣ, ಶೇಖರ್, ರಾಜು, ರವಿ, ಚೈತ್ರ, ಲಕ್ಷ್ಮಿ, ಸಿದ್ದಮ್ಮ, ಶಾಂತಮ್ಮ, ವೆಂಕಟಮ್ಮ, ಮಂಜಿ, ತ್ರಿವೇಣಿ, ಎಲ್ಲಪ್ಪ, ಸ್ವಾಮಿ ಸೇರಿದಂತೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

2

Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.