ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ರಾಜಿನಾಮೆ
ಏನು ಕೆಲಸ ಮಾಡಿಲ್ಲ ಎಂಬ ಬಣ್ಣ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಸಿಂಧೂರಿ ವಿರುದ್ಧ ಶಿಲ್ಪಾನಾಗ್ ಆರೋಪ
Team Udayavani, Jun 3, 2021, 6:05 PM IST
ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಸುದ್ದಿಗೋಷ್ಠಿಯಲ್ಲಿ ಕಣ್ಣೀರು ಹಾಕಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿರುವುದಾಗಿ ತಿಳಿಸಿದ್ದಾರೆ.
ಏನು ಕೆಲಸ ಮಾಡಿಲ್ಲ ಎಂಬ ಬಣ್ಣ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಸಿಂಧೂರಿ ವಿರುದ್ಧ ಅವರು ಆರೋಪಿಸಿದ್ದಾರೆ. ಸಿಟಿಗೆ ಒಂದು ಮಾನದಂಡ, ಗ್ರಾಮಾಂತರಕ್ಕೆ ಒಂದು ಮಾನದಂಡ ಮಾಡಿದ್ದಾರೆ. ಸಿಟಿಯಲ್ಲಿ ಕಮಿಷನರ್ ವಿಫಲವಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಈ ರೀತಿ ಹೇಳುತ್ತಿದ್ದಾರೆ.
ಇದನ್ನೂ ಓದಿ : ಊರಿನ ಜನರನ್ನು ಭಯ ಹುಟ್ಟಿಸಿದ್ದ ಚಿರತೆ : ಡ್ರೋನ್ ಕ್ಯಾಮರಾ ಕಣ್ಣಿಗೂ ಸೆರೆಯಾಗಿಲ್ಲ
ಏನೂ ಕೆಲಸ ಮಾಡಿಲ್ಲ ಎಂಬ ಬಣ್ಣ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಡಳಿತದಿಂದ ನಮಗೆ ಯಾವುದೇ ಸಹಕಾರ ದೊರೆತಿಲ್ಲ ಎಂದು ಆಯುಕ್ತೆ ಶಿಲ್ಪಾನಾಗ್, ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಇನ್ನು, ಸಿ ಎಸ್ ಆರ್ ಫಂಡ್ ನಿಂದ ನಾವು ಕೆಲಸ ಮಾಡುತ್ತಿದ್ದೇವೆ. ಎಲ್ಲರಿಗೂ ಒಂದು ಸಹನೆ ಇರುತ್ತದೆ, ಸಹನೆ ಒಡೆದಾಗ ಏನು ಮಾಡಬೇಕು..? ಒಬ್ಬರು ಐಎಎಸ್ ಅಧಿಕಾರಿಯಾಗಿ ಮತ್ತೊಬ್ಬ ಅಧಿಕಾರಿ ಮೇಲೆ ದಬ್ಬಾಳಿಕೆ ಮಾಡುವುದು ಎಷ್ಟು ಸರಿ ಎಂದು ಅಸಮಾಧಾನ ಹೊರ ಹಾಕಿದ್ದಾರೆ.
ನನ್ನನ್ನ ತುಳಿಯುವ ವ್ಯವಸ್ಥಿತ ಪಿತೂರಿ ನಡೆದಿದೆ. ಅವರ ಈಗೋದಿಂದ ನಾವು ಮಾಡುವ ಕೆಲಸಕ್ಕೆ ಮನ್ನಣೆ ಸಿಗುತ್ತಿಲ್ಲ. ಮಾಧ್ಯಮಗಳಲ್ಲಿ ಪಾಲಿಕೆ ಚೆನ್ನಾಗಿ ಕೆಲಸ ಮಾಡುತ್ತಿದೆ ಎಂಬ ವರದಿ ಬಂದ ಹಿನ್ನೆಲೆ ನನ್ನನ್ನು ಟಾರ್ಗೆಟ್ ಮಾಡಲಾಗಿದೆ. ನನಗೆ ಕೆಲಸ ಮಾಡುವ ಆಸಕ್ತಿಯೇ ಇಲ್ಲದಂತಾಗಿದೆ ಎಂದು ಶಿಲ್ಪಾನಾಗ್ ಬೇಸರದಿಂದ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ದೆಹಲಿಯಲ್ಲಿ 1,044 ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆ, 89 ಮಂದಿ ಸಾವು: ಸಚಿವ ಜೈನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.