ಮೋದಿ ಸರ್ಕಾರಕ್ಕೆ 3 ವರ್ಷ: ಬಿಜೆಪಿ ಸಂಭ್ರಮ
Team Udayavani, May 27, 2017, 1:16 PM IST
ಮೈಸೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಾರ್ವಜನಿಕರಿಗೆ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಇಟ್ಟಿಗೆಗೂಡಿನಲ್ಲಿರುವ ನಗರ ಬಿಜೆಪಿ ಕಾರ್ಯಾಲಯದ ಮುಂದೆ ಜಮಾಯಿಸಿ ಪ್ರಧಾನಿ ನರೇಂದ್ರ ಮೋದಿ ಪರ ಜೈಕಾರ ಕೂಗಿ ಸಂಭ್ರಮ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಗರ ಬಿಜೆಪಿ ಅಧ್ಯಕ್ಷ ಡಾ.ಬಿ.ಎಚ್.ಮಂಜುನಾಥ್, ಹಿಂದುಳಿದವರು, ದಲಿತರ ಏಳಿಗೆಗಾಗಿ ನೂರಾರು ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ದೇಶದಲ್ಲಿ ಸಮಾನತೆಯನ್ನು ತೋರಿಸಿಕೊಟ್ಟವರು ಪ್ರಧಾನಿ ನರೇಂದ್ರ ಮೋದಿ ಎಂದು ಬಣ್ಣಿಸಿದರು.
ಗಡಿ ರಕ್ಷಣೆಗೆ ಕೊಟ್ಟಷ್ಟೆ ಮಹತ್ವವನ್ನು ಜನರ ಕಲ್ಯಾಣಕ್ಕೂ ಕೊಟ್ಟಿದ್ದರಿಂದ ಜನಸಾಮಾನ್ಯರು ನರೇಂದ್ರ ಮೋದಿ ಮೇಲೆ ಅತ್ಯಂತ ವಿಶ್ವಾಸವಿರಿಸಿದ್ದಾರೆ. ಭಾರತಕ್ಕೆ ವಿಶ್ವದಲ್ಲಿ ಮಾನ್ಯತೆ ದೊರಕುವಂತೆ ಮಾಡಿದ್ದಲ್ಲದೆ, ಸ್ವತ್ಛ ಭಾರತಕ್ಕೆ ಕರೆ ಕೊಡುವ ಮೂಲಕ ದೇಶದ ಕೆಲಸಕ್ಕೆ ಎಲ್ಲರೂ ಕೈಜೋಡಿಸುವಂತೆ ಮಾಡಿದರು.
ಅಪನಗದೀಕರಣದ ಮೂಲಕ ಭ್ರಷ್ಟಾಚಾರಕ್ಕೆ ತಡೆ, ಬಡವರಿಗೆ ಜನಧನ ಯೋಜನೆ ಜಾರಿಗೊಳಿಸಿದರು. ಪಾಕಿಸ್ತಾನಕ್ಕೆ ಸರ್ಜಿಕಲ್ ಸ್ಟ್ರೈಕ್ ಮೂಲಕ ಎಚ್ಚರಿಕೆ ನೀಡಿದ ಮೋದಿ ಅವರು ಯಶಸ್ವಿಯಾಗಿ ಐದು ವರ್ಷ ಪೂರೈಸಿ, ಮುಂಬರುವ ಚುನಾವಣೆಯಲ್ಲೂ ಸರ್ಕಾರ ರಚನೆ ಮಾಡಲಿ ಎಂಬುದು ಭಾರತೀಯರೆಲ್ಲರ ಸಂಕಲ್ಪವಾಗಿದೆ ಎಂದರು.
ಈ ವೇಳೆ ವಿಧಾನ ಪರಿಷತ್ ಮಾಜಿ ಸದಸ್ಯ ತೋಂಟದಾರ್ಯ, ಉಪ ಮೇಯರ್ ರತ್ನ ಲಕ್ಷ್ಮಣ್, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಫಣೀಶ್, ಸತೀಶ್, ಮೈ.ಪು.ರಾಜೇಶ್, ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಬಿ.ಪಿ.ಮಂಜುನಾಥ್ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.