ಸಂಸದ ಅನಂತಕುಮಾರ್ ಹೆಗಡೆ ವಜಾಕ್ಕೆ ಒತ್ತಾಯ
Team Udayavani, Dec 27, 2017, 5:05 PM IST
ಮೈಸೂರು: ಸಂವಿಧಾನದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರನ್ನು ಸಂಸದ ಹಾಗೂ ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ಮೈಸೂರು ನಗರ(ಜಿಲ್ಲಾ) ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ವಿಶ್ವಜಾnನಿ ಅಂಬೇಡ್ಕರ್ ಅವರು ಇಡೀ ವಿಶ್ವಕ್ಕೆ ಮಾದರಿಯಾದ ಸಂವಿಧಾನವನ್ನು ಭಾರತಕ್ಕೆ ಅರ್ಪಣೆ ಮಾಡಿದ್ದಾರೆ. ಇದರಿಂದಾಗಿ ಭಾರತ ಜಾಗತಿಕ ಮಟ್ಟದಲ್ಲಿ ಹಿರಿಮೆ ಪಡೆಯುವಂತೆ ಮಾಡಿದೆ. ಆದರೆ, ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರು ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ನಿಟ್ಟಿನಲ್ಲಿ ದೇಶದ ಸಂವಿಧಾನ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡುವ ಮೂಲಕ ಸಮಾಜವನ್ನು ದಿಕ್ಕುತಪ್ಪಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರನ್ನು ಕೇವಲ ಒಂದು ಕೋಮಿಗೆ ಸೀಮಿತಗೊಳಿಸಿ, ಭಾವನಾತ್ಮಕವಾಗಿ ಪ್ರಚೋದಿಸುವ ಪಟ್ಟಭದ್ರ ಹಿತಾಸಕ್ತರು ಕೋಮು ಭಾವನೆಗೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆಂದು ದೂರಿದರು.
ಭಾರತದ ಸಂವಿಧಾನದ ಕುರಿತು ಪ್ರಚೋದನೆಕಾರಿಯಾಗಿ ಕೀಳುಮಟ್ಟದ ಹೇಳಿಕೆ ನೀಡಿರುವ ಸಚಿವ ಅನಂತಕುಮಾರ್ ಹೆಗಡೆ ಅವರನ್ನು ಗಡಿಪಾರು ಮಾಡಿ, ಸಂಸದ ಮತ್ತು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಮನವಿ ಮಾಡಿದರು.
ಮಾಜಿ ಮೇಯರ್ ಪುರುಷೋತ್ತಮ್, ಜಿಲ್ಲಾಧ್ಯಕ್ಷ ಆರ್.ಸುನಂದಕುಮಾರ್, ನಾರಾಯಣಸ್ವಾಮಿ, ಭಾಸ್ಕರ್, ಜಗದೀಶ್, ನರಸಿಂಹ, ಉದಯಕುಮಾರ್, ಇಂದಿರಾ, ಶೋಭಾ, ಜಯಪ್ರಭಾ, ರಮೇಶ್, ರಾಣಿಪ್ರಭಾ, ಬಿ.ಪ್ರಕಾಶ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್; ಮಹಿಳೆಯರು ಸೇರಿ ಹಲವರ ಸಾವು
Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ
Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!
Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.