ಭಕ್ತರೇ ಸೂಕ್ತವಾದ ವಸ್ತ್ರ ಧರಿಸಿ ದೇಗುಲಕ್ಕೆ ಬನ್ನಿ
Team Udayavani, Dec 28, 2022, 1:55 PM IST
ಮೈಸೂರು: ಸರ್ಕಾರ ಕಟ್ಟುಪಾಡು ಜಾರಿಗೆ ತಂದು ಅನುಷ್ಠಾನಗೊಳಿಸುವ ಬದಲಿಗೆ, ಭಕ್ತರೇ ಸೂಕ್ತವಾದ ವಸ್ತ್ರ ಧರಿಸಿ ಚಾಮುಂಡೇಶ್ವರಿ ದೇಗುಲಕ್ಕೆ ಬನ್ನಿ ಎಂದು ಸಂಸದ ಪ್ರತಾಪ್‌ಸಿಂಹ ಮನವಿ ಮಾಡಿದರು.
ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರುವ ವಿಚಾರವನ್ನು ಸಾರ್ವಜನಿಕರು ಹಲವು ಬಾರಿ ನನ್ನ ಗಮನಕ್ಕೂ ತಂದಿದ್ದಾರೆ. ಕೇರಳದಲ್ಲಿ ಯಾವುದೇ ದೇವಸ್ಥಾನಕ್ಕೆ ಹೋದರೂ ಮಹಿಳೆಯರು ಕಡ್ಡಾಯವಾಗಿ ಸೀರೆ, ಪುರುಷರು ಪಂಚೆ, ಶಲ್ಯ ಧರಿಸಿರಬೇಕು ಎಂಬ ನಿಯಮವಿದೆ. ಹೀಗೆ ಸಾಂಪ್ರದಾಯಿಕ ಉಡುಗೆ ತೊಟ್ಟು ಭಕ್ತಿಯಿಂದ ಚಾಮುಂಡೇಶ್ವರಿ ದರ್ಶನ ಪಡೆಯಬೇಕೆಂದು ಸಂಘಟನೆಗಳು ನಡೆಸುತ್ತಿರುವ ಅಭಿಯಾನಕ್ಕೆ ನನ್ನ ಸಹಮತವಿದೆ. ಕಾನೂನಿನ ಮೂಲಕ ಇದನ್ನು ಅನುಷ್ಠಾನಗೊಳಿಸುವ ಬದಲಿಗೆ ಭಕ್ತರೇ ಆಚರಣೆಗೆ ತಂದರೆ ಸೂಕ್ತ ಎಂದರು.
ಚೀನಾದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿರುವುದಕ್ಕೆ ನಾವು ಭಯ ಪಡುವ ಅಗತ್ಯವಿಲ್ಲ. ಚೀನಾದಲ್ಲಿ ಕೋವಿಡ್ ಹೆಚ್ಚಾದ ಮಾತ್ರಕ್ಕೆ ಇಲ್ಲಿಗೆ ಭೂತ ಬಂತು ಭೂತ ಎನ್ನುವ ಕತೆ ಬೇಡ. ಚೀನಾದಲ್ಲಿನ ಪರಿಸ್ಥಿತಿಯೇ ಬೇರೆ, ನಮ್ಮ ಪರಿಸ್ಥಿತಿಯೇ ಬೇರೆ. ಚೀನಾದಲ್ಲಿ ಏನಾಗುತ್ತಿದೆ ಎಂದು ಯಾರಿಗೂ ತಿಳಿಯುತ್ತಿಲ್ಲ. ಕೋವಿಡ್ ನಿಭಾಯಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಎರಡು ವರ್ಷಗಳ ಅನುಭವವಿದೆ. ಪ್ರಧಾನಿ ನರೇಂದ್ರ ಮೋದಿಯವರು ಎಲ್ಲ ದೇಶಗಳಿಗಿಂತ ಮೊದಲೇ ಸ್ವದೇಶಿ ತಯಾರಿತ ಕೋವಿಡ್ ವ್ಯಾಕ್ಸಿನ್ ಕೊಡಿಸಿದ್ದರಿಂದ ಜನರು ಅಪಾಯದಿಂದ ಪಾರಾಗಿದ್ದಾರೆ. ಕೋವಿಡ್ ವಿಚಾರದಲ್ಲಿ ಯಾವುದೇ ಪರಿಸ್ಥಿತಿ ಎದುರಾದರೂ ಅದನ್ನು ನಿಭಾಯಿಸಲು ಕೇಂದ್ರ ಸರ್ಕಾರ ಸಜ್ಜಾಗಿದೆ. ಇದರಲ್ಲಿ ಅನಗತ್ಯವಾಗಿ ಯಾವುದೇ ರೀತಿಯ ಆತಂಕ ಬೇಡ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.