ಕೇಂದ್ರ ಯೋಜನೆ ಪ್ರಗತಿ ಪರಶೀಲಿಸಿದ ಸಂಸದ ಪ್ರತಾಪ್‌


Team Udayavani, Feb 25, 2018, 12:23 PM IST

m1-kendra.jpg

ಮೈಸೂರು: ನಗರದಲ್ಲಿ ಕೇಂದ್ರ ಪುರಸ್ಕೃತ ಅಮೃತ್‌ ಯೋಜನೆಯಡಿ ವಿಜಯನಗರದಲ್ಲಿ ನಿರ್ಮಿಸುತ್ತಿರುವ ಕೇಂದ್ರ ಜಲಸಂಗ್ರಹಾಗಾರದ ಕಾಮಗಾರಿಯನ್ನು ಸಂಸದ ಪ್ರತಾಪ್‌ ಸಿಂಹ ಪರಿಶೀಲಿಸಿದರು.

ಅಧಿಕಾರಿಗಳೊಂದಿಗೆ ಶನಿವಾರ ಮೈಸೂರಿನಲ್ಲಿ ನರ್ಮ್ ಯೋಜನೆಯಲ್ಲಿ ಹಿನಕಲ್‌ ವೃತ್ತದಲ್ಲಿ ಕೈಗೊಳ್ಳಲಾಗಿರುವ ಗ್ರೇಡ್‌ ಸಪರೇಟರ್‌ ಕಾಮಗಾರಿ ಹಾಗೂ ಅಮೃತ್‌ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.

ವಿವಿಧ ಇಲಾಖೆಗಳ ಅಧಿಕಾರಿಗಳು ಅಂಕಿ-ಅಂಶ ಸಮೇತ ವಿವರಣೆ ನೀಡಿದರು. ನಗರದ ಪ್ರಸ್ತುತ ಜನಸಂಖ್ಯೆಯು ಸುಮಾರು 11,65,000 ಇದ್ದು, ಇಷ್ಟು ಜನಸಂಖ್ಯೆಗೆ ಒಟ್ಟು 227 ಎಂಎಲ್‌ಡಿ ಕುಡಿಯುವ ನೀರಿನ ಅಗತ್ಯವಿದೆ. ಹಳ್ಳಿಗಳು, ಮುಡಾ ಬಡಾವಣೆಗಳನ್ನು ಹೊರತುಪಡಿಸಿ ನಗರಕ್ಕೆ ಪ್ರಸ್ತುತ 230 ಎಂಎಲ್‌ಡಿ ಪ್ರಮಾಣದಷ್ಟು ಕುಡಿಯುವ ನೀರು ಸರಬರಾಜಾಗುತ್ತಿದೆ ಎಂದರು.

ಅಮೃತ್‌ ವಿನ್ಯಾಸ: 2021ನೇ ಇಸವಿ ವೇಳೆಗೆ ಮೈಸೂರು ನಗರದ ಜನಸಂಖ್ಯೆ 13,43,000 ಆಗಬಹುದೆಂದು ಅಂದಾಜಿಸಲಾಗಿದೆ. ಇದಕ್ಕಾಗಿ ಅಮೃತ್‌ ಯೋಜನೆಯನ್ನು 2021ಕ್ಕೆ ವಿನ್ಯಾಸಗೊಳಿಸಬೇಕಾಗಿದ್ದು, 261 ಎಂಎಲ್‌ಡಿ ನೀರಿನ ಅವಶ್ಯಕತೆ ಇದೆ.

ಈ ಪೈಕಿ ಕೇಂದ್ರ ಸರ್ಕಾರ ಶೇ.50 (78 ಕೋಟಿ), ರಾಜ್ಯ ಸರ್ಕಾರ ಶೇ.20 (31.20 ಕೋಟಿ), ನಗರಪಾಲಿಕೆ ಶೇ.30 (46.80 ಕೋಟಿ) ಸೇರಿದಂತೆ ಯೋಜನೆಯಡಿ ಕುಡಿಯುವ ನೀರು ಸರಬರಾಜಿನ ಕಾಮಗಾರಿಗಳಿಗೆ 156 ಕೋಟಿ ಅಂದಾಜು ವೆಚ್ಚ ನಿಗದಿಪಡಿಸಲಾಗಿದೆ.

ಈ ಯೋಜನೆಯಡಿ 57.65 ಕೋಟಿ ರೂ. ವೆಚ್ಚದಲ್ಲಿ ಮೇಳಾಪುರ ನೀರು ಸರಬರಾಜು ಯೋಜನೆ, 2.99 ಕೋಟಿ ರೂ. ವೆಚ್ಚದಲ್ಲಿ ಹೊಂಗಳ್ಳಿ 2ನೇ ಹಂತದ ನೀರು ಸರಬರಾಜು ಯೋಜನೆ, 51.01 ಕೋಟಿ ರೂ. ವೆಚ್ಚದಲ್ಲಿ ಹೊಂಗಳ್ಳಿ 3ನೇ ಹಂತದ ನೀರು ಸರಬರಾಜು ಯೋಜನೆ, 1.90 ಕೋಟಿ ರೂ. ವೆಚ್ಚದಲ್ಲಿ ಬೆಳಗೊಳ ನೀರು ಸರಬರಾಜು ಯೋಜನೆ,

25.80 ಕೋಟಿ ರೂ. ವೆಚ್ಚದಲ್ಲಿ ಮೈಸೂರಿನ ವಿಜಯನಗರ 2ನೇ ಹಂತದ ಕೇಂದ್ರ ಜಲಸಂಗ್ರಹಾಗಾರದಲ್ಲಿ 26 ಎಂಎಲ್‌ಡಿ ಸಾಮರ್ಥ್ಯದ ಜಲಸಂಗ್ರಹಾಗಾರಗಳ ನಿರ್ಮಾಣ ಹಾಗೂ ಹಳೆಯ 4 ಎಂಜಿ ಮತ್ತು 6 ಎಂಜಿ ಸಾಮರ್ಥ್ಯದ ಜಲಸಂಗ್ರಹಾರಗಳ ದುರಸ್ತಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

5.99 ಕೋಟಿ ರೂ. ವೆಚ್ಚದಲ್ಲಿ ಎತ್ತರದ ಜಲಸಂಗ್ರಹಾಗಾರ ವ್ಯಾಪ್ತಿಯ ಪ್ರದೇಶಗಳಲ್ಲಿನ ಅಭಿವೃದ್ಧಿ ಕಾಮಗಾರಿಗಳು, 1.60 ಕೋಟಿ ರೂ. ವೆಚ್ಚದಲ್ಲಿ ಸರಸ್ವತಿಪುರಂ 10 ಲೀಟರ್‌ ಸಾಮರ್ಥ್ಯದ ಮೇಲ್ಮಟ್ಟದ ಜಲ ಸಂಗ್ರಹಾಗಾರ ನಿರ್ಮಾಣ, 9.06 ಕೋಟಿ ರೂ. ವೆಚ್ಚದಲ್ಲಿ ಕಬಿನಿ ನೀರು ಸರಬರಾಜು ಯೋಜನೆಗೆ ಹೆಚ್ಚುವರಿ ಪಂಪುಗಳ ಅಳವಡಿಕೆ ಮಾಡಲಾಗುತ್ತಿದೆ.

ವಿಜಯನಗರದಲ್ಲಿರುವ ಕೇಂದ್ರ ಜಲ ಸಂಗ್ರಹಾಗಾರದಲ್ಲಿ 27.27 ಕೋಟಿ ರೂ. ವೆಚ್ಚದಲ್ಲಿ ಹೊಸ 26 ಎಂಎಲ್‌ಡಿ ಸಾಮರ್ಥ್ಯದ ಜಲ ಸಂಗ್ರಹಾಗಾರ ನಿರ್ಮಾಣ ಹಾಗೂ ಹಳೆ 4 ಎಂಜಿ ಮತ್ತು 6 ಎಂಜಿ ಜಲಸಂಗ್ರಹಾಗಾರಗಳ ದುರಸ್ತಿ ಕಾಮಗಾರಿಯನ್ನು ಹೈದ್ರಬಾದ್‌ ಮೂಲದ ಮೆ.ಡಿ.ಆರ್‌.ಎಸ್‌. ಇನಾ#†ಟೆಕ್‌ ಲಿ. ಕಂಪನಿಗೆ ವಹಿಸಿದೆ. ಈ ಕಾಮಗಾರಿಯಲ್ಲಿ 4 ಎಂ.ಜಿ. ಜಲ ಸಂಗ್ರಹಾಗಾರದ ದುರಸ್ತಿ ಕಾರ್ಯ ಮುಗಿದಿದ್ದು, ಫೆ.28ಕ್ಕೆ ಕಾರ್ಯಗತಗೊಳಿಸಲಾಗುವುದು.

ಇನ್ನುಳಿದ ಮೇಳಾಪುರ, ಹೊಂಗಳ್ಳಿ, ಬೆಳಗೊಳ,ಮತ್ತು ಕಬಿನಿ ನೀರು ಸರಬರಾಜು ಯೋಜನೆಗಳ 112.74 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳನ್ನು ಹೈದ್ರಬಾದ್‌ನ ಮೆ.ಪೂಚಮ್‌ಪಾಡ್ಡ್ ಕನ್ಸ$óಕ್ಷನ್‌ ಕಂ.ಲಿ ಗೆವಹಿಸಿದ್ದು, ಈ ಕಾಮಗಾರಿ ಪ್ರಗತಿಯಲ್ಲಿದೆ.

ಬಾಕಿ ಉಳಿದಿರುವ 66 ಕೆ.ವಿ ಸಾಮರ್ಥ್ಯದ ಸಬ್‌ ಸ್ಟೇಷನ್‌ ಮತ್ತು ಎಕ್ಸ್‌ಪ್ರೆಸ್‌ ಫೀಡರ್‌ ಕಾಮಗಾರಿಗಳಿಗೆ ಕೆಪಿಟಿಸಿಎಲ್‌ ನಿಂದ ಅಂದಾಜುಪಟ್ಟಿ ಪಡೆದು ಟೆಂಡರ್‌ ಪ್ರಕಟಣೆ ಹೊರಡಿಸಲಾಗುವುದು. ಈ ಎಲ್ಲಾ ಕಾಮಗಾರಿಗಳನ್ನು 2019ರ ಆಗಸ್ಟ್‌ನೊಳಗೆ ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿಗಳು ವಿವರಿಸಿದರು.

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.