ನೀವು ಮಾಡಿದ ಸಾಲಕ್ಕೆ ಮೊದಲು ಲೆಕ್ಕ ಕೊಡಿ: ಸಂಸದ
Team Udayavani, Feb 23, 2021, 2:06 PM IST
ಮೈಸೂರು:ಮುಖ್ಯಮಂತ್ರಿಯಾಗಿ 5 ವರ್ಷ ಆಡಳಿತ ನೀಡಿದ ತಮ್ಮ ಅವಧಿಯಲ್ಲಿ ಕರ್ನಾಟಕ ರಾಜ್ಯಕ್ಕೆ 2.86 ಲಕ್ಷ ಕೋಟಿ ರೂ. ಸಾಲದ ಹೊರೆ ನೀಡಿದ ಲೆಕ್ಕವನ್ನು ಮೊದಲು ಕೊಡಿ, ಆ ನಂತರ ರಾಮಮಂದಿರದ ಲೆಕ್ಕ ಕೇಳಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಸದ ಪ್ರತಾಪ್ ಸಿಂಹ ಸವಾಲು ಹಾಕಿದ್ದಾರೆ.
ರಾಜ್ಯದಲ್ಲಿ ಕಳೆದೊಂದು ವಾರದಿಂದ ರಾಮಮಂದಿರದ ಲೆಕ್ಕದ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೆ, ಮೈಸೂರಿನಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ನೀವು ನಿಮ್ಮೂರಿನಲ್ಲಿ ರಾಮಮಂದಿರ ಕಟ್ಟಿಸುತ್ತಿದ್ದೀರಿ, ಅದರ ಅಂದಾಜು ಎಷ್ಟು ಅಂತ ಲೆಕ್ಕ ಕೇಳಿದ ಪತ್ರಕರ್ತರಿಗೆ, ನಾನು ಲೆಕ್ಕ ಕೊಡಲ್ಲ ಅಂತ ಹೇಳಿದ್ದೀರಿ.ಆದ್ರೆ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಲೆಕ್ಕ ಮಾತ್ರ ಕೇಳ್ತಿರಾ? ಇದೇಂತ ದ್ವಂದ್ವ ನಡೆ ನಿಮ್ಮದು ಎಂದು ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದರು.
ರಾಮಮಂದಿರಕ್ಕೆ ದೇಣಿಗೆ ನೀಡಿದವರು ಲೆಕ್ಕ ಕೇಳ್ಳೋದ್ರಲ್ಲಿ ಅರ್ಥವಿದೆ.
ಆದ್ರೆ ಒಂದು ರೂಪಾಯಿಯನ್ನು ದೇಣಿಗೆ ನೀಡದ ಸಿದ್ದರಾಮಯ್ಯನವರು ಅದ್ಯಾವ ಅರ್ಥದಲ್ಲಿ ಲೆಕ್ಕ ಕೇಳ್ತಿದ್ದಾರೆ ಅಂತ ನನಗೆ ಗೊತ್ತಿಲ್ಲ. ಸಿದ್ದರಾಮಯ್ಯನವರ ಹೆಸರಲ್ಲೆ ರಾಮನಿದ್ದಾನೆ, ಅವರ ಊರಿನಲ್ಲಿ ರಾಮಮಂದಿರ ಕಟ್ಟಿಸುತ್ತಿದ್ದಾರೆ. ಹಾಗಾಗಿ ಅವರು ಮುಸ್ಲಿಂಮರನ್ನು ಓಲೈಸೋದಕ್ಕೆ ಸುಮ್ಮನೆ ಹೇಳಿಕೆ ಕೊಡ್ತಾರೆ. ಅವರ ಹೇಳಿಕೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಡಿ ಎಂದು ತಿಳಿಸಿದರು.
1.86 ಲಕ್ಷ ಕೋಟಿ ರೂ. ಏನಾಯ್ತು? :
ರಾಜ್ಯದ ಮುಖ್ಯಮಂತ್ರಿಯಾಗಿ ನೀವು ಬರುವ ಮುನ್ನ ರಾಜ್ಯ ಬೊಕ್ಕಸದ ಒಟ್ಟು ಸಾಲ 1 ಲಕ್ಷ ಕೋಟಿ ರೂ. ಇತ್ತು. ನೀವು ಬಂದು 5 ವರ್ಷ ಆಡಳಿತ ಮಾಡಿ ವಾಪಸ್ ಹೋಗುವಷ್ಟರಲ್ಲಿ, ಅದನ್ನು 2.86 ಲಕ್ಷ ಕೋಟಿ ರೂ.ಗೆ ಏರಿಕೆ ಮಾಡಿದ್ದೀರಿ, ನಿಮ್ಮ ಅವಧಿಯಲ್ಲಿ ಮಾಡಿದ 1.86 ಲಕ್ಷ ಕೋಟಿ ರೂ. ಸಾಲದ ಹಣ ಎಲ್ಲಿಗೆ ಹೋಯ್ತು, ಅಷ್ಟು ಹಣವನ್ನು ಯಾವುದಕ್ಕೆ ಖರ್ಚು ಮಾಡಿದಿರಿ ಅಥವಾ ಯಾವುದಕ್ಕೆ ದುರುಪಯೋಗ ಮಾಡಿದ್ರಿ ಅಂತ ಹೇಳಿ. ಆ ಮೇಲೆ ಅಯೋಧ್ಯೆಯ ರಾಮಮಂದಿರದ ಲೆಕ್ಕ ಕೇಳಿ ಎಂದು ಪ್ರತಾಪ್ ಸಿಂಹ ವಾಗ್ಧಾಳಿ ನಡೆಸಿದರು.
ಬಿಜೆಪಿ ಜತೆ ಜೆಡಿಎಸ್ ಕೈಜೋಡಿಸಲಿ :
ಪಾಲಿಕೆ ಮೇಯರ್-ಉಪಮೇಯರ್ ಚುನಾವಣೆ ಸಂಬಂಧ ಬಿಜೆಪಿ-ಜೆಡಿಎಸ್ ಮೈತ್ರಿಗೆ, ಜೆಡಿಎಸ್‌ನವರು ನಮ್ಮೊಂದಿಗೆ ಬಂದರೆ ಖುಷಿ. ಇಲ್ಲ ಅಂದರೆ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಲು ಸಿದ್ಧ. ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮ ಸರ್ಕಾರಗಳು ಇವೆ. ಮೈಸೂರು ಮಹಾನಗರ ಪಾಲಿಕೆಗೆ ಏನು ಕೆಲಸ ಆಗಬೇಕೋ ಅದನ್ನು ಮಾಡಿಸಿಕೊಳ್ಳುತ್ತೇವೆ. ಇದನ್ನು ಅರ್ಥ ಮಾಡಿಕೊಂಡು ಜೆಡಿಎಸ್ ನಮ್ಮೊಂದಿಗೆ ಸಹಕರಿಸಬೇಕು. ಈ ಹಿಂದೆ ಪಾಲಿಕೆ ಮತ್ತು ಜಿಪಂನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅನುಭವ ಚೆನ್ನಾಗಿತ್ತು. ಕಳೆದೆರೆಡು ವರ್ಷದಿಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿಯಲ್ಲಿ ಏನಾಗುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಇದನ್ನು ಅರ್ಥಮಾಡಿಕೊಂಡು ಜೆಡಿಎಸ್‌ನವರು ಬಿಜೆಪಿಯೊಂದಿಗೆ ಕೈಜೋಡಿಸಲಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.