‘ನಾನೊಬ್ಬ ಸುಸಂಸ್ಕೃತ ರಾಜಕಾರಣಿ’ : ಸಂಸದ ಸದಾನಂದ್ ಗೌಡ
Team Udayavani, Jul 13, 2021, 6:24 PM IST
ಮೈಸೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ತೀರ್ಮಾನ. ಕೆಲ ರಾಜ್ಯಗಳ ಮುಂದಿನ ಚುನಾವಣೆಯ ಸಂಘಟನಾ ದೃಷ್ಟಿಯಿಂದ ರಾಜಿನಾಮೆ ಕೇಳಿದ್ರು. ತಕ್ಷಣ ರಾಜೀನಾಮೆ ನೀಡಿದ್ದೇವೆ ಎಂದು ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಸದಾನಂದ್ ಗೌಡ ಹೇಳಿದರು.
ನಗರದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿ ನನಗೆ ಎಲ್ಲವನ್ನೂ ಕೊಟ್ಟಿದೆ..! ನನಗೆ ಪಕ್ಷ ಕೊಟ್ಟಂತಹ ಅವಕಾಶಗಳು ಬಹುಶಃ ರಾಜ್ಯದಲ್ಲಿ ಯಾರಿಗೂ ಸಿಕ್ಕಿಲ್ಲ. ನಾನೊಬ್ಬ ಸುಸಂಸ್ಕೃತ ರಾಜಕಾರಣಿ. ಅಧಿಕಾರ ಕೊಟ್ಟಾಗ ಎತ್ತರಕ್ಕೆ ಏರುವುದು, ಕೊಡದಿದ್ದಾಗ ಕೆಳಕ್ಕೆ ಇಳಿಯುವು ಮಾಡಬಾರದು. ಸಮಾನ ಮನಸ್ಸಿನಲ್ಲಿ ಸ್ವೀಕರಿಸಿ ಮುಂದೆ ನಡೆಯಬೇಕು ಎಂದರು.
ಇನ್ನು ರಾಜ್ಯದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಿದ ಗೌಡರು, ಇದು ಪಕ್ಷದ ಸಂಘಟನೆ ವಿಚಾರ. ನಮ್ಮ ಪಕ್ಷ ಬೆಳೆಯಬೇಕು ಅಂದ್ರೆ ಇತರ ಪಕ್ಷದಿಂದ ಬಂದವರೂ ಸಿದ್ದಾಂತ ಒಪ್ಪಿಕೊಳ್ಳಬೇಕು. ಹೊರಗಿನಿಂದ ಬಂದವರನ್ನ ಸ್ಟ್ರೀಮ್ ಲೈನ್ ಮಾಡುವ ಅವಶ್ಯಕತೆ ಇದೆ. ಪಕ್ಷ ಆ ದಾರಿಯಲ್ಲಿ ಕೆಲಸ ಮಾಡ್ತಿದೆ ಎಂದರು.
ರಾಜೀನಾಮೆ ವಿಚಾರವಾಗಿ ವಿರೋಧ ಪಕ್ಷಗಳ ಟೀಕೆಗಳಿಗೆ ಉತ್ತರಿಸಿದ ಸದಾನಂದ್ ಗೌಡ, ರಾಜಕೀಯ ಅಂದ್ರೆ ದೊಡ್ಡ ಸಮುದ್ರ ಇದ್ದಂತೆ.ಸಮುದ್ರ ಸ್ನಾನಕ್ಕೆ ಇಳಿದರು ಅಲೆಗಳಿಗೆ ಕಾಯಬಾರದು. ರಾಜಕೀಯದಲ್ಲಿ ಟೀಕೆ ಟಿಪ್ಪಣಿಗಳು ಸಹಜ. ಎಲ್ಲದಕ್ಕೂ ನಮ್ಮ ಕಾರ್ಯಾಚರಣೆ, ಕಮಿಟ್ಮೆಂಟ್ ಮೂಲಕ ಉತ್ತರ ಕೊಡಬೇಕು. ನಾನು ಏರ್ಪೋರ್ಟ್ಗೆ ಬಂದಾಗ ಸ್ವಾಗತ ಮಾಡೊಕೆ ನಾಲ್ಕು ಸಾವಿರ ಜನ ಬಂದಿದ್ರು.ಇದಕ್ಕಿಂತ ದೊಡ್ಡ ಸಂಪಾದನೆ ಏನಿದೆ, ಎಲ್ಲಾ ಟೀಕೆಗೆಗೂ ಇದೇ ಉತ್ತರ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.