MUDA CASE: 8 ಮಂದಿಗೆ ಇ.ಡಿ. ನೋಟಿಸ್ ಜಾರಿ
Team Udayavani, Oct 25, 2024, 12:26 AM IST
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿನ ನಿವೇಶನ ಹಂಚಿಕೆ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ತನಿಖೆ ಮತ್ತಷ್ಟು ಬಿರುಸುಗೊಳಿಸಿದ್ದು, ಮುಡಾದ 8 ಮಂದಿ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.
ಮುಡಾ ವಿಶೇಷ ತಹಸೀಲ್ದಾರ್ ರಾಜಶೇಖರ್, ವಿಶೇಷ ಭೂ ಸ್ವಾಧೀನಾ ಧಿಕಾರಿ ಶುೃತಿ, ಹಿಂದಿನ ಆಯುಕ್ತರ ಆಪ್ತ ಕಾರ್ಯದರ್ಶಿ ಪ್ರಶಾಂತ್, ಬೆರಳಚ್ಚುಗಾರ ಚಂದ್ರು, ಎಂಜಿನಿಯರ್‌ಗಳಾದ ಆರ್. ಶ್ರೀನಿವಾಸ್, ರಾಜಶೇಖರ್ ಸಹಿತ 8 ಮಂದಿಗೆ ನೋಟಿಸ್ ನೀಡಲಾಗಿದ್ದು, ವಿಚಾರಣೆಗೆ ಬರುವಂತೆ ಸೂಚನೆ ನೀಡಲಾಗಿದೆ.
ಅ. 18 ಮತ್ತು 19ರಂದು ಮುಡಾ ಕಚೇರಿಯ ಮೇಲೆ ದಾಳಿ ನಡೆಸಿದ್ದ ಇ.ಡಿ. ಅಧಿಕಾರಿಗಳ ತಂಡ ಸತತ 29 ಗಂಟೆಗಳ ಕಾಲ ಮುಡಾ ಅಧಿಕಾರಿ, ಸಿಬಂದಿಯ ವಿಚಾರಣೆಯೊಂದಿಗೆ 8 ಸಾವಿರ ಪುಟಗಳ ದಾಖಲಾತಿಯನ್ನು ಸಂಗ್ರಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Eye Surgeries: ಪದವಿ ಪೂರ್ಣಗೊಳಿಸದ ‘ಡಾಕ್ಟರ್’ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದರು
Perth test: ಜೈಸ್ವಾಲ್-ರಾಹುಲ್ ಅಜೇಯ ಆಟ; ಪರ್ತ್ ನಲ್ಲಿ ಭಾರತದ ಮೇಲಾಟ
Mother: ಅಮ್ಮನ ಜೀವನವೇ ಆದರ್ಶ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.