![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 19, 2021, 1:20 PM IST
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ತನಗೆ ಸೇರಿದ ಸುಮಾರು ಒಂದು ನೂರು ಕೋಟಿ ರೂಪಾಯಿ ಮೌಲ್ಯದ ಜಾಗವನ್ನು ಶನಿವಾರ ತನ್ನ ಸ್ವಾಧೀನಕ್ಕೆ ತೆಗೆದುಕೊಂಡಿದೆ.
ಮೈಸೂರು ತಾಲೂಕು ಕಸಬಾ ಹೋಬಳಿ ಬಸವನಹಳ್ಳಿ ಗ್ರಾಮದಲ್ಲಿ 5.14 ಎಕರೆ ತನ್ನಜಾಗವನ್ನು ಪ್ರಾಧಿಕಾರ ವಶಕ್ಕೆ ಪಡೆದಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ವಿಜಯನಗರ 4ನೇ ಹಂತ 2ನೇ ಘಟ್ಟ ಬಡಾವಣೆ ನಿರ್ಮಾಣಕ್ಕಾಗಿ 1991ರಲ್ಲಿಯೇ ಈ ಜಾಗವನ್ನು ಭೂ ಸ್ವಾಧೀನಪಡಿಸಿಕೊಂಡು ಭೂ ಮಾಲಿಕರಿಗೆ ಪರಿಹಾರವನ್ನೂ ನೀಡಿತ್ತು. ಈ ಸ್ವತ್ತನ್ನು ಭೂ ಮಾಲಿಕರಿಂದ ಕ್ರಯ ಒಪ್ಪಂದ ಮಾಡಿಕೊಂಡ ಮಹದೇವಯ್ಯ ಎಂಬುವರು ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ನ್ಯಾಯಾಲಯದಲ್ಲಿ ಪ್ರಾಧಿಕಾರದ ಪರ ತೀರ್ಪು ಬಂದಿದೆ.
ನ್ಯಾಯಾಲಯದ ಆದೇಶದ ಅನುಸಾರ, ಪ್ರಾಧಿಕಾರದ ಅಧಿಕಾರಿಗಳು ಶನಿವಾರ ಪೊಲೀಸ್‌ರಕ್ಷಣೆಯಲ್ಲಿ ಸ್ಥಳಕ್ಕೆ ತೆರಳಿ ಈ ಜಾಗದಲ್ಲಿದ್ದ 2 ಅನಧಿಕೃತ ಶೆಡ್‌ಗಳನ್ನು ತೆರವುಗೊಳಿಸಿದ್ದಾರೆ.ಜಾಗವನ್ನು ಪ್ರಾಧಿಕಾರದ ವಶಕ್ಕೆ ಪಡೆದಿದ್ದಾರೆ. ಈ ಜಾಗದಲ್ಲಿ 50-80 ಅಳತೆಯ 11 ನಿವೇಶನಗಳು,40-60 ಅಳತೆಯ 36 ನಿವೇಶನಗಳು ರಚನೆಯಾಗಲಿವೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ಡಾ. ಡಿ.ಬಿ.ನಟೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಾಧಿಕಾರ ಆಯುಕ್ತ ಡಾ. ಡಿ.ಬಿ.ನಟೇಶ್, ಸೂಪರಿಂಟೆಂಡೆಂಟ್ ಎಂಜಿನಿಯರುಗಳಾದ ಶಂಕರ್, ಭೂ ಸ್ವಾಧೀನಾಧಿಕಾರಿ ಹರ್ಷವರ್ಧನ್, ಎಕ್ಸಿಕ್ಯೂಟಿವ್ ಎಂಜಿನಿಯರುಗಳಾದ ಮೋಹನ್,ಸತ್ಯನಾರಾಯಣ ಜೋಶಿ, ವಲಯಾಧಿಕಾರಿಗಳಾದ ಕೆ.ಆರ್.ಮಹೇಶ್, ರವೀಂದ್ರಕುಮಾರ್, ಕಿರಣ್,ಶಿವಣ್ಣ, ನಾಗೇಶ್,ರವಿಶಂಕರ್, ಪ್ರಾಧಿಕಾರದ ಸಿಬ್ಬಂದಿ ವರ್ಗದವರು ಈ ಸಂದರ್ಭದಲ್ಲಿ ಹಾಜರಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.