ಲೈಂಗಿಕ ದೌರ್ಜನ್ಯ ಆರೋಪ: ಮುರುಘಾ ಶ್ರೀಗಳ ವಿರುದ್ಧ ಪ್ರಕರಣ ದಾಖಲು
Team Udayavani, Aug 28, 2022, 7:15 AM IST
ಮೈಸೂರು/ಚಿತ್ರದುರ್ಗ: ಅಪ್ರಾಪ್ತ ವಯಸ್ಕ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಚಿತ್ರದುರ್ಗದ ಮರುಘಾ ಶ್ರೀ ಸಹಿತ ಐವರ ವಿರುದ್ಧ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.
ಜಿಲ್ಲಾ ಮಕ್ಕಳ ರಕ್ಷಣ ಘಟಕದ ದೂರಿನನ್ವಯ ಮಠದ ಶ್ರೀ ಸಹಿತ ವಸತಿ ನಿಲಯದ ವಾರ್ಡನ್ ರಶ್ಮಿ, ಮಠದ ಮರಿಸ್ವಾಮಿ, ಪರಮಶಿವಯ್ಯ, ವಕೀಲ ಗಂಗಾಧರಯ್ಯ ಅವರ ವಿರುದ್ಧ ಪೋಕೊÕà ಕಾಯಿದೆಯಡಿ
ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಮ್ಮ ಮೇಲೆ ಮಠದ ಆಡಳಿತದಲ್ಲಿರುವ ವಿದ್ಯಾರ್ಥಿ ನಿಲಯದಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಇಬ್ಬರು ವಿದ್ಯಾರ್ಥಿನಿಯರು ಮೈಸೂರಿನ ಮಕ್ಕಳ ವಸತಿ ಕೇಂದ್ರ ವಾದ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿದ್ದರು. ಆ ಸಂಸ್ಥೆ ಬಾಲಕಿಯರನ್ನು ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿತು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತುಪರಿವೀಕ್ಷಣಾಧಿಕಾರಿ ಸಿ.ಚಂದ್ರಕುಮಾರ್ ಶುಕ್ರವಾರ ರಾತ್ರಿ ಠಾಣೆಗೆ ತೆರಳಿ ದೂರು ನೀಡಿದ್ದಾರೆ.
ಚಿತ್ರದುರ್ಗದಲ್ಲಿ ಘಟನೆ ನಡೆದಿರುವುದರಿಂದ ಪ್ರಕರಣವನ್ನು ಅಲ್ಲಿಯ ಠಾಣೆಗೆ ವರ್ಗಾಯಿಸಲಾಗಿದೆ. ಜತೆಗೆ ತನಿಖೆಗೆ ಅಗತ್ಯ ಸಹಕಾರ ನೀಡಲಾಗುತ್ತದೆ ಎಂದು ಡಿಸಿಪಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ.
ಈ ಮಧ್ಯೆ, ಶನಿವಾರ ಇಡೀ ದಿನ ಚಿತ್ರದುರ್ಗದ ಮಠದಲ್ಲಿ ಬಿರುಸಿನ ಚಟುವಟಿಕೆಗಳು ನಡೆದವು. ಶ್ರೀಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಬಂಜಾರ ಗುರುಪೀಠದ ಶ್ರೀ ಸೇವಾಲಾಲ್ ಸ್ವಾಮೀಜಿ ಸಹಿತ ವಿವಿಧ ಮಠಾಧೀಶರು, ವಿವಿಧ ಸಮಾಜಗಳ ಮುಖಂಡರು, ಸಂಘ-ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಮಠದ ಭಕ್ತರು ಮಠಕ್ಕೆ ಆಗಮಿಸಿ ಸ್ವಾಮೀಜಿಯವರನ್ನು ಬೆಂಬಲಿಸಿದರು. ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಮಠಕ್ಕೆ ಭೇಟಿ ನೀಡಿ ಈ ದೂರಿನ ಬಗ್ಗೆ ನಂಬಿಕೆ ಇಲ್ಲ ಎಂದರು.
ಮತ್ತೊಂದೆಡೆ, ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಅರೋಪದಡಿ ಮುರುಘಾ ಮಠದ ಆಡಳಿತಾಧಿಕಾರಿ ಎಸ್.ಕೆ. ಬಸವರಾಜನ್ ಹಾಗೂ ಅವರ ಪತ್ನಿ ಸೌಭಾಗ್ಯಬಸವರಾಜನ್ ವಿರುದ್ಧ ಪ್ರಕರಣ ದಾಖಲಾಗಿದೆ.
21ನೇ ಶತಮಾನದ ಕರಾಳ ಘಟನೆ: ಮುರುಘಾ ಶ್ರೀ
ಚಿತ್ರದುರ್ಗ: ಮುರುಘಾ ಶರಣರ ಬದುಕಿನಲ್ಲಿ ಅತ್ಯಂತ ದೊಡ್ಡ ಕಿರುಕುಳ ಇದಾಗಿದೆ. 21ನೇ ಶತಮಾನದ ಕರಾಳ ಘಟನೆ ಇದಾಗಿದೆ. ರೋಲ್‌ಕಾಲ್, ಬ್ಲಾಕ್‌ವೆುàಲ್ ತಂತ್ರದ ಮೂಲಕ ಅಧಿಕಾರ ಬೇಕು ಎಂಬ ಧೋರಣೆ ಮುಖ್ಯವಾಗಿದೆ ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಬೇಸರ ವ್ಯಕ್ತಪಡಿಸಿದ್ದಾರೆ.
ಶನಿವಾರ ಮಠದಲ್ಲಿ ಭಕ್ತರ ಜತೆ ಜರಗಿದ ಅನೌಪಚಾರಿಕ ಮಾತುಕತೆ ವೇಳೆ ಮಾತನಾಡಿರುವ ಶರಣರು, ಜಗತ್ತಿನಲ್ಲಿ ಧರ್ಮಾಂಧರು ಹಾಗೂ ಕಳ್ಳರು ಈ ರೀತಿ ಸನ್ನಿವೇಶ ಎದುರಿಸಿಲ್ಲ. ತಾತ್ವಿಕ ತಳಹದಿಯ ಮೇಲೆ ನಡೆದವರಿಗೆ ಕುತ್ತು ಎದುರಾಗುತ್ತದೆ. ಗಾಂಧೀಜಿ, ಬಸವಣ್ಣ ಕೂಡ ನೋವಿನ ದಿನಗಳನ್ನು ಎದುರಿಸಿದ್ದಾರೆ ಎಂದು ಹೇಳಿದರು.
ಮಠದ ಒಳಗೆ ಇರುವವರೇ ಷಡ್ಯಂತ್ರ, ಪಿತೂರಿ ನಡೆಸಿದ್ದಾರೆ. ಈ ಸಮಸ್ಯೆ ಶಾಶ್ವತವಲ್ಲ. ಯಾರೊಬ್ಬರೂ ದುಃಖಿಸಬೇಡಿ. ಎಲ್ಲವನ್ನೂ ಕಾಲವೇ ನಿರ್ಣಯಿಸುತ್ತದೆ. ಸಾಧ್ಯವಾದರೆ ಸಮಸ್ಯೆ ಬಗೆಹರಿಸಿಕೊಳ್ಳೋಣ, ಇಲ್ಲವೇ ಹೋರಾಟ ಮಾಡೋಣ. ಎರಡಕ್ಕೂ ನಾವು ಸಿದ್ಧ. ಸಮರ ಹಾಗೂ ಸಂಧಾನದ ಹಾದಿಗಳು ನಮ್ಮ ಎದುರಿನಲ್ಲಿವೆ ಎಂದಿದ್ದಾರೆ.
ಎಲ್ಲ ಸಮಾಜ ಸುಧಾರಕರ ಕಾಲದಲ್ಲಿಯೂ ಸಾತ್ವಿಕ ಮತ್ತು ದುಷ್ಟಶಕ್ತಿಯ ನಡುವೆ ಹೋರಾಟ ನಡೆದಿವೆ. ಸಾತ್ವಿಕರು ಸಕಾರಾತ್ಮಕ ಧೋರಣೆ ಹೊಂದಿರುತ್ತಾರೆ. ಅದಕ್ಕೆ ವ್ಯತಿರಿಕ್ತವಾಗಿ ಅನೇಕರು ನಕಾರಾತ್ಮಕ ಧೋರಣೆ ಹೊಂದಿರುತ್ತಾರೆ. ಏಸುಕ್ರಿಸ್ತರನ್ನು ಶಿಲುಬೆಗೆ ಏರಿಸಿದವರು ಅದೇ ಧರ್ಮದವರು. ಪೈಗಂಬರರಿಗೆ ಕಿರುಕುಳ ನೀಡಿದವರು, ಗೌತಮ ಬುದ್ಧನಿಗೆ ಹಂದಿಯ ಮಾಂಸದ ರಸ ಉಣಿಸಿದವರು ಅದೇ ಧರ್ಮದವರು ಎಂದು ಮುರುಘಾ ಶರಣರು ಹೇಳಿದ್ದಾರೆ.
ಮಠದ ಉದ್ಯೋಗಿಯೊಬ್ಬ ಸರಿ ಇರಲಿಲ್ಲ. ಆತನೇ ಏನೋ ಮಾಡಿದ್ದಾನೆ ಎಂಬ ಮಾಹಿತಿ ಇದೆ. ಚಿತ್ರದುರ್ಗ ಪೊಲೀಸ್ ಠಾಣೆಯಲ್ಲಿ ಮುರುಘಾ ಮಠದ ಆಡಳಿತಾಧಿಕಾರಿ ಬಸವರಾಜನ್ ಎಂಬವರ ವಿರುದ್ಧವೂ ದೂರು ನೀಡಲಾಗಿದೆ. ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ.
– ಆರಗ ಜ್ಞಾನೇಂದ್ರ, ಗೃಹ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.