ಕಾಂಗ್ರೆಸ್‌ಗೆ ಮೇಯರ್‌ ಪಟ್ಟ, ಜೆಡಿಎಸ್‌ ಕೈನಲ್ಲಿ ಜುಟ್ಟು?


Team Udayavani, Jun 9, 2021, 11:27 AM IST

ಕಾಂಗ್ರೆಸ್‌ಗೆ ಮೇಯರ್‌ ಪಟ್ಟ, ಜೆಡಿಎಸ್‌ ಕೈನಲ್ಲಿ ಜುಟ್ಟು?

ಮೈಸೂರು: ಇದೇ ಮೊದಲ ಬಾರಿಗೆ ಒಂದೇ ವರ್ಷದಲ್ಲಿ ಪಾಲಿಕೆ ಮೇಯರ್‌ ಸ್ಥಾನಕ್ಕೆ 2ನೇ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್‌ -ಜೆಡಿಎಸ್‌ ಮೈತ್ರಿ ಮುಂದುವರಿಯುವ ಸಾಧ್ಯತೆ ಗೋಚರಿಸಿದೆ.

ಕಳೆದ ಫೆಬ್ರವರಿಯಲ್ಲಿ ಪಾಲಿಕೆ ಮೇಯರ್‌ -ಉಪ ಮೇಯರ್‌ ಸ್ಥಾನಕ್ಕೆ 3ನೇ ಅವಧಿಗೆ ನಡೆದ ಚುನಾವಣೆಯಲ್ಲಿ ಭಾರಿ ಕಸರತ್ತಿನ ನಡುವೆಯೂ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಮುಂದುವರಿದಿತ್ತು. ಪಾಲಿಕೆ ಮೇಯರ್‌ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಜೆಡಿಎಸ್‌ ಸಫ‌ಲವಾಗಿತ್ತು. ಆದರೆ, ಆಸ್ತಿ ವಿವರ ಸರಿಯಾಗಿ ನೀಡದ ಕಾರಣ ಹೈಕೋರ್ಟ್‌ ತೀರ್ಪಿನಿಂದ ಮೇಯರ್‌ ಆಗಿದ್ದ ರುಕ್ಮಿಣಿ ಸದಸ್ಯತ್ವ ರದ್ದಾಗಿತ್ತು. ಅವರಿಂದ ತೆರವಾಗಿರುವ ಮೇಯರ್‌ ಸ್ಥಾನಕ್ಕೆ ಇದೇ ಜೂನ್‌ 11ಕ್ಕೆ ಚುನಾವಣೆ ನಡೆಯಲಿದ್ದು, ಕಳೆದ ಚುನಾವಣೆಯಲ್ಲಿದ್ದ ಮೀಸಲಾತಿಯೇ ಮುಂದುವರಿಯಲಿದೆ.

ಈ ಬಾರಿಯೂ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಮುಂದುವರಿಯಲಿದೆ ಎಂದು ಉಭಯ ಪಕ್ಷಗಳ ಮುಖಂಡರು ಹೇಳಿಕೆ ನೀಡುತ್ತಿದ್ದು, 8 ತಿಂಗಳ ಅವಧಿಗೆ ಮೇಯರ್‌ ಸ್ಥಾನವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡುವುದು ಎಂದು ಒಪ್ಪಂದವಾದರೆ, ಕಳೆದ ಬಾರಿ ಆಕಾಂಕ್ಷಿಯಾಗಿದ್ದ ಶಾಂತಕುಮಾರಿ ಅವರನ್ನು ಮೇಯರ್‌ ಸ್ಥಾನಕ್ಕೆ ಸ್ಪರ್ಧಿಸಲು ಅವಕಾಶ ಮಾಡಿಕೊಡುವ ಸಾಧ್ಯತೆ ಇದೆ.

ಬಿಜೆಪಿಯಿಂದ ಎಚ್ಚರಿಕೆ ನಡೆ: ಕಳೆದ ಚುನಾವಣೆಯಲ್ಲಿ ಜೆಡಿಎಸ್‌ ಬೆಂಬಲ ನೀಡುವ ವಿಶ್ವಾಸದ ಮೇಲೆ ಬಿಜೆಪಿ ಮೇಯರ್‌ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು. ಆದರೆ ಕೊನೆ ಘಳಿಗೆಯಲ್ಲಿ ಬಿಜೆಪಿಗೆ ಜೆಡಿಎಸ್‌ ಕೈ ಕೊಟ್ಟಿತ್ತು. ಇದರಿಂದ ಪಾಠ ಕಲಿತ ಬಿಜೆಪಿ ಎಚ್ಚರಿಕೆಯಿಂದ ಹೆಜ್ಜೆಯನ್ನಿಟ್ಟಿದ್ದು, ಜೆಡಿಎಸ್‌ ತಾನಾಗಿಯೇ ಮೈತ್ರಿ ಕೇಳಿಕೊಂಡು ಬಂದರಷ್ಟೇ ಮುಂದುವರಿಯುವ ನಿರ್ಧಾರಕ್ಕೆ ಬಂದಿದೆ. ಒಂದು ವೇಳೆ ಕೊನೆ ಹಂತದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಕೈಗೂಡದಿದ್ದಲ್ಲಿ, ಬಿಜೆಪಿ ತನ್ನ ದಾಳ ಉರುಳಿಸಲು ಕಾದು ನೋಡುವ ತಂತ್ರಕ್ಕೆ ಜಾರಿದೆ. ಜೊತೆಗೆ ತನ್ನ ಅಭ್ಯರ್ಥಿಯಾಗಿ ಸುನಂದ ಪಾಲನೇತ್ರ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ.

ಕಾಂಗ್ರೆಸ್‌ಗೆ ಅವಕಾಶ?: ರುಕ್ಮಿಣಿ ಸದಸ್ಯತ್ವ ರದ್ದಾದ ಹಿನ್ನೆಲೆ ತೆರವಾಗಿರುವ ಮೇಯರ್‌ ಸ್ಥಾನವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡಲು ಷರತ್ತಿನ ಮೇಲೆ ಜೆಡಿಎಸ್‌ ಒಪ್ಪಿಗೆ ಸೂಚಿಸಿದೆ.ಒಂದು ವೇಳೆ ಈ ಒಪ್ಪಂದ ಮುಂದುವರಿದರೆ ಕಳೆದ ಬಾರಿ ಮೇಯರ್‌ ಸ್ಥಾನಕ್ಕೆ ಸ್ಪರ್ಧಿಸಿದ್ದ ಎಚ್‌.ಎಂ.ಶಾಂತಕುಮಾರಿ ಅವರಿಗೆ ಮೇಯರ್‌ ಪಟ್ಟ ದೊರೆಯುವ ಸಾಧ್ಯತೆಗಳಿವೆ. ಇವರ ಜತೆಗೆ ಶೋಭಾ ಸುನಿಲ್‌, ಹಾಜೀರಾ ಸೀಮಾ ಮೇಯರ್‌ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.

ಜೆಡಿಎಸ್‌ ಷರತ್ತು ಏನು? “: ಈ ಬಾರಿಗೆ ಮೇಯರ್‌ ಸ್ಥಾನವನ್ನು ಕಾಂಗ್ರೆಸ್‌ ಗೆ ಬಿಟ್ಟುಕೊಟ್ಟು, ನಂತರದ ಅವಧಿಗೆ ಮೇಯರ್‌, ಉಪಮೇಯರ್‌, ವರ್ಕ್‌ ಕಮಿಟಿ ಎಲ್ಲವನ್ನೂ ಜೆಡಿಎಸ್‌ಗೆ ಬಿಟ್ಟುಕೊಡಬೇಕು. ಕೊನೆಯ ಅವಧಿಗೂ ಜೆಡಿಎಸ್‌ಗೆ ಮೇಯರ್‌ ಸ್ಥಾನ ಬಿಟ್ಟುಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಈ ಬೇಡಿಕೆಗೆ ಕಾಂಗ್ರೆಸ್‌ ಒಪ್ಪಿದರೆ ಮಾತ್ರಮೇಯರ್‌ ಸ್ಥಾನ ಬಿಟ್ಟುಕೊಡುತ್ತೇವೆ ಎಂದು ಜೆಡಿಎಸ್‌ ಹೇಳಿದೆ.

ಮೇಯರ್‌ ಸ್ಥಾನವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡಲು ಜೆಡಿಎಸ್‌ ಒಪ್ಪಿದೆ. ಕಾಂಗ್ರೆಸ್‌ಗೆ ಉಳಿದ 8 ತಿಂಗಳ ಅವಧಿಗೆ ಮೇಯರ್‌ ಸ್ಥಾನ ಬಿಟ್ಟುಕೊಡುವುದು. ಇಲ್ಲವೇ ಜೆಡಿಎಸ್‌ ಮೇಯರ್‌ ಸ್ಥಾನ ಉಳಿಸಿಕೊಳ್ಳುವುದು ಎಂಬ 2 ಆಯ್ಕೆಯನ್ನು ಸಾ. ರಾ.ಮಹೇಶ್‌ ನೀಡಿದ್ದರು. ಈ ಬಗ್ಗೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಜತೆ ಚರ್ಚಿಸಿದಾಗ, ಮೇಯರ್‌ ಸ್ಥಾನ ಕಾಂಗ್ರೆಸ್‌ಗೆ ಬೇಕು ಎಂದಿದ್ದಾರೆ. ಅದರಂತೆ ನಡೆದುಕೊಳ್ಳಲಾಗುವುದು. -ಆರ್‌.ಮೂರ್ತಿ, ನಗರ ಕಾಂಗ್ರೆಸ್‌ ಅಧ್ಯಕ್ಷ

ಕಳೆದ ಬಾರಿಯೇ ಮೇಯರ್‌ ಸ್ಥಾನ ಬಿಟ್ಟುಕೊಡಲು ನಿರ್ಧರಿಸಿದ್ದೆವು. ಆದರೆ, ಜೆಡಿಎಸ್‌ ಎಲ್ಲಿದೆ ಎಂದು ಸಿದ್ದರಾಮಯ್ಯ ಟೀಕಿಸಿದ ಕಾರಣ ನಾವು ಪಟ್ಟು ಬಿಡಲಿಲ್ಲ. ಈಗಲೂ ಮೇಯರ್‌ ಸ್ಥಾನಬಿಟ್ಟುಕೊಡಲು ತಕರಾರೇನಿಲ್ಲ. ಆದರೆ, ಮುಂದಿನ ಬಾರಿಗೆ ಮೇಯರ್‌, ಉಪಮೇಯರ್‌, ವರ್ಕ್‌ ಕಮಿಟಿ ಎಲ್ಲವನ್ನೂ ಜೆಡಿಎಸ್‌ಗೆ ಬಿಟ್ಟುಕೊಡಬೇಕು. ನಂತರದ ಅವಧಿಗೂ ಮೇಯರ್‌ ಸ್ಥಾನ ಬೇಕು. – ಸಾ.ರಾ. ಮಹೇಶ್‌, ಶಾಸಕ

 

-ಸತೀಶ್‌ ದೇಪುರ

 

ಟಾಪ್ ನ್ಯೂಸ್

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

Loka-SP-Udesh–CM

MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್‌

CM-siddu

MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ

2-hunsur

Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.