ಮೈಸೂರು : ಮಾರಕಾಸ್ತ್ರದಿಂದ ಕೊಚ್ಚಿ ಎಪಿಎಂಸಿ ಏಜೆಂಟ್ ಬರ್ಬರ ಹತ್ಯೆ
Team Udayavani, May 3, 2022, 9:11 PM IST
ಮೈಸೂರು: ಎಪಿಎಂಸಿ ಆವರಣದಲ್ಲಿರುವ ತಮ್ಮ ಮಳಿಗೆಯಲ್ಲಿ ವ್ಯಾಪಾರ ನಡೆಸುತ್ತಿದ್ದ ಎಪಿಎಂಸಿ ಏಜೆಂಟ್ ಒಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ನಂಜನಗೂಡು ರಸ್ತೆಯಲ್ಲಿರುವ ಬಂಡಿಪಾಳ್ಯದ ಎಪಿಎಂಸಿ ಮಾರುಕಟ್ಟೆಯಲ್ಲಿ ಮಂಗಳವಾರ ಸಂಜೆ ನಡೆದಿದೆ.
ಮೂಲತಃ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ನಿವಾಸಿ ಎಂ.ಜೆ.ರವಿ(35) ಎಂಬವರೆ ಕೊಲೆಯಾದವರು.
ಇವರು ಎಪಿಎಂಸಿಯಲ್ಲಿ ಏಜೆಂಟ್ ಆಗಿದ್ದು, ಉತ್ತನಹಳ್ಳಿಯ ಬಳಿಯ ಹೆಳವರಹುಂಡಿಯಲ್ಲಿ ಕುಟುಂಬದ ಸಮೇತ ವಾಸವಿದ್ದರು. ಮೃತರಿಗೆ ತಂದೆ- ತಾಯಿ, ಪತ್ನಿ, ಮೂವರು ಮಕ್ಕಳು, ಸಹೋದರಿ ಇದ್ದಾರೆ.
ಎಪಿಎಂಸಿ ಮಳಿಗೆಯಲ್ಲಿ ಮಂಗಳವಾರ ಸಂಜೆ ಕೆಲಸ ಮಾಡುತ್ತಿದ್ದಾಗ ಬಂದ 3-4 ಮಂದಿ ಏಕಾಏಕಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಆರ್. ಶಿವಕುಮಾರ್, ಮೈಸೂರು ದಕ್ಷಿಣ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಶಶಿಕುಮಾರ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ಮೈಸೂರು ದಕ್ಷಿಣ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು ಹತ್ಯೆಗೆ ವ್ಯವಹಾರಿಕ ದ್ವೇಷವೇ ಕಾರಣ ಇರಬಹುದು ಎಂದು ಶಂಕಿಸಿದ್ದಾರೆ.
ಇದನ್ನೂ ಓದಿ : ಮೈಸೂರು – ಹುಬ್ಬಳ್ಳಿ ವಿಮಾನಯಾನ ಸೇವೆಗೆ ಚಾಲನೆ : ವಾರದಲ್ಲಿ 3 ದಿನ ಸೇವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.