ಮೈಸೂರಲ್ಲಿಂದು ದಸರಾ ಸಾಂಸ್ಕೃತಿಕ ಮೆರವಣಿಗೆ
Team Udayavani, Oct 14, 2018, 6:00 AM IST
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಸಕಲಾ ತಂಡಗಳಿಗೆ ಹೆಚ್ಚಿಅವಕಾಶ ಸಿಗುವುದಿಲ್ಲ ಎಂಬ ಹಲವು ವರ್ಷಗಳ ಕೊರಗನ್ನು ಹೋಗಲಾಡಿಸಲು ಇದೇ ಮೊದಲ ಬಾರಿಗೆ ಜಿಲ್ಲಾಡಳಿತ ದಸರಾ ಸಾಂಸ್ಕೃತಿಕ ಮೆರವಣಿಗೆ ಆಯೋಜಿಸಿದೆ.
750 ಕೆ.ಜಿ.ತೂಕದ ಚಿನ್ನದ ಅಂಬಾರಿ, ನಾಡಿನ ಕಲೆ-ಸಂಸ್ಕೃತಿ ಬಿಂಬಿಸುವ ಮೂಲಕ ಸಾಮಾಜಿಕ ಸಂದೇಶ ಸಾರುವ ಸ್ತಬ್ಧಚಿತ್ರಗಳು ಇರುವುದಿಲ್ಲ ಎಂಬುದನ್ನು ಬಿಟ್ಟರೆ, ಜಂಬೂಸವಾರಿ ಮೆರವಣಿಗೆ ಮಾದರಿಯಲ್ಲೇ ಅದೇ ಮಾರ್ಗದಲ್ಲಿ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. ಅರಮನೆ ಬಲರಾಮ ದ್ವಾರದಿಂದ ಬನ್ನಿಮಂಟಪ ಮೈದಾನದವರೆಗೆ ಜಂಬೂಸವಾರಿ ಸಾಗುವ ಮಾರ್ಗದಲ್ಲೇ ಮೆರವಣಿಗೆಯಲ್ಲಿ ಸಾಗುವ ಸ್ಥಳೀಯ ಕಲಾವಿದರ ವಿವಿಧ ತಂಡಗಳು, ಕಲಾ ಸ್ಪರ್ಶ ನೀಡಲಿವೆ. ಭಾನುವಾರ 2ರಿಂದ 2.30ರ ನಡುವೆ
ಡಿಸಿಎಂ ಡಾ.ಜಿ.ಪರಮೇಶ್ವರ ಅವರು ದಿಧ್ವಜಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ಸಾಂಸ್ಕೃತಿಕ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.
ಯೋಗ ಚಾರಣ: ಈ ಮಧ್ಯೆ, ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಶನಿವಾರ ಯೋಗ ಚಾರಣ ಮತ್ತು ದುರ್ಗಾ ನಮಸ್ಕಾರಕ್ಕೆ ಸಚಿವ ಸಾ.ರಾ.ಮಹೇಶ್ ಚಾಲನೆ ನೀಡಿದರು. ನೂರಾರು ಯೋಗಾಸಕ್ತರು ಸಹಸ್ರ ಮೆಟ್ಟಿಲೇರಿ ಚಾಮುಂಡಿಬೆಟ್ಟಕ್ಕೆ ತೆರಳಿ ದುರ್ಗಾ ನಮಸ್ಕಾರ ಹಾಗೂ ಯೋಗಪ್ರದರ್ಶನ ನೀಡಿದರು. ಅಲ್ಲದೆ, ನಗರದಲ್ಲಿ ಓಪನ್ ಸ್ಟ್ರೀಟ್ ಫೆಸ್ಟಿವಲ್ ಕೂಡ ಆಯೋಜಿಸಲಾಗಿತು. ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಶನಿವಾರ ವೈಮಾನಿಕ ಪ್ರದರ್ಶನದ ಪೂರ್ವ ಭಾವಿ ತಾಲೀಮು ನಡೆಯಿತು. ಸುಡುಬಿಸಿಲಿನನಡುವೆಯೂ ಪಂಜಿನ ಕವಾಯತು ಮೈದಾನದಲ್ಲಿ ಕಿಕ್ಕಿರಿದು ತುಂಬಿದ್ದ ಪ್ರೇಕ್ಷಕರು ಕಮಾಂಡೋಗಳು ನಡೆಸಿಕೊಟ್ಟ ಸಾಹಸ ಪ್ರದರ್ಶನಕ್ಕೆ ಮನಸೋತರು.
ಟಾಂಗಾ ಸವಾರಿ ಮೆರಗು: ಮೈಸೂರಿನ ಪಾರಂಪರಿಕ ಕಟ್ಟಡಗಳ ಕುರಿತು ಜನಸಾಮಾನ್ಯರು ಹಾಗೂ ಪ್ರವಾಸಿಗರಿಗೆ
ಪರಿಚಯ ಮಾಡಿಕೊಡುವ ಉದ್ದೇಶದಿಂದ ಶನಿವಾರ ಆಯೋಜಿಸಿದ್ದ ಪಾರಂಪರಿಕ ಟಾಂಗಾ ಸವಾರಿ ಗಮನ ಸೆಳೆಯಿತು.
ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ಪಾರಂಪರಿಕ ಟಾಂಗಾ ಸವಾರಿ ಕಾರ್ಯಕ್ರಮ
ಆಯೋಜಿಸಲಾಗಿತ್ತು. ನಗರದಪುರಭವನದಿಂದ ಆರಂಭಗೊಂಡ ಟಾಂಗಾ ಸವಾರಿಗೆ ಪ್ರವಾಸೋದ್ಯಮ ಸಚಿವ ಸಾ.ರಾ.
ಮಹೇಶ್ ಚಾಲನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.