ಮೈಸೂರು: ನಾಡಹಬ್ಬಕ್ಕೆ ಚಾಲನೆ ನೀಡಿದ ಮಾಜಿ ಸಿಎಂ ಎಸ್.ಎಂ.ಕೃಷ್ಣ
Team Udayavani, Oct 7, 2021, 8:33 AM IST
ಮೈಸೂರು: ನಾಡದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಇಂದು ವಿಶ್ವವಿಖ್ಯಾತ ನಾಡಹಬ್ಬಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಚಾಲನೆ ನೀಡಿದರು.
ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಿ, ಜ್ಯೋತಿ ಬೆಳಗಿಸಿ ಚಾಲನೆ ನೀಡಲಾಯಿತು.
ಇದನ್ನೂ ಓದಿ:ಜವುಳಿಗೆ ದಸರೆ ಧಮಾಕ; 7 ಮೆಗಾ ಜವುಳಿ ಪಾರ್ಕ್ ಸ್ಥಾಪನೆಗೆ ಕೇಂದ್ರ ಒಪ್ಪಿಗೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಎಸ್.ಟಿ. ಸೋಮಶೇಖರ್, ಸುನಿಲ್ ಕುಮಾರ್, ಆರ್ ಅಶೋಕ್, ಶಿವರಾಂ ಹೆಬ್ಬಾರ್, ಭೈರತಿ ಬಸವರಾಜು, ಶಶಿಕಲಾ ಜೊಲ್ಲೆ, ಕೆ.ಸುಧಾಕರ್, ನಾರಾಯಣ ಗೌಡ, ಬಿ.ಸಿ. ಪಾಟೀಲ್, ಶಾಸಕರಾದ ಎಲ್. ನಾಗೇಂದ್ರ, ರಾಮದಾಸ್ , ಜಿ.ಟಿ. ದೇವೇಗೌಡ, ತನ್ವೀರ್ ಸೇಠ್, ಅರವಿಂದ ಬೆಲ್ಲದ್, ಮಹದೇವ್ ಸೇರಿ ಸಂಸದರು, ಶಾಸಕರು ಭಾಗಿಯಾಗಿದ್ದರು.
ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ: ಅ.7 ರಂದು ಸಂಜೆ 6ಕ್ಕೆ ಅರಮನೆ ಮುಂಭಾಗದ ವೇದಿಕೆ ಯಲ್ಲಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಇದೇ ಸಂದರ್ಭದಲ್ಲಿ ಲಯವಾದ್ಯ ವಿದ್ವಾಂಸ ಎ.ವಿ.ಆನಂದ್ ಅವರಿಗೆ “ರಾಜ್ಯ ಸಂಗೀತ ವಿದ್ವಾನ್’ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಬಳಿಕ ಬೆಂಗಳೂರಿನ ಕಲಾವಿದರ ತಂಡದಿಂದ ಕರುನಾಡ ವೈಭವ ನೃತ್ಯರೂಪಕ ನಡೆಯಲಿದೆ.
ಅರಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮ: ಅ.7 ರಿಂದ 15 ರವರೆಗೆ ಅರಮನೆಗೆ ಮಧ್ಯಾಹ್ನ 2.30ರವರೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಗುರುವಾರ ಅತ್ತ ಚಾಮುಂಡಿಬೆಟ್ಟದಲ್ಲಿ ದಸರಾಕ್ಕೆ ಚಾಲನೆ ದೊರೆತರೆ, ಇತ್ತ ಅರಮನೆಯಲ್ಲಿ ಚಿನ್ನದ ಸಿಂಹಾಸನಕ್ಕೆ ಪೂಜೆ ಸಲ್ಲಿಸುವ ಮೂಲಕ ರಾಜ ವಂಶಸ್ಥರು ಶರನ್ನವರಾತ್ರಿ ಆಚರಣೆಗೆ ಚಾಲನೆ ನೀಡಲಿದ್ದಾರೆ.
ಅರಮನೆಯಲ್ಲಿ ಖಾಸಗಿ ದರ್ಬಾರ್ ಪ್ರಾರಂಭಗೊಳ್ಳಲಿದ್ದು, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸಿಂಹಾಸನ ಏರಿ ಖಾಸಗಿ ದರ್ಬಾರ್ ನಡೆಸಲಿದ್ದಾರೆ. ಇದೇ ಮೊದಲ ಬಾರಿಗೆ ಖಾಸಗಿ ದರ್ಬಾರ್‌ಗೆ ಪತ್ರಕರ್ತರು ಸೇರಿ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.
ಅರಮನೆಗಷ್ಟೇ ದಸರಾ ಸೀಮಿತ: ಚಾಮುಂಡಿ ಬೆಟ್ಟದಲ್ಲಿ ಉದ್ಘಾಟನೆ ಹೊರತು ಪಡಿಸಿ ಈ ಬಾರಿಯೂ ಉಳಿದ ಸಾಂಸ್ಕೃತಿಕ ಕಾರ್ಯಕ್ರಮ ಅರಮನೆ ಆವರಣಕ್ಕೆ ಮಾತ್ರ ಸೀಮಿತಗೊಳ್ಳಲಿದೆ. ಮೂರೂವರೆ ಗಂಟೆ ಅವಧಿಗೆ ಮಾತ್ರ ಸಾಂಸ್ಕೃತಿಕ ಕಾರ್ಯಕ್ರಮ ಸೀಮಿಗೊಳಿಸಲಾಗಿದೆ.
ವರ್ಚುವಲ್ ಪ್ರಸಾರ: ದಸರಾ ಉದ್ಘಾಟನೆ, ಜಂಬೂಸವಾರಿ ಸೇರಿ ಅರಮನೆ ಅಂಗಳದಲ್ಲಿ ಜರುಗುವ ಸಾಂಸ್ಕೃತಿಕ ಕಾರ್ಯಕ್ರಮಗಳು ಆನ್‌ಲೈನ್‌ನಲ್ಲಿ ಪ್ರಸಾರವಾಗಲಿವೆ. ಸಾಂಸ್ಕೃತಿಕ ವೇದಿಕೆಯಲ್ಲಿ ಎಲ್ಲ ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದ್ದು, ಎಲ್ಲ ದಿನ ಸಾಮಾಜಿ ಅಂತರ ಕಾಯ್ದುಕೊಂಡು 500 ಜನರಿಗೆ ಸೀಮಿತಗೊಳಿಸಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.