ಮೈಸೂರು: ಯೋಗ ನರಸಿಂಹಸಾಮಿ ದೇಗುಲದಿಂದ 2 ಲಕ್ಷ ಲಡ್ಡು ವಿತರಣೆ
100 ಕೆ.ಜಿ ಲವಂಗಗಳನ್ನು ಬಳಸಿ ತಯಾರಿಸಲಾಗಿದೆ
Team Udayavani, Dec 30, 2022, 4:26 PM IST
ಮೈಸೂರು: ಹೊಸ ವರ್ಷದವನ್ನು ಸ್ವಾಗತಿಸಲು ಮೈಸೂರು ನಗ ರದ ಸಜ್ಜಾಗುತ್ತಿದ್ದು, ಪ್ರತಿ ವರ್ಷದ ದಂತೆ ಈ ಬಾರಿಯೂ ವಿಜಯನಗರದ ಯೋಗ ನರಸಿಂಹಸ್ವಾಮಿ ದೇವಸ್ಥಾನ ಭಕ್ತ ರಿ ಗಾಗಿ 2 ಲಕ್ಷ ಲಡ್ಡುಗಳನ್ನು ತಯಾರಿಸಲಾಗುತ್ತಿದೆ.
ಕೊರೊನಾ ಸೋಂಕು ಕಾರಣಕ್ಕಾಗಿ ಕಳೆದ ಎರಡು ವರ್ಷಗಳಿಂದ ಅದ್ಧೂರಿಯಾಗಿ ಹೊಸ ವರ್ಷ ಆಚರಣೆ ಮಾಡಿರಲಿಲ್ಲ. ಈ ಬಾರಿ ಜ.1ರಂದು ದೇವಸ್ಥಾನಕ್ಕೆ ಬರುವ ಭಕ್ತರಿಗೆ ಲಡ್ಡುಗಳನ್ನು ವಿತರಿಸಲಾಗುತ್ತಿದ್ದು, ಅದಕ್ಕಾಗಿ ತಿರುಪತಿ ಮಾದರಿಯ 2 ಲಕ್ಷ ಲಡ್ಡುಗಳು ಸಿದ್ಧವಾಗುತ್ತಿವೆ. ಅಂದು ಮುಂಜಾನೆ 4 ಗಂಟೆ ಯಿಂದ ರಾತ್ರಿ 12 ಗಂಟೆಯವರೆಗೆ ಭಕ್ತಾದಿಗಳಿಗೆ ಲಡ್ಡುಗಳನ್ನು ವಿತರಿಸುವ ಕಾರ್ಯಕ್ರಮ ನಡೆಯಲಿದೆ ಎಂದು ಯೋಗಾ ನರಸಿಂಗಸ್ವಾಮಿ ದೇಗುಲದ ಸಂಸ್ಥಾಪಕ ಭಾಷ್ಯಂ ಸ್ವಾಮೀಜಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
1994ರಿಂದ ಲಡ್ಡು ವಿತರಿಸುವ ಕಾರ್ಯವನ್ನು ದೇವಸ್ಥಾನದಿಂದ ನಡೆಸಿಕೊಂಡು ಬರಲಾಗಿದ್ದು, ಈ ವರ್ಷವೂ ನೂತನ ವರ್ಷಾರಂಭದ ಅಂಗವಾಗಿ ಜ.1ರ ಬೆಳಗ್ಗೆ 4 ಗಂಟೆಯಿಂದ ಪ್ರಾರಂಭಿಸಿ ಯೋಗಾನರಸಿಂಹಸ್ವಾಮಿ ಯವರಿಗೆ ವಿಶೇಷ ಅಲಂಕಾರ ಮತ್ತು ಶ್ರೀರಂಗಂ, ಮಧುರೆ ಕ್ಷೇತ್ರದಿಂದ ತರಿಸಿರುವ ವಿಶೇಷ ತೋಮಾಲೆ ಮತ್ತು ಸ್ವರ್ಣಪುಷ್ಪದಿಂದ ಶ್ರೀಸ್ವಾಮಿಗೆ ಸಹಸ್ರನಾಮರ್ಚನೆ ಮತ್ತು ದೇವಾಲಯದ ಉತ್ಸವ ಮೂರ್ತಿಯಾದ ಶ್ರೀಮಲಯಪ್ಪನ್ ಸ್ವಾಮಿ, ಪದ್ಮಾವತಿ ಮತ್ತು ಮಹಾಲಕ್ಷ್ಮೀ ದೇವರಿಗೆ ದೇವಾಲಯದ ಆವರಣದಲ್ಲಿ ಏಕಾದಶ ಪ್ರಾಕಾರೋತ್ಸವ ಹಾಗೂ 20 ಕ್ವಿಂಟಲ್ ಪುಳಿಯೋಗರೆ ನಿವೇದನೆ ಮಾಡಲಾಗುತ್ತಿದೆ. ಜತೆಗೆ ದೇವಾಲಯಕ್ಕೆ ಆಗಮಿಸುವ ಎಲ್ಲಾ ಭಕ್ತಾದಿಗಳಿಗೆ ಎರಡು ಲಕ್ಷ ತಿರುಪತಿ ಮಾದರಿಯ ಲಡ್ಡು ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.
ತಿರುಪತಿ ಮಾದರಿಯ 2 ಲಕ್ಷ ಲಡ್ಡು: ಈ ವರ್ಷ ಅಂದಾಜು 2 ಸಾವಿರ ಗ್ರಾಂ ತೂಕದ 10 ಸಾವಿರ ಲಡ್ಡುಗಳು ಹಾಗೂ 150 ಗ್ರಾಂ ತೂಕದ 2 ಲಕ್ಷ ಲಡ್ಡುಗಳನ್ನು ದೇವಾಲಯಕ್ಕೆ ಬರುವ ಎಲ್ಲಾ ಭಕ್ತಾದಿಗಳಿಗೆ ಉಚಿತವಾಗಿ ವಿತರಿಸಲಾಗುವುದು. ಲಡ್ಡು ಪ್ರಸಾದವನ್ನು ವಿಶೇಷವಾಗಿ 60 ಮಂದಿ ನುರಿತ ಬಾಣಸಿಗರಿಂದ ತಯಾರಿಸಲಾಗಿದ್ದು, ಡಿ.21ರಿಂದ ಪ್ರಾರಂಭಿಸಿ 31ರವರೆಗೂ ಲಡ್ಡು ತಯಾರಿ ಕಾರ್ಯ ನಡೆಯಲಿದೆ ಎಂದರು.
ಲಡ್ಡುಗೆ ಬಳಸಿರುವ ಸಾಮಗ್ರಿಗಳು
ಲಡ್ಡು ತಯಾರಿಕೆಗೆ 75 ಕ್ವಿಂಟಲ್ ಕಡ್ಲೆಹಿಟ್ಟು, 200 ಕಿಂಟಾಲ್ ಸಕ್ಕರೆ, 6000 ಲೀಟರ್ ಖಾದ್ಯ ತೈಲ, 200 ಕೆ.ಜಿ ಗೋಡಂಬಿ, 200 ಕೆ.ಜಿ ಒಣದ್ರಾಕ್ಷಿ, 100 ಕೆ.ಜಿ ಬಾದಾಮಿ, 500 ಕೆ.ಜಿ ಡೈಮಂಡ್ ಸಕ್ಕರೆ, 1000 ಕೆ.ಜಿ ಬೂರಾ ಸಕ್ಕರೆ, 20 ಕೆ.ಜಿ ಪಿಸ್ತಾ, 50 ಕೆ.ಜಿ ಏಲಕ್ಕಿ, 40 ಕೆ.ಜಿ ಜಾಕಾಯಿ ಮತ್ತು ಜಾಪತ್ರೆ, 10 ಕೆ.ಜಿ, ಪಚ್ಚೆ ಕರ್ಪೂರ, 100 ಕೆ.ಜಿ ಲವಂಗಗಳನ್ನು ಬಳಸಿ ತಯಾರಿಸಲಾಗಿದೆ ಎಂದು ತಿಳಿಸಿದರು. ದೇವಸ್ಥಾನದ ಆಡಳಿತಾಧಿಕಾರಿ ಎನ್. ಶ್ರೀನಿವಾಸನ್ ಸೇರಿದಂತೆ ಇತರರು ಇದ್ದರು.
ಕ್ರೈಸ್ತ ವರ್ಷಾರಂಭದ ಹಿನ್ನೆಲೆಯಲ್ಲಿ ವಿಶ್ವಶಾಂತಿ, ಭ್ರಾತೃತ್ವ ಮತ್ತು ಸರ್ವಧರ್ಮ ಸಮನ್ವಯತೆಗಾಗಿ ಮತ್ತು ನಾಡಿನ ಎಲ್ಲಾ ಜನರ ಒಳಿತಿಗಾಗಿ ಪ್ರಾರ್ಥಿಸಿ ಈ ಲಡ್ಡು ಪ್ರಸಾದ ನಿವೇದನೆ ಮತ್ತು ಭಕ್ತಾದಿಗಳಿಗೆ ವಿನಿಯೋಗ ಕಾರ್ಯಕ್ರಮವನ್ನು ಭಕ್ತರ ಸಹಕಾರದಿಂದ ನೆರವೇರಿಸಲಾಗುತ್ತಿದೆ.
●ಭಾಷ್ಯಂ ಸ್ವಾಮೀಜಿ, ದೇವಸ್ಥಾನದ ಸಂಸ್ಥಾಪಕ
ಹೊಸ ವರ್ಷದಂದು ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಲಾಗುವುದು. ಜ.2ರಂದು ವೈಕುಂಠ ಏಕಾದಶಿ ಇರುವುದರಿಂದ ಅಂದು ಮುಂಜಾನೆಯೇ ವೈಕುಂಠ ದ್ವಾರದ ಪ್ರವೇಶ ಕಲ್ಪಿಸಲಾಗುವುದು. ನಾಲ್ಕನೆ ಅಲೆ ಆತಂಕವಿರು ವುದರಿಂದ ಭಕ್ತರು ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
●ಎನ್. ಶ್ರೀನಿವಾಸನ್, ದೇವಸ್ಥಾನದ ಆಡಳಿತಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.