Mysore; ರಾಜ್ಯಪಾಲರು ಬಿಜೆಪಿ ಕೈಗೊಂಬೆ; ಇದಕ್ಕೆ ನಾನು ಹೆದರಲ್ಲ..: ಸಿಎಂ ಸಿದ್ದರಾಮಯ್ಯ
Team Udayavani, Aug 2, 2024, 12:52 PM IST
ಮೈಸೂರು: ಇದಕ್ಕೆಲ್ಲ ನಾನು ಹೆದರುವುದಿಲ್ಲ, ನಾವು ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ. ತಪ್ಪು ಮಾಡಿದ್ದರೆ ತಾನೇ ಹೆದರುವುದು. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ. ಜೆಡಿಎಸ್, ಬಿಜೆಪಿ ಕೈಗೊಂಬೆಯಾಗಿ ವರ್ತಿಸಿದ್ದಾರೆ ಎಂದು ರಾಜ್ಯಪಾಲರು ಶೋಕಾಸ್ ನೀಡಿರುವ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿ ಪ್ರತಿಕ್ರಿಯೆ ನೀಡಿದರು.
ಸುದ್ದಿಗಾರರೊಂದಿಗೆ ಶುಕ್ರವಾರ (ಆ.2) ಮಾತನಾಡಿದ ಅವರು, 136 ಶಾಸಕರ ಬೆಂಬಲದಿಂದ ಮುಖ್ಯಮಂತ್ರಿ ಆಗಿರುವವನು ನಾನು. ಆದರೆ ನನ್ನ ಪಾತ್ರ ಇಲ್ಲದಿದ್ದರೂ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸಿದ್ದಾರೆ. ರಾಜ್ಯಪಾಲರಿಗೆ ಸಲಹೆ ನೀಡುವವರು ಯಾರು. ರಾಜಭವನ ಹಾಗೂ ರಾಜ್ಯಪಾಲರ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದರು.
ರಾಜ್ಯಪಾಲರ ನೋಟಿಸ್ ಗೆ ನಾನ್ಯಾಕೆ ಹೆದರಲಿ. ಅಶೋಕ್ ಹೆದರಿರಬೇಕು. ಅವರಿಗೆ ಭಯ, ನನಗಲ್ಲ. ಟಿ.ಜೆ.ಅಹ್ರಾಂ ಒಬ್ಬ ಬ್ಲಾಕ್ ಮೇಲರ್. ಜುಲೈ 26 ಕ್ಕೆ ಬೆಳಿಗ್ಗೆ 11:30 ಕ್ಕೆ ದೂರು ಕೊಡುತ್ತಾನೆ. ಆ ದೂರಿನ ಪರಾಮರ್ಶೆ ಮಾಡದೆ ಆ ದಿನ ಸಂಜೆಯೇ ಶೋಕಾಸ್ ನೋಟಿಸ್ ರೆಡಿ ಇದೆ ಬಂದು ಪಡೆದುಕೊಳ್ಳಿ ಎಂದು ನಮ್ಮ ಅಧಿಕಾರಿ ಎಲ್‌ಕೆ ಅತೀಕ್ ಗೆ ಹೇಳುತ್ತಾರೆ. ಜೊಲ್ಲೆ, ಮುರುಗೇಶ್ ನಿರಾಣಿ, ಜರ್ನಾರ್ದನ ರೆಡ್ಡಿ ವಿರುದ್ಧದ ದೂರು ಇನ್ನೂ ಹಾಗೆಯೇ ಇವೆ. ಅವರಿಗೆ ಶೋಕಾಸ್ ನೋಟಿಸ್ ಕೊಟ್ಟಿಲ್ಲ. ನನಗೆ ಯಾಕೆ ತರಾತುರಿಯಲ್ಲಿ ನೋಟಿಸ್ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.
ಕುಮಾರಸ್ವಾಮಿ ಬಿಜೆಪಿ ಪಾದಯಾತ್ರೆಗೆ ಬೆಂಬಲ ವಿಚಾರವಾಗಿ ಮಾತನಾಡಿ, ಕುಮಾರಸ್ವಾಮಿ ಕೇಂದ್ರದ ಮಂತ್ರಿ, ಜೆಡಿಎಸ್ ನಾಯಕ. ಈ ಕೇಸ್ ನಲ್ಲಿ ಏನು ಇಲ್ಲ ಪಾದಯಾತ್ರೆ ಬೇಡ ಎಂದರು. ಮಳೆ ಜಾಸ್ತಿಯಾಗಿ ಪ್ರವಾಹ ಬಂದಿದೆ ಅದರ ಕಡೆ ಗಮನ ಕೊಡಬೇಕು ಎಂದರು. ಈಗ ಪ್ರವಾಹ ಎಲ್ಲಾ ಹೋಗಿದೆಯಾ? ಕುಮಾರಸ್ವಾಮಿ ಇದನ್ನು ಸ್ವಇಚ್ಛೆಯಿಂದ ಮಾಡುತ್ತಿಲ್ಲ. ಇದನ್ನೆಲ್ಲಾ ನಾವು ಎದುರಿಸಲು ಸಿದ್ಧರಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್
Sugarcane: ನ.8ರಿಂದ ಕಬ್ಬು ಕಟಾವು ಆರಂಭಿಸಿ: ರೈತರಿಗೆ ಸಚಿವ ಶಿವಾನಂದ ಪಾಟೀಲ ಮನವಿ
Hubli: ಜನರ ಸಮಸ್ಯೆ ಆಲಿಸಿ ಸಭಾಪತಿಗೆ ವರದಿ: ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್
Hubli: ವಕ್ಫ್ ಬೋರ್ಡ್ ಆಸ್ತಿ ಸಿದ್ದು ಸರ್ಕಾರದ ಕಬಳಿಕೆಗೆ ಕುಮ್ಮಕ್ಕು: ಪ್ರತಾಪ್ ಸಿಂಹ
ತಹಶೀಲ್ದಾರ್ ಕಚೇರಿಯಲ್ಲಿ ಅನ್ನದಾತರ ಅಹೋರಾತ್ರಿ ಧರಣಿ… ಇಂದು ಜಿಲ್ಲಾಧಿಕಾರಿ ಜೊತೆ ಸಭೆ
MUST WATCH
ಹೊಸ ಸೇರ್ಪಡೆ
Dharwad: ವಾಗ್ವಾದ ನಡೆದು ಎರಡು ಸುತ್ತು ಫೈರಿಂಗ್: ನಾಲ್ವರು ವಶಕ್ಕೆ
BBK11: ನಿಮ್ಮ ಸಹವಾಸನೇ ಬೇಡ.. ಎಲ್ಲದಕ್ಕೂ ಫುಲ್ ಸ್ಟಾಪ್ ಎಂದ ಮೋಕ್ಷಿತಾ; ಒಂಟಿಯಾದ ಮಂಜು
Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್
Jammu-Kashmir: ಕುಪ್ವಾರದಲ್ಲಿ ಸೇನಾ ಕಾರ್ಯಾಚರಣೆ… ಉಗ್ರನ ಹ*ತ್ಯೆ, ಶಸ್ತ್ರಾಸ್ತ್ರ ವಶ
Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.