ನರೇಗಾದಲ್ಲಿ ಹಳ್ಳಿಗಳ ಅಭಿವೃದ್ದಿಪಡಿಸಿಕೊಳ್ಳಿ : ಶಾಸಕ ಮಂಜುನಾಥ್


Team Udayavani, Jun 9, 2021, 10:43 PM IST

Mysore, Hunusuru

ಹುಣಸೂರು: ಕೊರೋನಾದಿಂದಾಗಿ ಸದ್ಯದ ಪರಿಸ್ಥಿತಿಯಲ್ಲಿ ಸರಕಾರದಿಂದ ಅನುದಾನ ಬಿಡುಗಡೆಗೆ ಹಿನ್ನಡೆಯಾಗಿದ್ದು, ಗ್ರಾಮ ಪಂಚಾಯ್ತಿಗಳಿಗೆ ನರೇಗಾ ಯೋಜನೆಯಲ್ಲಿ ಕಾಮಗಾರಿಗಳು ಕೈಗೊಂಡಲ್ಲಿ ಜನರಿಗೆ ಉದ್ಯೋಗದ ಜೊತೆಗೆ ಪರೋಕ್ಷವಾಗಿ ಹಳ್ಳಿಗಳ ಅಭಿವೃದ್ದಿಯಾಗಲಿದ್ದು, ಜನಪ್ರತಿನಿಧಿಗಳ ಈ ಬಗ್ಗೆ ಚಿಂತಿಸಿ, ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕೆಂದು  ಶಾಸಕ ಎಚ್.ಪಿ.ಮಂಜುನಾಥ್ ಸೂಚಿಸಿದರು.

ತಾಲೂಕಿನ ಹನಗೋಡು, ದೊಡ್ಡಹೆಜ್ಜೂರು, ಕಿರಂಗೂರು ಗ್ರಾ.ಪಂ.ಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು ಹಾಗೂ ಪಂಚಾಯ್ತಿಗಳಲ್ಲಿ ಕೈಗೊಂಡಿರುವ ಅಭಿವೃದ್ದಿ ಕಾರ್ಯಗಳನ್ನು ಪರಾಮರ್ಶಿಸಿ ಮಾತನಾಡಿದ ಶಾಸಕರು ಕೊರೊನಾದಿಂದಾಗಿ ಸರಕಾರದಿಂದ ಅನುದಾನ ಬರುವುದು ಕಷ್ಟಕರ, ಹೀಗಾಗಿ ಉದ್ಯೋಗ ಖಾತರಿಯೇ ಆಸರೆಯಾಗಿದ್ದು, ಸರಕಾರದ ಮಹತ್ವಾಕಾಂಕ್ಷೆಯ ಜಲಶಕ್ತಿ ಮರುಹೂರಣ ಕಾಮಗಾರಿಗೆ ಹೆಚ್ಚು ಆದ್ಯತೆ ನೀಡಿ. ಕೆರೆ, ಕಲ್ಯಾಣಿ, ರಸ್ತೆ, ಕೃಷಿಗೆ ಅನುಕೂಲವಾಗುವಂತಹ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಿರೆಂದು ಸಲಹೆ ನೀಡಿ, ತಾಲೂಕಿನ ಅರ್ದಕ್ಕೂ ಹೆಚ್ಚು ಗ್ರಾ.ಪಂ.ಗಳು ೫೦ಲಕ್ಷದಿಂದ ಒಂದು ಕೋಟಿವರೆಗೆ ನರೇಗಾ ಯೋಜನೆಯಡಿ ಅನುದಾನ ಖರ್ಚು ಮಾಡಿವೆ. ಆದರೆ ಹನಗೋಡು ಭಾಗದಲ್ಲಿ ಅಷ್ಟಾಗಿ ಕಾಮಗಾರಿ ಆಗಿಲ್ಲ. ಗ್ರಾ.ಪಂ.ಗಳ ಸದಸ್ಯರೊಳಗಿನ ಬಿನ್ನಾಭಿಪ್ರಾಯ ಬದಿಗೊತ್ತಿ, ಸಮನ್ವಯತೆಯಿಂದ ಕಾಮಗಾರಿ ನಡೆಯುವಂತೆ ಕ್ರಮವಹಿಸಬೇಕು. ಇನ್ನು ಪಿಡಿಓಗಳು ಕಾಮಗಾರಿ ಅನುಷ್ಟಾನದಲ್ಲಿ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ಪಡೆದು ಬದ್ದತೆಯಿಂದ ಕೆಲಸ ಮಾಡಬೇಕೆಂದು ಸೂಚಿಸಿದರು.

ಜಲಶಕ್ತಿ ಯೋಜನೆಯಡಿ ಅಂತರ್ಜಲ ವೃದ್ದಿಗೆ ನರೇಗಾದಲ್ಲಿ ಶೇ.65ರಷ್ಟು ಪ್ರಗತಿ ಸಾಧಿಸಿದರೆ ಶೇ.35ರಷ್ಟು ರಸ್ತೆ ಅಭಿವೃದ್ದಿ ಕಾಮಗಾರಿ ನಡೆಸಬಹುದಾಗಿದೆ.  ನರೇಗಾ ಯೋಜನೆಯಡಿ ಎಷ್ಟು ಬೇಕಾದರೂ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬಹುದಾಗಿದೆ ಎಂದು  ತಾ.ಪಂ.ಇ.ಓ.ಗಿರೀಶ್ ತಿಳಿಸಿದರು.

ಕೊರೊನಾ ನಿಯಂತ್ರಣಕ್ಕೆ ಶ್ರಮಿಸಿ:

ಎಲ್ಲೆಡೆ ಆಶಾ-ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಕೊರೊನಾ ತಡೆಗಟ್ಟುವಲ್ಲಿ ಆಗಿರುವ ಪ್ರಗತಿ ಬಗ್ಗೆ ಚರ್ಚಿಸಿದ ಶಾಸಕರು ನಿಮ್ಮೆಲ್ಲರ ಸಹಕಾರದಿಂದ ಕೊರೊನಾ ನಿಯಂತ್ರಣಗೊಳ್ಳುತ್ತಿದೆ ಎಂದು ಪ್ರಶಂಸಿಸಿ, ದೊಡ್ಡಹೆಜ್ಜೂರು ಪಂಚಾಯ್ತಿಯಲ್ಲಿ ಹೆಚ್ಚಿನ ಮಹಿಳೆಯರಲ್ಲಿ ಕೊರೊನಾ  ಪಾಸಿಟೀವ್ ಪ್ರಕರಣಗಳು ಹೆಚ್ಚಿರುವುದು ಆತಂಕಕಾರಿ ಎಂದಾಗ ಈ ಭಾಗಕ್ಕೆ ಸಂಘಗಳಿಗೆ ಸಾಲ ನೀಡಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳು ಹೆಚ್ಚು ಬರುತ್ತಿರುವುದರಿಂದ ಹೆಚ್ಚುತ್ತಿದೆ ಎಂದು ಗ್ರಾಮಸ್ಥರು ದೂರಿದರು.

ತಹಸೀಲ್ದಾರ್ ಬಸವರಾಜು ಸೋಂಕಿತರು ಹೆಚ್ಚಿರುವ ಗ್ರಾಮಗಳಲ್ಲಿ ಹೆಚ್ಚು ಪರೀಕ್ಷೆ ನಡೆಸುವ ಮೂಲಕ ನಿಯಂತ್ರಣಗೊಳಿಸಬೇಕು. ಸೋಂಕಿರು ಹೆಚ್ಚಿರುವ ಮುದಗನೂರು, ಕೊಳವಿಗೆಯನ್ನು ಸೀಲ್‌ ಡೌನ್ ಮಾಡಬೇಕು,  ಹನಗೋಡು ಆಸ್ಪತ್ರೆಯಲ್ಲಿ ಹೆಚ್ಚಿನ ಪರೀಕ್ಷೆ ನಡೆಯುತ್ತಿಲ್ಲ, ನಾಳೆಯಿಂದಲೇ ಇಲ್ಲಿ ಕನಿಷ್ಟ ನೂರು ಮಂದಿಯ ಪರೀಕ್ಷೆ ನಡೆಸಬೇಕು. ಜೊತೆಗೆ ಎಲ್ಲ ವ್ಯಾಪಾರಸ್ಥರನ್ನು ಕಡ್ಡಾಯವಾಗಿ ತಪಾಸಣೆಗೊಳಪಡಿಸಬೇಕೆಂದು ಡಾ.ಜೋಗೇಂದ್ರನಾಥರಿಗೆ ಸೂಚಿಸಿದರು.

ಅಂಗನವಾಡಿ ಕಟ್ಟಡಕ್ಕೆ ಬೇಡಿಕೆ:

ದೊಡ್ಡಹೆಜ್ಜೂರಿನ ಎರಡೂ ಹಾಗೂ ಮಾದಹಳ್ಳಿಯ ಅಂಗನವಾಡಿಗಳಿಗೆ ಸ್ವಂತ ಕಟ್ಟಡವಿಲ್ಲ. ಮಕ್ಕಳು ಹೆಚ್ಚಿದ್ದರೂ ಇನ್ನೂ ಮಿನಿ ಅಂಗನವಾಡಿಯೇ ಆಗಿದ್ದು. ಈ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಬೇಕೆಂದು ಕಾರ್ಯಕರ್ತೆಯರು ಶಾಸಕರಲ್ಲಿ ಭೇಡಿಕೆ ಇಟ್ಟರು.  ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಸಕರು ಭರವಸೆ ಇತ್ತರು.

ಹನಗೋಡು ಆಸ್ಪತ್ರೆಗೆ ಆಂಬುಲೆನ್ಸ್:

ಹನಗೋಡು ಆಸ್ಪತ್ರೆಗೆ ಹೆಚ್ಚು ರೋಗಿಗಳ ಬರುವುದರಿಂದ ಅವರ ಅನುಕೂಲಕ್ಕಾಗಿ ಶಾಸಕರ ನಿಧಿಯಿಂದ ಸುಸಜ್ಜಿತ ಆಂಬುಲೆನ್ಸ್ ನೀಡಲಾಗುವುದು. ಇದರ ನಿರ್ವಹಣೆಯನ್ನು ಆಸ್ಪತ್ರೆಯ ರಕ್ಷಾಸಮಿತಿ ನಿರ್ವಹಿಸುವಂತೆ ವೈದ್ಯರಿಗೆ ಸೂಚಿಸಿದರು.

ಈ ವೇಳೆ ಹನಗೋಡು ಗ್ರಾ.ಪಂ.ಅಧ್ಯಕ್ಷೆ ನೂರ್‌ಜಹಾನ್, ಉಪಾಧ್ಯಕ್ಷೆ ಪವಿತ್ರ, ಕಿರಂಗೂರು ಗ್ರಾ.ಪಂ.ಅಧ್ಯಕ್ಷೆ ನಿರ್ವಾಣಿ, ದೊಡ್ಡಹೆಜ್ಜೂರು ಗ್ರಾ.ಪಂ.ಅಧ್ಯಕ್ಷ ಶಿವಶಂಕರ್, ಉಪಾಧ್ಯಕ್ಷೆ ಅಂಬಿಕಾ, ಪಿಡಿಓಗಳಾದ ನಾಗೇಂದ್ರಕುಮಾರ್, ಶ್ರೀದೇವಿ, ಮಂಜುನಾಥ್, ಎಪಿಎಂಸಿ ಅಧ್ಯಕ್ಷ ಮುದಗನೂರುಸುಭಾಷ್, ಗ್ರಾಮಲೆಕ್ಕಿಗ ಮಹದೇವ್ ಸೇರಿದಂತೆ ಗ್ರಾ.ಪಂ.ಸದಸ್ಯರುಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.