ಮೈಸೂರು ಪ್ರಕರಣ: ಪಕ್ಕಾ ಪ್ಲ್ಯಾನ್ ಮಾಡಿ ಅತ್ಯಾಚಾರ ನಡೆಸಿದ್ದರು ಹೆದ್ದಾರಿ ದರೋಡೆಕೋರರು
ಹೋಗಿದ್ದು ಹೆದ್ದಾರಿ ದರೋಡೆಗೆ, ನಡೆಸಿದ್ದು ಅತ್ಯಾಚಾರ!
Team Udayavani, Aug 28, 2021, 11:44 AM IST
ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಂಗಳವಾರ ಸಂಜೆ ನಡೆದಿದ್ದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಐವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ತಮಿಳುನಾಡಿನ ಸತ್ಯಮಂಗಲದಲ್ಲಿ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಆರೋಪಿಗಳಲ್ಲಿ ನಾಲ್ವರು ತಮಿಳುನಾಡು ಮೂಲದವರಾದರೆ, ಓರ್ವ ಚಾಮರಾಜನಗರದವನು ಎಂದು ವರದಿಯಾಗಿದೆ. ಆರೋಪಿಗಳು ಮೈಸೂರು ಎಪಿಎಂಸಿಯಲ್ಲಿ ಕೂಲಿ ಕಾರ್ಮಿಕರಾಗಿದ್ದರು. ಈ ಹಿಂದೆಯೂ ಹಲವು ಹೆದ್ದಾರಿ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎಂದು ವರದಿಯಾಗಿದೆ.
ಬಂದಿದ್ದು ದರೋಡೆಗೆ: ಬಂಧಿತ ತಂಡ ಈಗಾಗಲೇ ಮೈಸೂರಿನಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿತ್ತು. ಇದಕ್ಕೂ ಮುನ್ನ ಎರಡು ಮೂರು ಕಡೆಗಳಲ್ಲಿ ಈ ರೀತಿಯ ಕೃತ್ಯಕ್ಕೆ ಕೈಹಾಕಿತ್ತು. ಮಂಗಳವಾರವೂ ದರೋಡೆ ಮಾಡಲು ಹೊಂಚು ಹಾಕಿ ಹೋದವರಿಗೆ ವಿದ್ಯಾರ್ಥಿನಿ ಮತ್ತು ಆಕೆಯ ಸ್ನೇಹಿತ ಸಿಕ್ಕಿಬಿದ್ದಿದ್ದರು.
ಕೃತ್ಯ ನಡೆದ ಸ್ಥಳದಲ್ಲಿ ಈ ಆರೋಪಿಗಳು ನಿರಂತರವಾಗಿ ಓಡಾಡುತ್ತಿದ್ದರು. ಇತ್ತ ಯುವಕ ಹಾಗೂ ಯುವತಿ ಮೂರು ದಿನ ಅದೇ ಸ್ಥಳದಲ್ಲಿ ಕುಳಿತುಕೊಂಡು ಮಾತನಾಡುತ್ತಿರುವುದನ್ನು ಗಮನಿಸಿದ್ದ ತಂಡ ನಾಲ್ಕನೇ ದಿನ ಕೃತ್ಯ ಎಸಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ:ಮೈಸೂರು ಘಟನೆ: ತಮಿಳುನಾಡಿನಲ್ಲಿ ಐವರನ್ನು ವಶಕ್ಕೆ ಪಡೆದ ಪೊಲೀಸರು, ಇನ್ನೂ ದೂರು ನೀಡದ ಯುವತಿ
ಸದ್ಯ ಸತ್ಯಮಂಗಲ ಕಾಡಿನಲ್ಲಿ ಸೆರೆ ಹಿಡಿದಿರುವ ಆರೋಪಿಗಳನ್ನು ಪೊಲಿಸರು ಮೈಸೂರಿಗೆ ಕರೆತಂದಿದ್ದಾರೆ. ಅಜ್ಞಾತ ಸ್ಥಳವೊಂದರಲ್ಲಿರಿಸಿ ವಿಚಾರಣೆ ನಡೆಸುತ್ತಿದ್ದಾರೆ.
ವಾಟ್ಸಪ್ ನಲ್ಲೇ ಫೋಟೋ ಗುರುತಿಸುವಿಕೆ: ಪ್ರಕರಣದ ಸಂತ್ರಸ್ತೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಪೋಷಕರೊಂದಿಗೆ ಮುಂಬೈಗೆ ಮರಳಿದ್ದಾರೆ. ಪ್ರಕರಣದ ಸಂಬಂಧ ಯಾವುದೇ ಹೇಳಿಕೆ ಕೊಡದೆ ಹೋಗಿರುವ ಕಾರಣ ಪೊಲೀಸರು ಆರೋಪಿಗಳ ಫೋಟೋವನ್ನು ವಾಟ್ಸಪ್ ನಲ್ಲಿ ಕಳುಹಿಸಿ ಗುರುತಿಸಲು ಹೇಳಿದ್ದಾರೆ. ಆಕೆಯ ಸ್ನೇಹಿತನಿಗೂ ಫೋಟೋ ತೋರಿಸಿರುವ ಪೊಲೀಸರು ಆರೋಪಿಗಳ ಬಗ್ಗೆ ಖಾತ್ರಿ ಮಾಡಿಕೊಂಡಿದ್ದಾರೆ.
ಪ್ರವೀಣ್ ಸೂದ್ ಸುದ್ದಿಗೋಷ್ಠಿ: ಪ್ರಕರಣ ಸಂಬಂಧ ಶನಿವಾರ ಮಧ್ಯಾಹ್ನ12. 30 ಕ್ಕೆ ಡಿಜಿಐಜಿಪಿ ಪ್ರವೀಣ್ ಸೂದ್ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಐವರು ಆರೋಪಿಗಳ ಬಂಧನದ ಬಗ್ಗೆ ಪ್ರವೀಣ್ ಸೂದ್ ಅವರು ಮಾಹಿತಿ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.