ಮೈಸೂರು ಜಿಪಂ: ಮತ್ತೆ ಶುರುವಾಗಿದೆ ಮೈತ್ರಿ ಕಸರತ್ತು


Team Udayavani, Jan 27, 2019, 11:26 AM IST

jilla.jpg

ಮೈಸೂರು: ಮೈಸೂರು ಜಿಲ್ಲಾ ಪಂಚಾಯ್ತಿಯಲ್ಲಿ ಅಧಿಕಾರಕ್ಕಾಗಿ ಮೈತ್ರಿಗೆ ಸಿದ್ಧವಾಗಿರುವ ಕಾಂಗ್ರೆಸ್‌ನ್ನು ಜೆಡಿಎಸ್‌ನ ಸ್ಥಳೀಯ ನಾಯಕರು ಒಲ್ಲೆ ಎನ್ನುತ್ತಿರು ವುದು, ಬಿಜೆಪಿ ಪಾಲಿಗೆ ವರದಾನವಾಗಿ ಪರಿಣಿಮಿಸಿದೆ.

49 ಸದಸ್ಯ ಬಲದ ಮೈಸೂರು ಜಿಲ್ಲಾ ಪಂಚಾಯ್ತಿಯಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ವಿಲ್ಲ. ಕಾಂಗ್ರೆಸ್‌ 23, ಜೆಡಿಎಸ್‌ 17, ಬಿಜೆಪಿ 8 ಹಾಗೂ ಓರ್ವ ಪಕ್ಷೇತರ ಸದಸ್ಯರಿದ್ದಾರೆ. ಕಳೆದ ಅವಧಿ ಯಿಂದಲೂ ಜಿಪಂನಲ್ಲಿ ಜೆಡಿಎಸ್‌-ಬಿಜೆಪಿ ಜೊತೆಗೆ ಅಧಿಕಾರ ಹಂಚಿಕೊಂಡಿದೆ. 23 ಸದಸ್ಯರನ್ನು ಹೊಂದಿರುವ ಕಾಂಗ್ರೆಸ್‌, ಅತಿದೊಡ್ಡ ಪಕ್ಷವಾಗಿದ್ದರೂ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಬೇಕಾಗಿ ಬಂದಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ದ್ದಾಗಲೂ ಮೈಸೂರು ಜಿಪಂನಲ್ಲಿ ಕಾಂಗ್ರೆಸ್‌ ಅಧಿಕಾರ ದಿಂದ ಹೊರಗಿತ್ತು. ಈಗ ರಾಜ್ಯದಲ್ಲಿ ಜೆಡಿಎಸ್‌- ಕಾಂಗ್ರೆಸ್‌ ಹೊಂದಾಣಿಕೆ ಮಾಡಿಕೊಂಡು ಆಡಳಿತ ನಡೆಸುತ್ತಿರುವುದರಿಂದ ಬಿಬಿಎಂಪಿ ಮಾದರಿಯಲ್ಲಿ ಮೈಸೂರು ಜಿಪಂನಲ್ಲೂ ಕಾಂಗ್ರೆಸ್‌-ಜೆಡಿಎಸ್‌ ಅಧಿಕಾರ ಹಂಚಿಕೊಳ್ಳಬೇಕೆಂಬುದು ಜಿಪಂನ ಕಾಂಗ್ರೆಸ್‌ ಸದಸ್ಯರ ವಾದ. ಆದರೆ, ಜೆಡಿಎಸ್‌ ಸದಸ್ಯರು ಮಾತ್ರ ರಾಜ್ಯಮಟ್ಟದ ಹೊಂದಾಣಿಕೆ ತೀರ್ಮಾನವೇ ಬೇರೆ, ಸ್ಥಳೀಯ ಮಟ್ಟದಲ್ಲಿನ ತೀರ್ಮಾನವೇ ಬೇರೆ, ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಜೊತೆಗೆ ಹೊಂದಾಣಿಕೆ ಬೇಡ, ಬಿಜೆಪಿ ಜೊತೆಗಿನ ಮೈತ್ರಿ ಮುಂದುವರಿಸೋಣ ಎನ್ನುತ್ತಿದ್ದಾರೆ.ಆದರೆ, ಕಾಂಗ್ರೆಸ್‌ನ ಸದಸ್ಯರು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ಜೆಡಿಎಸ್‌ ನಾಯಕರನ್ನು ಮೈತ್ರಿಗೆ ಒಪ್ಪಿಸುವಂತೆ ಒತ್ತಡ ಹೇರುತ್ತಿದ್ದಾರೆ.

ಅಧಿಕಾರ ತಪ್ಪಿಸಿದ ಅಸಮಾಧಾನ: ಜಿಪಂ ಚುನಾವಣೆ ನಡೆದ ನಂತರ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಿಸುವಾಗ ಸರ್ಕಾರ ಮೊದಲಿಗೆ ಅಧ್ಯಕ್ಷ ಸ್ಥಾನದ ಮೀಸಲಾತಿಯನ್ನು ಬಿಸಿಎಂ-ಎ ವರ್ಗಕ್ಕೆ ಕಲ್ಪಿಸಿತ್ತು. ಅಂದು ಶಾಸಕರಾಗಿದ್ದ ಜಿ.ಟಿ.ದೇವೇಗೌಡರ ಕಟ್ಟಾ ಬೆಂಬಲಿಗ ಜೆಡಿಎಸ್‌ನ ಬೀರಿಹುಂಡಿ ಬಸವಣ್ಣ ಸಹಜವಾಗಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ತಾವು ಅಧ್ಯಕ್ಷರಾಗುವುದನ್ನು ತಪ್ಪಿಸಲು ಸ್ಥಳೀಯ ಕಾಂಗ್ರೆಸ್‌ ಮುಖಂಡರ ಮಾತು ಕೇಳಿ ಅಂದು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಮೀಸಲಾತಿಯನ್ನು ಬದಲಾಯಿಸಿದರು. ಇದರಿಂದ ಸುಲಭದಲ್ಲಿ ದಕ್ಕುತ್ತಿದ್ದ ಅಧ್ಯಕ್ಷ ಸ್ಥಾನ ಕೈತಪ್ಪಿತು ಎಂಬುದು ಬೀರಿಹುಂಡಿ ಬಸವಣ್ಣ ಸೇರಿದಂತೆ ಜೆಡಿಎಸ್‌ನ ಹಿರಿಯ ಸದಸ್ಯರ ಸಮಾಧಾನಕ್ಕೆ ಕಾರಣವಾಗಿದೆ.

ಆಂತರಿಕ ಒಪ್ಪಂದ: ಬಿಸಿಎಂ-ಎ ಮಹಿಳೆಗೆ ಮೀಸಲಾತಿ ಕಲ್ಪಿಸಿದ್ದರಿಂದ ಜೆಡಿಎಸ್‌ನ ನಯಿಮಾ ಸುಲ್ತಾನ 20 ತಿಂಗಳು ಹಾಗೂ ಪರಿಮಳಾ ಶ್ಯಾಂ 40 ತಿಂಗಳು ಅಧ್ಯಕ್ಷ ಸ್ಥಾನ ನೀಡಲು ಜೆಡಿಎಸ್‌ ನಾಯಕರು ಆಂತರಿಕ ಒಪ್ಪಂದದಂತೆ ಮೊದಲಿಗೆ ಅಧಿಕಾರವಹಿಸಿಕೊಂಡ ನಯಿಮಾಸುಲ್ತಾನ 30 ತಿಂಗಳಾದರೂ ಅಧಿಕಾರ ಬಿಟ್ಟುಕೊಡದ ಕಾರಣ, ಸ್ವಪಕ್ಷೀಯರ ಕೆಂಗಣ್ಣಿಗೆ ಗುರಿಯಾಗಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಪಂಚಾಯತ್‌ ರಾಜ್‌ ನಿಯಮಾವಳಿಯಂತೆ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿರುವ ಸಚಿವ ಸಾ.ರಾ.ಮಹೇಶ್‌ ಸಹೋದರ ಸಾ.ರಾ.ನಂದೀಶ್‌ ಹಂಗಾಮಿ ಅಧ್ಯಕ್ಷರಾಗಿದ್ದಾರೆ. ನಯಿಮಾ ಸುಲ್ತಾನ ರಾಜೀನಾಮೆ ನೀಡಿದ ದಿನವೇ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಜಿ.ನಟರಾಜ್‌ ರಾಜೀನಾಮೆ ನೀಡಿದ್ದಾರೆ.ಹೀಗಾಗಿ ತೆರವಾಗಿರುವ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಗಳಿಗೆ ಫೆ.6ರಂದು ಚುನಾವಣೆ ನಿಗದಿಯಾಗಿದೆ. ಅಷ್ಟರಲ್ಲಿ ಯಾವ್ಯಾವ ರೀತಿಯ ರಾಜಕೀಯ ಪ್ರಹಸನಗಳು ನಡೆಯುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

● ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.