ಮೈಸೂರು ಮೇಯರ್ ಪಟ್ಟ ಕಾಂಗ್ರೆಸ್ ತೆಕ್ಕೆಗೆ
Team Udayavani, Nov 18, 2018, 6:25 AM IST
ಮೈಸೂರು: ಮೈಸೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಯಶಸ್ವಿಯಾಗಿದ್ದು, ಪಾಲಿಕೆಯ ನೂತನ ಮೇಯರ್ ಆಗಿ ಕಾಂಗ್ರೆಸ್‌ನ ಪುಷ್ಪಲತಾ ಜಗನ್ನಾಥ್ ಹಾಗೂ ಉಪಮೇಯರ್ ಆಗಿ ಜೆಡಿಎಸ್‌ನ ಶಫಿ ಅಹಮ್ಮದ್ ಆಯ್ಕೆಯಾದರು.
ಈ ಬಾರಿಯ ಮೇಯರ್ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪ ಮೇಯರ್ ಸ್ಥಾನ ಬಿಸಿಎಗೆ ಮೀಸಲಾಗಿತ್ತು. ಮೈತ್ರಿ ಧರ್ಮದ ಆಧಾರದ ಮೇಲೆ ಕಾಂಗ್ರೆಸ್-ಜೆಡಿಎಸ್ ಕ್ರಮವಾಗಿ ಮೇಯರ್ ಹಾಗೂ ಉಪಮೇಯರ್ ಸ್ಥಾನ ಅಲಂಕರಿಸಿದವು. ಶನಿವಾರ ನಡೆದ ಚುನಾವಣೆಯಲ್ಲಿ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್‌ನ ಪುಷ್ಪಲತಾ ಜಗನ್ನಾಥ್ ಹಾಗೂ ಉಪ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಜೆಡಿಎಸ್‌ನ ಶಫಿ ಅಹಮ್ಮದ್ ತಲಾ 48 ಮತ ಪಡೆದರು. ಮೇಯರ್ ಸ್ಥಾನ ಬಹುತೇಕ ಕಾಂಗ್ರೆಸ್‌ಗೆ ಎಂಬುದು ಶುಕ್ರವಾರ ಸಂಜೆ ವೇಳೆಗೆ ಖಚಿತವಾಗಿತ್ತು.
ಆದರೆ, ಶಾಂತಕುಮಾರಿ ಹಾಗೂ ಶೋಭಾ ಅವರ ಹೆಸರು ಮುಂಚೂಣಿಯಲ್ಲಿದ್ದವು. ಪುಷ್ಪಲತಾ ಜಗನ್ನಾಥ್ ಸಹ ಮೇಯರ್ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು. ಇವರಲ್ಲಿ ಯಾರಿಗೆ ಮೇಯರ್ ಪಟ್ಟ ನೀಡಬೇಕೆಂಬ ಜವಾಬ್ದಾರಿಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ಹೆಗಲಿಗೆ ಕಟ್ಟಲಾಗಿತ್ತು. ಸಿದ್ದರಾಮಯ್ಯ ನಿರ್ದೇಶನದಂತೆ ಮೇಯರ್ ಸ್ಥಾನಕ್ಕೆ ಪುಷ್ಪಲತಾ ಜಗನ್ನಾಥ್ ನಾಮಪತ್ರ ಸಲ್ಲಿಸಿದರು.
ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಮ.ವಿ.ರಾಮಪ್ರಸಾದ್ ತಟಸ್ಥರಾಗಿ ಉಳಿದರು. ಬಿಜೆಪಿ ಸಂಸದ ಪ್ರತಾಪಸಿಂಹ ಚುನಾವಣೆಗೆ ಗೈರಾಗಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.