![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 29, 2021, 6:05 PM IST
ಮೈಸೂರು: ಅಧಿಕಾರಿಗಳನ್ನು ವರ್ಗಾವಣೆ ಮಾಡುವುದೇ ತಾಕತ್ತಾದರೆ, ಅಂತಹತಾಕತ್ತು ನನಗೆ ಬೇಡ. ಒಬ್ಬ ಸಂಸದನಾಗಿ ನಾನು ನನ್ನ ಕೆಲಸದಲ್ಲಿ ತಾಕತ್ತು ತೋರಿಸಿದ್ದೇನೆ ಎಂದು ಸಂಸದ ಪ್ರತಾಪ್‌ಸಿಂಹ ಜಿಟಿಡಿ ಹೇಳಿಕೆಗೆ ಟಾಂಗ್ ನೀಡಿದರು.
ತಾಕತ್ತಿದ್ದರೆ ಡೀಸಿ ವರ್ಗಾವಣೆ ಮಾಡಿಸಿ ಎಂಬ ಜಿಟಿಡಿ ಹೇಳಿಕೆಗೆ ಪ್ರತಿಕ್ರಿಯಿಸಿದಸಂಸದ, ಒಬ್ಬ ಸಂಸದನಾಗಿ ನಾನು ನನ್ನ ಕೆಲಸದಲ್ಲಿ ತಾಕತ್ತು ತೋರಿಸಿದ್ದೇನೆ. ಮೈಸೂರಿಗೆ ನಾನು ಹೊರಗಿನವನು. ಆದರೂ ಮೊದಲ ಚುನಾವಣೆಯಲ್ಲಿಮೈಸೂರು-ಕೊಡಗಿನ ಜನ 30 ಸಾವಿರ ಅಂತರದ ಮತಗಳಿಂದ ಗೆಲ್ಲಿಸಿದ್ದರು.
ನನ್ನತಾಕತ್ತು ತೋರಿಸಿ ಒಳ್ಳೆಯ ಕೆಲಸ ಮಾಡಿದ್ದರಿಂದಾಗಿ, 2ನೇ ಚುನಾವಣೆಯಲ್ಲಿ1.40 ಲಕ್ಷ ಮತಗಳಿಂದ ಗೆಲ್ಲಿಸಿದರು. ಇದಕ್ಕಿಂತಲೂ ನಾನು ಯಾವ ತಾಕತ್ತುತೋರಿಸಬೇಕು. ಡೀಸಿಯನ್ನೋ, ಇನ್ಯಾರೋ ಅಧಿಕಾರಿಯನ್ನು ವರ್ಗಾವಣೆಮಾಡಿಸೋದು ರಾಜಕಾರಣಿಗಳಿಗೆ ಕಾಮನ್. ನನ್ನ ದೃಷ್ಟಿಯಲ್ಲಿ ಅದು ಅತ್ಯಂತಸಣ್ಣ ಕೆಲಸ. ಅಂತಹ ಸಣ್ಣ ಕೆಲಸವನ್ನ ನಾನು ಮಾಡುವುದಿಲ್ಲ. ಸರ್ಕಾರ ಕೊಟ್ಟಅಧಿಕಾರಿಗಳ ಜೊತೆಗೆ ಕೆಲಸ ಮಾಡುತ್ತೆನೆ ಎಂದರು.
ಸಾರಾ ಅವರನ್ನು ಹೊಗಳಿದ್ದೆ: ಇತ್ತೀಚೆಗೆ ಸಾ.ರಾ ಮಹೇಶ್‌ರನ್ನ ಹೊಗಳಿದ್ದು ಜಿ.ಟಿದೇವೇಗೌಡರಿಗೆ ಇಷ್ಟವಾಗಿಲ್ಲ ಅನ್ಸುತ್ತೆ. ಹೀಗಾಗಿ ನನ್ನ ವಿರುದ್ಧ ಮಾತನಾಡಿದ್ದಾರೆ.ಜಿ.ಟಿ.ದೇವೇಗೌಡರು ನನಗೆ ತಂದೆ ಇದ್ದಂತೆ. ಅವರು ಹರೀಶ್‌ಗೌಡರನ್ನ ಹೇಗೆನೋಡಿಕೊಂಡಿದ್ದಾರೋ ಹಾಗೇ ನನ್ನನ್ನ ನೋಡಿಕೊಂಡಿದ್ದಾರೆ. ರಾಜಕೀಯದಲ್ಲಿನನ್ನನ್ನು ಬೈಯುವ ಹಕ್ಕು ಜಿ.ಟಿ ದೇವೇಗೌಡರಿಗೆ ಇದೆ. ಅವರು ಬೈಯುವುದನ್ನುನಾನು ಪ್ರೀತಿಯಿಂದಲೇ ಸ್ವೀಕರಿಸಿಸುತ್ತೇನೆ ಎಂದು ಹೇಳಿದರು.
ನಾನು ಹಳ್ಳಿಗಳಿಗೆ ಭೇಟಿ ಕೊಟ್ಟಿದ್ದಾಗ ಶಾಸಕರ ಕಾರ್ಯವೈಖರಿ ನೋಡಿದ್ದೇನೆ.ಕೆ.ಆರ್ ನಗರಕ್ಕೆ ಭೇಟಿ ಕೊಟ್ಟ ಸಂದರ್ಭದಲ್ಲಿ ಸಾರಾ ಮಹೇಶ್ ಜಿಲ್ಲೆಗೆ ಮೇಲ್ಪಂಕ್ತಿಯಾಗುವಂತೆ ಕೆಲಸ ಮಾಡಿದ್ದಾರೆ ಅಂತಾ ಹೇಳಿದ್ದು ನಿಜ. ಇದರಲ್ಲಿ ಯಾರನ್ನುಹೊಗಳುವ, ತೆಗಳುವ ಉದ್ದೇಶವಿಲ್ಲ. ಇದನ್ನ ಅಪಾರ್ಥ ಮಾಡಿ ಕೊಂಡರೆ ನಾನೇನು ಮಾಡಲು ಸಾಧ್ಯವಿಲ್ಲ ಎಂದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.