ದೇವಾಲಯ ನೆಲಸಮ ಅಕ್ಷಮ್ಯ ಅಫರಾಧ: ಸಂಸದ ಪ್ರತಾಪ್ ಸಿಂಹ ಕಿಡಿ
Team Udayavani, Sep 12, 2021, 8:42 PM IST
ಮೈಸೂರು: ದೇವಾಲಯ ನೆಲಸಮ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿರುವ ಸಂಸದ ಪ್ರತಾಪ್ ಸಿಂಹ ಇದೊಂದು ಅಕ್ಷಮ್ಯ ಅಫರಾಧ ಎಂದು ಕಿಡಿಕಾರಿದ್ದಾರೆ.
ಅವರು ನಂಜನಗೂಡಿನ ಹುಚ್ಚಗಣಿ ಗ್ರಾಮಕ್ಕೆ ಸಂಸದ ಪ್ರತಾಪ್ ಸಿಂಹ ಭೇಟಿದ್ದು ಬಳಿಕ ದೇವಾಲಯ ನೆಲಸಮಗೊಳಿಸಿರುವ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರ ಜತೆ ಮಾತುಕತೆ ನಡೆಸಿದರು.
ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸುಪ್ರೀಂಕೋರ್ಟ್ ಆದೇಶವನ್ನು ಸರಿಯಾದ ರೀತಿಯಲ್ಲಿ ಪರಿಶೀಲನೆ ಮಾಡಿಲ್ಲ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ಎಡವಟ್ಟಿನಿಂದ ಹಿಂದೂ ಧಾರ್ಮಿಕ ಸ್ಥಳ ಮತ್ತು ಭಾವೈಕ್ಯತೆಗೆ ಧಕ್ಕೆ ಬಂದಿದೆ ಎಂದರು.
ಶ್ರೀ ಶಕ್ತಿ ಮಹಾದೇವಮ್ಮ ದೇವಾಲಯ ಬರೋಬ್ಬರಿ 800 ವರ್ಷಗಳ ಇತಿಹಾಸವುಳ್ಳ ದೇವಾಲಯವಾಗಿದೆ. ಯಾರಿಗೂ ತೊಂದರೆಯಾಗದಿದ್ದ ದೇವಾಲಯವನ್ನು ನೆಲಸಮಗೊಳಿಸಿದ್ದು ಅಕ್ಷಮ್ಯ ಅಫರಾಧವಾಗಿದ್ದು ಇದನ್ನು ಸಮರ್ಥಿಸಲು ಸಾಧ್ಯವೇ ಎಂದು ಹೇಳಿದರು.
ಇದನ್ನೂ ಓದಿ:ಗಣಪನ ಕೊರಳಲ್ಲಿ ಹೆಡೆ ಬಿಚ್ಚಿ ಭಕ್ತರಿಗೆ ದರ್ಶನ ನೀಡಿದ ಜೀವಂತ ನಾಗರ ಹಾವು !
ಇದೊಂದು ಇತಿಹಾಸ ಪೂರ್ವದ ದೇವಾಲಯ ಎಂಬುವುದಕ್ಕೆ ಈ ವೀರಗಲ್ಲುಗಳೇ ಸಾಕ್ಷಿ ಹೇಳುತ್ತಿವೆ ಇದನ್ನು ಕೂಡ ಅಧಿಕಾರಿಗಳು ಗಮನಿಸಿಲ್ಲ ಇನ್ನು 92 ದೇವಾಲಯಗಳು ರಾಜ್ಯದ ವಿವಿಧ ಮೂಲೆ ಗಳಲ್ಲಿವೆ ಅವುಗಳನ್ನು ಯಾವುದೇ ಕಾರಣಕ್ಕೂ ಅಧಿಕಾರಿಗಳು ಮುಟ್ಟಲು ಬಿಡುವುದಿಲ್ಲ ಎಂದು ಗುಡುಗಿದರು .
ಅಧಿಕಾರಿಗಳಿಗೆ ತಕ್ಕ ಪಾಠ ಕಲಿಸುತ್ತೇವೆ ನೀವು ಆತಂಕಕ್ಕೆ ಒಳಗಾಗುವುದು ಬೇಡಿ ಎಂದ ಅವರು ಈಗಾಗಲೇ ದಾನಿಗಳು ದೇವಾಲಯ ನಿರ್ಮಾಣಕ್ಕೆ ಭೂಮಿ ನೀಡಲು ಮುಂದಾಗಿದ್ದಾರೆ ಅಲ್ಲದೆ ಉತ್ತಮ ರೀತಿಯಲ್ಲಿ ದೇವಾಲಯ ನಿರ್ಮಾಣ ಮಾಡಲು ನಾವು ಸಹಕರಿಸುತ್ತೇವೆ ಎಂದು ಹೇಳಿದ್ದಾರೆ.
ಇಲ್ಲಿಯ ವಾಸ್ತವ ವರದಿಯನ್ನು ಈಗಾಗಲೇ ಪರಿಶೀಲನೆ ಮಾಡಲಾಗಿದೆ ಇದನ್ನು ಬಿಜೆಪಿ ಪಕ್ಷದ ದೊಡ್ಡ ಮಟ್ಟದ ನಾಯಕರು ಹಾಗೂ ಹಿರಿಯ ಅಧಿಕಾರಿಗಳ ಜೊತೆ ತಾವು ಚರ್ಚೆ ಮಾಡಿದ್ದು ಮುಂದಿನ ಘಟನೆಗೆ ಕಾದು ನೋಡಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.