ಕರಡಿಲಕ್ಕನ ಕೆರೆ ಏತನೀರಾವರಿ ಘಟಕದಿಂದ ನೀರು ಬಿಡುವ ಕಾರ್ಯಕ್ಕೆ ಶಾಸಕ ಕೆ.ಮಹದೇವ್ ಚಾಲನೆ
Team Udayavani, Jul 29, 2021, 6:26 PM IST
ಪಿರಿಯಾಪಟ್ಟಣ :ತಾಲೂಕಿನ ಚನ್ನಕೇಶವಪುರ ಗ್ರಾಮದಲ್ಲಿರುವ ಕರಡಿಲಕ್ಕನ ಕೆರೆ ಏತ ನೀರಾವರಿ ಯೋಜನೆ ವತಿಯಿಂದ ಕಾಲುವೆಗಳಿಗೆ ನೀರುಣಿಸುವ ಕಾರ್ಯಕ್ರಮಕ್ಕೆ ಶಾಸಕ ಕೆ.ಮಹದೇವ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯದಾಧ್ಯಂತ ಉತ್ತಮ ಮಳೆಯಾಗುತ್ತಿರುವುದರಿಂದ ಕೆರೆಕಟ್ಟೆಗಳು ಭರ್ತಿಯಾಗುತ್ತಿರುವುದು ರೈತರ ಮುಗದಲ್ಲಿ ಆಶಾಭಾವನೆ ಮಾಡಿ ಕೃಷಿ ಚಟುವಟಿಕೆಯತ್ತ ಮುಖ ಮಾಡಿದ್ದಾರೆ. ನೆರೆಯ ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕಾವೇರಿ ನದಿ ಸೇರಿದಂತೆ ನದಿ ಪ್ರಾಂತ್ಯದ ತಾಲೂಕಿನ ಅನೇಕ ಕೆರೆಕಟ್ಟೆಗಳು ತುಂಬಿ ಹರಿಯುತ್ತಿರುವುದರಿಂದ ರೈತರ ಜಮೀನಿನಲ್ಲಿ ಬೆಳೆ ಬೆಳೆಯಲು ನೀರು ಸರಬರಾಜು ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗುತ್ತಿದೆ, ಇದರಿಂದ ರೈತರ ವ್ಯವಸಾಯಕ್ಕೆ ಅನುಕೂಲವಾಗುತ್ತದೆ. ಅದೇ ರೀತಿ ಶೀಘ್ರದಲ್ಲಿ ತಾಲ್ಲೂಕಿನಲ್ಲಿ 150 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗೆ ಪೂರ್ಣಗೊಳ್ಳಲಿದ್ದು ಕಾಮಗಾರಿ ಮುಗಿದ ಕೂಡಲೇ ಮುಖ್ಯಮಂತ್ರಿಗಳನ್ನು ಕರೆ ತಂದು ಚಾಲನೆ ನೀಡಲಾಗುವುದು ಎಂದರು.
ಇದನ್ನೂ ಓದಿ : ಡಾ.ಅಶ್ವತ್ಥನಾರಾಯಣ ನಿರ್ವಹಿಸಿದ್ದ ಇಲಾಖೆಗಳ ಕಡತ ಬಾಕಿ ಶೂನ್ಯ: ಎಲ್ಲ 3,760 ಕಡತ ವಿಲೇವಾರಿ
ರೈತರರಿಗೆ ತೊಂದರೆಯಾದರೆ ಅಧಿಕಾರಿಗಳೆ ಹೊಣೆ
ಅಧಿಕಾರಿಗಳು ರೈತರ ಜಮೀನುಗಳಿಗೆ ಯಾವುದೇ ತೊಂದರೆಯಾಗದಂತೆ ಸಮರ್ಪಕವಾಗಿ ನೀರನ್ನು ಒದಗಿಸಬೇಕು, ರೈತರ ಕಷ್ಟ ಸುಖಗಳಿಗೆ ಸ್ಪಂದಿಸದೆ ತಾತ್ಸಾರ ಮಾಡಿದರೆ ಅಂತಹ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಯಾವುದೇ ಸಣ್ಣಪುಟ್ಟ ಸಮಸ್ಯೆಗಳಿದ್ದರೂ ಆದಷ್ಟು ಬೇಗನೆ ಬಗೆಹರಿಸಿಕೊಂಡು ರೈತರ ಜಮೀನಿಗೆ ನಿರಂತರವಾಗಿ ಅಗತ್ಯವಾದ ನೀರಿನ ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.
ಈ ಸಂದರ್ಭದಲ್ಲಿ ತಾ.ಪಂ.ಸಿ.ಆರ್.ಕೃಷ್ಣಕುಮಾರ್ ಕಾವೇರಿ ನೀರಾವರಿ ನಿಗಮದ ಎಇಇ ನವೀನ್, ಲೋಕೋಪಯೋಗಿ ಇಲಾಖೆಯ ಎಇಇ ಜಯಂತ್, ಜಿ.ಪಂ.ಎಇಇ ಮಂಜುನಾಥ್, ಕೃಷಿ ಇಲಾಖೆ ಸಹಾಯಕ ನಿರ್ದೆಶಕ ಪ್ರಸಾದ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸಿದ್ದೇಗೌಡ, ಪಶುಸಂಗೋಪನೆ ಇಲಾಖೆ ಸಹಾಯಕ ನಿರ್ದೆಶಕ ಸೋಮಯ್ಯ, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಅಣ್ಣಯ್ಯಶೆಟ್ಟಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು
29ಪಿವೈಪಿ01 : ಪಿರಿಯಾಪಟ್ಟಣ ತಾಲೂಕಿನ ಚನ್ನಕೇಶವಪುರ ಗ್ರಾಮದಲ್ಲಿರುವ ಕರಡಿಲಕ್ಕನ ಕೆರೆ ಏತ ನೀರಾವರಿಯಿಂದ ಕಾಲುವೆಗಳಿಗೆ ನೀರುಣಿಸುವ ಕಾರ್ಯಕ್ರಮಕ್ಕೆ ಶಾಸಕ ಕೆ.ಮಹದೇವ್ ಚಾಲನೆ ನೀಡಿದರು.
ಇದನ್ನೂ ಓದಿ : HRP ಬ್ರಹ್ಮಾಂಡ ಭ್ರಷ್ಟಾಚಾರ : ಕಾಂಗ್ರೆಸ್ ಮುಖಂಡ ಡಿ.ಸಿ.ಸಣ್ಣಸ್ವಾಮಿ ಅಕ್ರೋಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.