POP Ganapati: ಸದ್ದಿಲ್ಲದೇ ಬರುವ ಪಿಒಪಿ ಗಣಪನಿಗೆ ಬ್ರೇಕ್‌?


Team Udayavani, Aug 19, 2023, 3:55 PM IST

POP Ganapati: ಸದ್ದಿಲ್ಲದೇ ಬರುವ ಪಿಒಪಿ ಗಣಪನಿಗೆ ಬ್ರೇಕ್‌?

ಮೈಸೂರು: ಕೆಲ ದಿನಗಳಲ್ಲೇ ಗಣೇಶ ಚತುರ್ಥಿ ಹಬ್ಬ ಸಮೀಪಿಸುತ್ತಿದ್ದು, ನಿಷೇಧಿತ ಪ್ಲಾಸ್ಟರ್‌ ಆಫ್ ಪ್ಯಾರಿಸ್‌ (ಪಿಒಪಿ) ಮತ್ತು ಪೇಪರ್‌ ಮೌಲ್ಡ್‌ ಗಣೇಶ ಮೂರ್ತಿಗಳು ಮಾರುಕಟ್ಟೆ ಪ್ರವೇಶಿದಂತೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕಿದೆ. ಜತೆಗೆ ಸಾರ್ವಜನಿಕರೂ ಇಂತಹ ಮೂರ್ತಿಗಳನ್ನು ಖರೀದಿಸುವುದಿಲ್ಲ ಎಂಬ ವಾಗ್ಧಾನ ಮಾಡುವ ಮೂಲಕ ಪರಿಸರ ಸ್ನೇಹಿ ಗಣಪನತ್ತ ಒಲವು ತೋರಬೇಕಿದೆ.

ಜಲಮೂಲ, ಜಲಚರ ಸೇರಿ ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟರ್‌ ಆಫ್ ಪ್ಯಾರಿಸ್‌ ಮತ್ತು ಪೇಪರ್‌ ಮೌಲ್ಡ್‌ ಗಣೇಶ ಮೂರ್ತಿಗಳ ಮಾರಾಟ ಮತ್ತು ತಯಾರಿಕೆಯನ್ನು ಸರ್ಕಾರ ನಿಷೇಧಿಸಿದ್ದರೂ ಕೆಲವೆಡೆ ಪಿಒಪಿ ಗಣೇಶ ಮೂರ್ತಿಗಳು ಸದ್ದಿಲ್ಲದೇ ತಯಾರಾಗುತ್ತಿದ್ದು ಮಾರುಕಟ್ಟೆ ಪ್ರವೇಶಕ್ಕೆ ಅಣಿಯಾಗುತ್ತಿವೆ. ಈ ಎಲ್ಲಾ ಚಟುವಟಿಕೆ ನಿಯಂತ್ರಿಸಲು ಜಿಲ್ಲಾಡಳಿತ, ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಮಹಾನಗರ ಪಾಲಿಕೆ ಸೇರಿ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಹಾಗೂ ಗ್ರಾಪಂ ಪಿಒಪಿ ಗಣೇಶ ಮೂರ್ತಿ ಖರೀದಿಸದಂತೆ ಜನರಲ್ಲಿ ಜಾಗೃತಿ ಮೂಡಿಸುವ ಜತೆಗೆ ಮಾರಾಟ ಮಾಡದಂತೆ ಎಚ್ಚರ ವಹಿಸಬೇಕಿದೆ.

ವಾರದ ಹಿಂದೆ ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳ ನೇತೃತ್ವದಲ್ಲಿ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಸದಸ್ಯರು ಸೇರಿ ಎಲ್ಲ ಹಂತದವರೊಂದಿಗೆ ಸಭೆ ನಡೆಸಿದ್ದು, ಪಿಒಪಿ ಮೂರ್ತಿ ತಯಾರಿಸದೆ ಪರಿಸರ ಸ್ನೇಹಿ ಮಣ್ಣಿನ ಮೂರ್ತಿಗಳನ್ನೇ ತಯಾರಿಸಬೇಕು. ಹೊರ ರಾಜ್ಯ, ಜಿÇÉೆಗಳಿಂದ ಸಹ ಪಿಒಪಿ ಮೂರ್ತಿಗಳು ಜಿಲ್ಲೆ ಪ್ರವೇಶಿಸದಂತೆ ತಡೆಯಲು ಸೂಚಿಸಲಾಗಿದೆ.

ಹೊರ ರಾಜ್ಯದಿಂದ ಮಾರುಕಟ್ಟೆ ಪ್ರವೇಶ: ಪ್ರತಿವರ್ಷ ನೆರೆಯ ತಮಿಳುನಾಡಿನಿಂದ ಪಿಒಪಿ ಮತ್ತು ಪೇಪರ್‌ ಮೌಲ್ಡ್‌ ಗಣಪ ಮೈಸೂರಿನ ಮಾರುಕಟ್ಟೆ ಪ್ರವೇಶಿಸುತ್ತಿವೆ. ಪೊಲೀಸ್‌ ಇಲಾಖೆ ರಾಜ್ಯದ ಗಡಿ ಭಾಗದ ಚೆಕ್‌ಪೋಸ್ಟ್‌ಗಲ್ಲಿ ತಪಾಸಣೆ ತೀವ್ರಗೊಳಿಸುವ ಮೂಲಕ ನಿಷೇಧಿತ ಮೂರ್ತಿ ರಾಜ್ಯ ಪ್ರವೇಶಿದಂತೆ ನೋಡಿಕೊಳ್ಳಬೇಕಿದೆ.

ಮಂಡಳಿಯಿಂದ ಜಾಗೃತಿ: ಪ್ರತಿವರ್ಷ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಶಾಲಾ-ಕಾಲೇಜುಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿ ಪ್ರತಿಷ್ಠಾಪಿಸುವ ಮೂಲಕ ಹಬ್ಬ ಆಚರಿಸುವಂತೆ ಹಾಗೂ ನಿಷೇಧಿತ ಪಿಒಪಿ, ಪೇಪರ್‌ ಮೌಲ್ಡ್‌ ಮೂರ್ತಿ ಖರೀದಿ ಮಾಡದಂತೆ ಜಾಗೃತಿ ಮೂಡಿಸಲಾಗುತ್ತಿದೆ. ಪಿಒಪಿ, ಪೇಪರ್‌ ಮೌಲ್ಡ್‌ ಮೂರ್ತಿಗಳಿಂದಾಗುವ ಹಾನಿ ಸಂಬಂಧ ಬೀದಿ ನಾಟಕ, ಚರ್ಚಾ ಸ್ಪರ್ಧೆ ಏರ್ಪಡಿಸಿ ಯುವ ಸಮೂಹದಲ್ಲಿ ಅರಿವು ಮೂಡಿಸಲಾಗುತ್ತಿದೆ. ಒಂದು ವೇಳೆ ನಿಯಮ ಮೀರಿದರೆ ಅಂತಹ ಮೂರ್ತಿಗಳನ್ನು ವಶಪಡಿಸಿಕೊಳ್ಳುವ ಜತೆಗೆ ಮಾರಾಟ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ.

ಪರಿಸರ ಮೂರ್ತಿಗೆ ಡಿಮ್ಯಾಂಡ್‌:

ನೈಸರ್ಗಿಕ ಬಣ್ಣ ಲೇಪನದೊಂದಿಗೆ ಮಣ್ಣಿನಿಂದ ತಯಾರಿಸಿದ ಗಣಪತಿ-ಗೌರಿ ಮೂರ್ತಿಗಳ ಖರೀದಿಗೆ ಜನ ಹೆಚ್ಚು ಉತ್ಸುಕರಾಗಿದ್ದು, ಸಾವಿರಾರು ಮೂರ್ತಿಗಳಿಗೆ ಮುಂಗಡ ಹಣ ನೀಡುತ್ತಿದ್ದಾರೆ. ಜತೆಗೆ ತಯಾರಕರು ಅರ್ಧ ಅಡಿಯಿಂದ ಹಿಡಿದು 6 ಅಡಿ ಎತ್ತರದವರೆಗಿನ ಪರಿಸರ ಸ್ನೇಹಿ ಗಣೇಶ ಮೂರ್ತಿ ಸಿದ್ಧಪಡಿಸಿದ್ದಾರೆ. ಒಂದೊಂದು ಮೂರ್ತಿಯೂ ವಿಭಿನ್ನ ಶೈಲಿ, ಬಣ್ಣ, ಭಂಗಿಯೊಂದಿಗೆ ನೋಡುಗರನ್ನು ಆಕರ್ಷಿಸುತ್ತಿವೆ.

ಪಿಒಪಿ ಮೂರ್ತಿಗಳ ನಿಷೇಧ ಏಕೆ?:

ಮಣ್ಣಿನಿಂದ ತಯಾರಿಸಿದ ಮೂರ್ತಿಗಳು ಸಾಮಾನ್ಯವಾಗಿ 6 ಅಡಿ ಎತ್ತರ ಮಾತ್ರ ಇರಲಿವೆ. ಆದರೆ 8ರಿಂದ 10 ಅಡಿ ಎತ್ತರದ ಮೂರ್ತಿಗಳು ಬೇಕಾದರೆ ಪಿಒಪಿ ಬಳಸಬೇಕು. ಕೆಲವರು ಎತ್ತರದ ಗಣೇಶನಿಗಾಗಿ ಪಿಒಪಿ ಮೂರ್ತಿಗಗಳ ಮೊರೆ ಹೋಗುತ್ತಿರುವುದು ಸಾಮಾನ್ಯವಾಗಿದೆ. ಈ ಮೂರ್ತಿಗಳನ್ನು ರಸಾಯನಿಕ ವಸ್ತುಗಳಿಂದ ತಯಾರಿಸುವುದಲ್ಲದೇ ಇವುಗಳನ್ನು  ಕೆರೆ, ಬಾವಿ ಸೇರಿ ಇತರ ಜಲ ಮೂಲಗಳಲ್ಲಿ ವಿಸರ್ಜಿಸಿದರೆ ಕರಗುವುದಿಲ್ಲ. ಜತೆಗೆ ನೀರು ಹಾಳಾಗುವುದಲ್ಲದೇ ಪರಿಸರವೂ ನಾಶವಾಗುತ್ತದೆ.

ಏನಿದು ಪೇಪರ್‌ ಮೋಲ್ಡ್‌ ಗಣಪ?:

ಇತ್ತೀಚಿನ ದಿನಗಳಲ್ಲಿ ಪಿಒಪಿ ಬದಲಿಗೆ ಕಡಿಮೆ ತೂಕದ ಎತ್ತರ ಮತ್ತು ಆಕರ್ಷಕ ಪೇಪರ್‌ ಮೋಲ್ಡ್‌ ಗಣಪತಿ ಮೂರ್ತಿಗಳು ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಇವು ಸಹ ಪರಿಸರಕ್ಕೆ ಮಾರಕವಾಗಿವೆ. ಪೇಪರ್‌ ಅಚ್ಚಿನ ಮೂಲಕ ತಯಾರಿಸಲ್ಪಡುವ ಇವು ಬಹು ದಿನಗಳ ಕಾಲ ಇಡಲು ಕೆಮಿಕಲ್‌ ಬಳಸಲಾಗುತ್ತದೆ. ಇದನ್ನು ನೀರಿನಲ್ಲಿ ವಿಸರ್ಜನೆ ಮಾಡಿದರೆ ಕರಗುವುದಿಲ್ಲ. ಜತೆಗೆ ಮೂರ್ತಿಯಲ್ಲಿರುವ ವಿಷ ಪದಾರ್ಥ ನೀರಿಗೆ ಸೇರುತ್ತದೆ. ಇದರಿಂದ ನೀರು ಮಲಿನವಾಗಿ ಜಲಚರಗಳಿಗೆ ಹಾನಿಯಾಗುವ ಸಂಭವವಿದೆ.

ಪಿಒಪಿ, ಪೇಪರ್‌ ಮೋಲ್ಡ್‌ ಗಣೇಶ ಮೂರ್ತಿ  ನಿಷೇಧಿಸಲಾಗಿದೆ. ಇವುಗಳನ್ನು ಖರೀದಿಸದಂತೆ  , ಪರಿಸರ ಹಾನಿ ಬಗ್ಗೆ ಮಂಡಳಿಯಿಂದ ಶಾಲಾ-ಕಾಲೇಜುಗಳಿಗೆ ತೆರಳಿ ಜಾಗೃತಿ ಮೂಡಿಸಲಾಗುತ್ತಿದೆ. ಜತೆಗೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ.-ಹರಿಶಂಕರ್‌, ಪರಿಸರ ಅಧಿಕಾರಿ, ಪ್ರಾದೇಶಿಕ ಕಚೇರಿ 1, ಮಾಲಿನ್ಯ ನಿಯಂತ್ರಣ ಮಂಡಳಿ. 

-ಸತೀಶ್‌ ದೇಪುರ

ಟಾಪ್ ನ್ಯೂಸ್

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.