Dussehra: ಅರಮನೆಯಲ್ಲಿ ಶಾಸ್ತ್ರೋಕ್ತ ಸಿಂಹಾಸನ ಜೋಡಣೆ


Team Udayavani, Oct 10, 2023, 11:55 AM IST

tdy-9

ಮೈಸೂರು: ನಾಡಹಬ್ಬ ದಸರಾ ಪ್ರಮುಖ ಆಕರ್ಷಣೆಗಳಲ್ಲಿ ಖಾಸಗಿ ದರ್ಬಾರ್‌ ಒಂದಾಗಿದ್ದು, ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿರಾಜಮಾನರಾಗಿ ಖಾಸಗಿ ದರ್ಬಾರ್‌ ನಡೆಸುವ ಸಿಂಹಾಸನವನ್ನು ಸೋಮವಾರ ಅಂಬಾವಿಲಾಸ ಅರಮನೆಯಲ್ಲಿ ಶಾಸ್ತ್ರೋಕ್ತವಾಗಿ ಜೋಡಣೆ ಮಾಡಿ ಪೂಜೆ ಸಲ್ಲಿಸಲಾಯಿತು.

ದರ್ಬಾರು: ನವರಾತ್ರಿಗೂ ಮುನ್ನ ಭದ್ರತಾ ಕೊಠಡಿಯಲ್ಲಿರಿಸಿದ್ದ ಸಿಂಹಾಸನದ ಬಿಡಿ ಭಾಗ ಹೊರತಂದು ಜೋಡಿಸಿ ಸಂಪ್ರದಾಯಬದ್ಧ ಪೂಜೆ ಬಳಿಕ ವಿಜಯದಶಮಿಯ ಎಲ್ಲ ಕಾರ್ಯಕ್ರಮಗಳನ್ನು ನೆರವೇರಿಸುವುದು ವಾಡಿಕೆ. ಖಾಸಗಿ ದರ್ಬಾರ್‌ ರಾಜಮನೆತನದ ಪ್ರಮುಖ ಧಾರ್ಮಿಕ ಕಾರ್ಯವಾಗಿದ್ದು, ದರ್ಬಾರ್‌ ಹಾಲ್‌ನಲ್ಲಿ ರತ್ನ ಖಚಿತ ಸಿಂಹಾಸನದ ಮೇಲೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿರಾಜಮಾನರಾಗಿ ಖಾಸಗಿ ದರ್ಬಾರ್‌ ನಡೆಸಲಿದ್ದಾರೆ. ಅ15ರಿಂದ ಅ.24ರವರೆಗೆ ಅರಮನೆಯಲ್ಲಿ ವಿವಿಧ ಧಾರ್ಮಿಕ ಕಾರ್ಯ ಜರುಗಲಿದ್ದು, ಪ್ರತಿ ದಿನ ಸಂಜೆ ಖಾಸಗಿ ದರ್ಬಾರ್‌ ನಡೆಯಲಿದೆ. ಈ ಹಿನ್ನೆಲೆ ದಸರಾ ಆರಂಭಕ್ಕೆ ಕೇವಲ 6 ದಿನಗಳಷ್ಟೇ ಬಾಕಿ ಇರುವುದರಿಂದ ಶಾಸ್ತ್ರೋಕ್ತವಾಗಿ ವಿಧಿ ವಿಧಾನದಂತೆ ಸಿಂಹಾಸನ ಜೋಡಿಸಿ ದರ್ಬಾರ್‌ಗೆ ಸಿದ್ಧತೆ ಮಾಡಲಾಯಿತು.

ಧಾರ್ಮಿಕ ವಿಧಿ ವಿಧಾನ: ಇದುವರೆಗೆ ಅರಮನೆ ಸುಪರ್ಧಿಯಲ್ಲಿದ್ದ ಸಿಂಹಾಸನವನ್ನು ಪ್ರಮೋದಾದೇವಿ ಅವರು ಜಿಲ್ಲಾಡಳಿತದ ವಶಕ್ಕೆ ನೀಡಿದರು. ಬಿಗಿ ಭದ್ರತೆಯಲ್ಲಿ ಸ್ಟ್ರಾಂಗ್‌ ರೂಂನಿಂದ ಹೊರತೆಗೆದು ಅರಮನೆ ಪಂಚಾಂಗದಂತೆ ಬೆಳಗ್ಗೆ 10.05ರಿಂದ 10.35ರವರೆಗೆ ಸಲ್ಲುವ ಶುಭ ಲಗ್ನದಲ್ಲಿ ಸಿಂಹಾಸನ ಜೋಡಣೆ ಮಾಡಲಾಯಿತು. ಇದಕ್ಕಾಗಿ ಬೆಳಗ್ಗೆ 7ರಿಂದಲೇ ವಿವಿಧ ಪೂಜಾ ಕೈಂಕರ್ಯ ಜರುಗಿದವು. ಅರಮನೆ ಪುರೋಹಿತರ ನೇತೃತ್ವದಲ್ಲಿ ನವಗ್ರಹ ಹೋಮ, ಗಣಪತಿ ಹೋಮ, ಶ್ರೀ ಚಾಮುಂಡಿ ಪೂಜೆ ನೆರವೇರಿಸಿ, ನಂತರ ಪೂರ್ಣಾಹುತಿ ನೆರವೇರಿಸಲಾಯಿತು. ಅಂತಿಮವಾಗಿ ಶಾಂತಿ ಪೂಜೆ ಮಾಡಲಾಯಿತು. ಬಳಿಕ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಹಾಗೂ ಜಿಲ್ಲಾಡ ಳಿತದ ಅಧಿಕಾರಿಗಳ ಸಮ್ಮುಖದಲ್ಲಿ ಸಿಂಹಾಸನದ ಜೋಡಣೆ ಕಾರ್ಯ ನಡೆಯಿತು.

ನಂತರ ಪಟ್ಟದ ಕುದುರೆ, ಪಟ್ಟದ ಹಸುವನ್ನು ಕಲ್ಯಾಣಮಂಟಪದ ಸಮೀಪ ಇರುವ ಅಂಗಳಕ್ಕೆ ಕರೆತಂದು ಪೂಜಿಸಲಾಯಿತು. ಜೋಡಣಾ ಕಾರ್ಯ: ಅರಮನೆ ನೆಲಮಾಳಿಗೆಯಲ್ಲಿರುವ ಸ್ಟ್ರಾಂಗ್‌ ರೂಮ್‌ ತೆರೆದು ಸಿಂಹಾಸನ ಹಾಗೂ ಭದ್ರಾಸನದ ಬಿಡಿ ಭಾಗ ಪ್ರತ್ಯೇಕಿಸಲಾಯಿತು. ಶಸ್ತ್ರಸಜ್ಜಿತ ಪೊಲೀಸರ ಕಣ್ಗಾವಲಿನಲ್ಲಿ ಒಂದೊಂದೇ ಬಿಡಿ ಭಾಗವನ್ನು ದರ್ಬಾರ್‌ ಹಾಲ್‌ಗೆ ತರಲಾಯಿತು. ಸುಮಾರು 14 ಬಿಡಿ ಭಾಗಗಳಾಗಿ ವಿಂಗಡಿಸಲಾಗಿದ್ದ ಈ ಸಿಂಹಾಸನ ಜೋಡಿಸಿ, ಪರದೆ ಬಿಡಲಾಯಿತು. ದರ್ಬಾರ್‌ ಹಾಲ್‌ನಲ್ಲಿ ಸಿಂಹಾಸನ, ಕನ್ನಡಿ ತೊಟ್ಟಿಯಲ್ಲಿ ಭದ್ರಾಸನ ಜೋಡಿಸಲಾಯಿತು. ಬೆಳಗ್ಗೆ ಶಾಂತಿ ಹೋಮದೊಂದಿಗೆ ಪೂಜಾ ಕಾರ್ಯಕ್ರಮ ಆರಂಭ ಮಾಡಿ ಕಳಶ ಸ್ಥಾಪನೆ, ಪವಿತ್ರ ಜಲ ಪ್ರೋಕ್ಷಣೆ, ಹೋಮ ಸೇರಿ ಪೂರ್ವ ನಿರ್ಧರಿತ ಮುಹೂರ್ತದಲ್ಲಿ ಸಿಂಹಾಸನ ಜೋಡಣೆ ಸಂಪನ್ನಗೊಳಿಸಲಾಯಿತು. ಇದೇ ಸಂದರ್ಭದಲ್ಲಿ ತ್ರಿಷಿಕಾ ಕುಮಾರಿ ಒಡೆಯರ್‌ ಪಾದಪೂಜೆ ನೆರವೇರಿಸಿದರು.

ಹಲವು ಗಣ್ಯರು ಭಾಗಿ: ಅರಮನೆಯಲ್ಲಿ ನೆರವೇರುತ್ತಿದ್ದ ಸಿಂಹಾಸನಾ ಜೋಡಣೆ ಯಿಂದಾಗಿ ಸಾರ್ವಜನಿಕರಿಗೆ ಅರಮನೆಗೆ ಪ್ರವೇಶ ನಿಷೇಧಿಸಲಾಗಿತ್ತು. ಸಿಂಹಾಸನದ ಜೋಡಣೆ ವೇಳೆ ಪ್ರಮೋದಾ ದೇವಿ ಒಡೆಯರ್‌, ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್‌. ಸುಬ್ರಹ್ಮಣ್ಯ, ಇನ್ನಿತರೆ ಅಧಿಕಾರಿಗಳು ಇದ್ದರು.

ಅರಮನೆ ಸಿಂಹಾಸನದ ಬಿಡಿ ಭಾಗಗಳು: ಸಿಂಹಾಸನವನ್ನು 8, ಬೆಳ್ಳಿಯ ಭದ್ರಾಸನವನ್ನು 6 ಬಿಡಿಭಾಗಗಳಾಗಿ ವಿಂಗಡಿಸಲಾಗಿರುತ್ತದೆ. ಸಿಂಹಾಸನದ ಬಿಡಿಭಾಗ, ಭದ್ರಾಸನ ಜೋಡಿಸಿದ ಬಳಿಕ, ಸಿಂಹಾಸನಕ್ಕೆ ಉಮಾಪಕ್ಷಿ, ಮುತ್ತಿನ ಜಾಲರಿ, ಮಕರ ತೋರಣ, 25 ಜತೆ ನಗಗಳು, 1 ಜತೆ ಚಿನ್ನದ ಕುದುರೆ, ತುರಾಯಿ ಜೋಡಿ, 1 ಜತೆ ಚಿನ್ನದ ಕಳಶ ಜೋಡಿಸಿ ಅಲಂಕರಿಸಲಾಯಿತು. ಇದರ ಬಿಡಿ ಭಾಗ ಜೋಡಿಸಿ ಅದಕ್ಕೆ ಸಿಂಹದ ಮುಖ ಅಳವಡಿಸಿದಾಗ ಸಿಂಹಾಸನ ಜೋಡಣೆ ಪೂರ್ಣಗೊಳ್ಳುತ್ತದೆ. ಸಿಂಹವನ್ನು ಅ.15ರಂದು ಜೋಡಿಸಿ ಪೂರ್ಣಗೊಂಡ ಸಿಂಹಾಸನವನ್ನು ದರ್ಬಾರ್‌ ಸಭಾಂಗಣದಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. 15ರಿಂದ ಅ.24ರವರೆಗೆ ಯದುವೀರ್‌ ಸಿಂಹಾಸನವೇರಿ ದರ್ಬಾರ್‌ ನಡೆಸಲಿದ್ದಾರೆ.

ಪ್ರವಾಸಿಗರಿಗೆ ಅರಮನೆ ಪ್ರವೇಶ ನಿಷೇಧ: ನವರಾತ್ರಿ ಮೊದಲ ದಿನವಾದ ಅ.15ರಂದು ಚಿನ್ನದ ಸಿಂಹಾಸನಕ್ಕೆ ಸಿಂಹ ಜೋಡಣೆ ಕಾರ್ಯ ನಡೆದ ನಂತರ ಖಾಸಗಿ ದರ್ಬಾರ್‌ ನಡೆಯುತ್ತದೆ. ಅಂದು ಮಧ್ಯಾಹ್ನದವರೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಆಯುಧ ಪೂಜೆ ದಿನವಾದ ಅ.23ರ ಮಧ್ಯಾಹ್ನದವರೆಗೆ ಹಾಗೂ ವಿಜಯದಶಮಿ ದಿನವಾದ ಅ.24ರ ದಿನವಿಡೀ ಅರಮನೆಗೆ ಪ್ರವಾಸಿಗರು, ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.