ವೈಭವದ ಜಂಬೂ ಸವಾರಿಗೆ ಮೈಸೂರು ಸಜ್ಜು
Team Udayavani, Oct 18, 2018, 6:00 AM IST
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆ ವಿಜಯದಶಮಿಯ ಜಂಬೂ ಸವಾರಿಗೆ ಅರಮನೆ ನಗರಿ ಮೈಸೂರು ಸಜ್ಜಾಗಿದೆ. ದೇಶ-ವಿದೇಶಗಳ ಪ್ರವಾಸಿಗರು ಪ್ರಸಿದ್ಧ ಜಂಬೂ ಸವಾರಿ ವೀಕ್ಷಣೆಗೆ ಕಾತುರರಾಗಿದ್ದಾರೆ. ನಾಡಿನ ಸಂಸ್ಕೃತಿ ಪ್ರತಿಬಿಂಬಿಸುವ, ರಾಜ್ಯದ ಎಲ್ಲಾ ಜಿಲ್ಲೆಗಳ ಸ್ತಬ್ಧ ಚಿತ್ರಗಳು ಜಂಬೂಸವಾರಿಯ ಪ್ರಮುಖ ಆಕರ್ಷಣೆಯಾಗಿವೆ.
ಸಿಎಂ ಕುಮಾರಸ್ವಾಮಿ ಚಾಲನೆ: ಆ.19 ಶುಕ್ರವಾರ ಮಧ್ಯಾಹ್ನ 2.30ರಿಂದ 3.16ರವರೆಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಅರಮನೆ ಬಲರಾಮದ್ವಾರದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 3.40ರಿಂದ 4.10ಗಂಟೆ ವರೆಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಅರಮನೆ ಒಳಾವರಣದಲ್ಲಿ ದಸರಾ ಗಜಪಡೆಯ ಕ್ಯಾಪ್ಟನ್ ಅರ್ಜುನ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ಹೊತ್ತು ತರುವ ಚಾಮುಂಡೇಶ್ವರಿ ದೇವಿಯ ಉತ್ಸವಮೂರ್ತಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ.
ಜನಾಕರ್ಷಣೆಯ ಪಂಜಿನ ಕವಾಯತು ಶುಕ್ರವಾರ ರಾತ್ರಿ 7 ಗಂಟೆಗೆ ಬನ್ನಿ ಮಂಟಪ ಮೈದಾನದಲ್ಲಿ ಪಂಜಿನ ಕವಾಯತು
ಆರಂಭವಾಗಲಿದ್ದು, ರಾಜ್ಯಪಾಲ ವಜುಭಾಯಿ ವಾಲಾ, ಕವಾಯತು ವೀಕ್ಷಿಸಿ ಗೌರವ ವಂದನೆ ಸ್ವೀಕರಿಸುವರು. ಬಳಿಕ 2ಗಂಟೆಗಳ ಕಾಲ ಮೈನವಿರೇಳಿಸುವ ಸಾಹಸ ಪ್ರದರ್ಶನ, ಬೈಕ್ ಸವಾರಿ, ಅಶ್ವಾರೋಹಿ ಪಡೆಗಳ ಸಾಹಸ ಪ್ರದರ್ಶನ ನಡೆಯಲಿದೆ.
ಬಿಗಿ ಬಂದೋಬಸ್ತ್
ಜಂಬೂಸವಾರಿ ಮೆರವಣಿಗೆ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಲು 5284 ಜನ ಪೊಲೀಸರನ್ನು ಬಂದೋಬಸ್ತ್ಗೆ ನಿಯೋಜಿಸಲಾಗಿದೆ. ಇದೇ ಮೊದಲ ಬಾರಿ ಮೊಬೈಲ್ ಕಮಾಂಡೋ ಭದ್ರತೆ ಒದಗಿಸಲಾಗಿದೆ.
100 ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿರುವ ಕಲಾತಂಡಗಳು
42 ಮೆರವಣಿಗೆಯ ವೈಭವ ಹೆಚ್ಚಸಲಿರುವ ಸ್ತಬಟಛಿ ಚಿತ್ರಗಳು
12 ಅಂಬಾರಿ ಹೊತ್ತು ಸಾಗುವ ಅರ್ಜುನನನ್ನೊಳಗೊಂಡ ಗಜಪಡೆ
05 ಕಿ.ಮೀ. ದೂರದ ಬನ್ನಿ ಮಂಟಪಕ್ಕೆ ಮೆರವಣಿಗೆ
ಗಿರೀಶ್ ಹುಣಸೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.