![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 6, 2024, 4:02 PM IST
ಮೈಸೂರು: ಸಮ್ಮಿಶ್ರ ಸರ್ಕಾರ ಪತನದ ನಂತರ ದೂರವಾಗಿದ್ದ ಹಳ್ಳಿಹಕ್ಕಿ ಎಚ್.ವಿಶ್ವನಾಥ್ ಹಾಗೂ ಎಚ್‌ಡಿ.ಕುಮಾರಸ್ವಾಮಿ ಇದೀಗ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮತ್ತೆ ಒಂದಾಗಿದ್ದಾರೆ. ಇಂದು ಮೈಸೂರಿನ ಕೆ.ಆರ್.ನಗರದಲ್ಲಿರುವ ವಿಶ್ವನಾಥ್ ನಿವಾಸಕ್ಕೆ ಆಗಮಿಸಿದ ಎಚ್.ಡಿ.ಕುಮಾರಸ್ವಾಮಿ ಚರ್ಚೆ ನಡೆಸಿದರು.
ಕೆ.ಆರ್.ನಗರವು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ವ್ಯಾಪ್ತಿಗೆ ಸೇರುವ ಕಾರಣ ಜೆಡಿಎಸ್ ಅಭ್ಯರ್ಥಿ ಎಚ್ ಡಿಕೆ ವಿಶ್ವನಾಥ್ ಸಭೆ ಮಹತ್ವ ಪಡೆದಿದೆ. ಎಚ್ಡಿಕೆ ಅವರಿಗೆ ಜೆಡಿಎಸ್ ನಾಯಕರಾದ ಜಿ.ಟಿ.ದೇವೆಗೌಡ, ಸಾ.ರಾ.ಮಹೇಶ್, ಪುಟ್ಟರಾಜು ಸಾಥ್ ನೀಡಿದರು.
ಬಳಿಕ ಮಾತನಾಡಿದ ಎಚ್. ವಿಶ್ವನಾಥ್, ರಾಜಕಾರಣ ನಿಂತ ನೀರಲ್ಲ. ಹರಿಯುವ ಗಂಗೆ. ಮಾತು, ಸಂಘರ್ಷ ರಾಜಕಾರಣದಲ್ಲಿ ಸಹಜ. ಇದನ್ನೆಲ್ಲಾ ಒಂದೊಂದು ಬಾರಿ ಸರಿಪಡಿಸಿಕೊಳ್ಳಬೇಕು. ದೇವೇಗೌಡರು ನನಗೆ ಸದಾ ಸ್ಮರಣೀಯರು. ನನ್ನ ಸಾರಾ ಮಹೇಶ್ ಭಿನ್ನಾಭಿಪ್ರಾಯ ಚಾಮುಂಡಿ ಬೆಟ್ಟದ ತನಕಹೋಗಿತ್ತು. ಇದೆಲ್ಲಾ ಸಹಜ. ಈಗ ಅದನ್ನೆಲ್ಲಾ ಮರೆತು ಜೊತೆಯಾಗಿದ್ದೇವೆ. ಈಗ ಎಲ್ಲಾ ಮರೆತು ಕುಮಾರಸ್ವಾಮಿ ನಮ್ಮ ಮನೆಗೆ ಬಂದಿದ್ದಾರೆ ಎಂದರು.
ಕಾಂಗ್ರೆಸ್ ನಲ್ಲಿ 17 ಜನರ ಮಕ್ಕಳು ಲೋಕಸಭೆಗೆ ಟಿಕೆಟ್ ಕೊಟ್ಟಿದ್ದಾರೆ. ಆಡಳಿತಾತ್ಮಕವಾಗಿ ಎಚ್ ಡಿ ಕುಮಾರಸ್ವಾಮಿಯನ್ನು ಟೀಕಿಸುತ್ತಿದ್ದಾರೆ. ಆದರೆ, ಎಚ್ ಡಿ ದೇವೇಗೌಡರ ಬಗ್ಗೆ ಮಾತಾಡಬೇಡಿ. ಆ ನೈತಿಕತೆ ಯಾರಿಗೂ ಇಲ್ಲ. ಯದುವಂಶದ ರಾಜರು ಅವಿರೋಧವಾಗಿ ಆಯ್ಕೆಯಾಗಲಿ ಎಂದರು.
ದೇವೇಗೌಡರ ಫ್ಯಾಮಿಲಿಯನ್ನು ಸೋಲಿಸುತ್ತೇನೆಂಬ ಮಾತನ್ನು ಸಿದ್ದರಾಮಯ್ಯ ಬಿಡಬೇಕು. ಸಿದ್ದರಾಮಯ್ಯ ದುರಹಂಕಾರದ ಮಾತು ಮೊದಲು ಬಿಡಬೇಕು
ಸಿದ್ದರಾಮಯ್ಯ ಅವರೇ, ಮೈಸೂರಲ್ಲಿ ನಿಮ್ಮ ಮಗನನ್ನು ನಿಲ್ಲಿಸಬೇಕು ಅಂದುಕೊಂಡಿದ್ದಿರಿ. ನನ್ನ ಹೆಸರೂ ಇತ್ತು. ಸರ್ವೇ ವರದಿ ಬಂದ ಮೇಲೆ ಪಾಪ ಲಕ್ಷ್ಮಣ್ ಅವರನ್ನು ನಿಲ್ಲಿದ್ದೀರಿ. ಒಕ್ಕಲಿಗರಿಗೆ ಅಪಮಾನ ಮಾಡುತ್ತಿದ್ದೀರಿ. ಮೈಸೂರಲ್ಲಿ ಯದುವೀರ್, ಮಂಡ್ಯದಿಂದ ಕುಮಾರಸ್ವಾಮಿ ಗೆಲ್ಲಬೇಕು ಎಂದು ವಿಶ್ವನಾಥ್ ಹೇಳಿದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.