ಮೈಸೂರು: ಕಬಿನಿ ರೆಸಾರ್ಟ್ ನಲ್ಲಿ ಸೋನಿಯಾ ವಾಸ್ತವ್ಯ
ಸೋನಿಯಾ ಗಾಂಧಿ ಅವರೇ ಪಾಲ್ಗೊಳ್ಳುತ್ತಿರುವುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ಗರಿಗೆದರಿದೆ.
Team Udayavani, Oct 4, 2022, 6:20 PM IST
ಮೈಸೂರು: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ತಮ್ಮ ಪುತ್ರ, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲು ಸೋಮವಾರ ಮಧ್ಯಾಹ್ನ ಮೈಸೂರಿಗೆ ಆಗಮಿಸಿದ್ದು, ಯಾತ್ರೆಯಲ್ಲಿ ಸ್ವತಃ ಎಐಸಿಸಿ ಅಧ್ಯಕ್ಷರೇ ಪಾಲ್ಗೊಳ್ಳುತ್ತಿರುವುದು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರಲ್ಲಿ ಮತ್ತಷ್ಟು ಚೈತನ್ಯ ಮೂಡಿಸಿದೆ.
ಸೋನಿಯಾ ಗಾಂಧಿ ಅವರು ಅ.6ರಂದು ಬೆಳಗ್ಗೆ ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರು ಅ.5ರಂದು ರಾತ್ರಿ ಮೈಸೂರಿಗೆ ಆಗಮಿಸಿ 6ರಂದು ಪಾಂಡವಪು ರದಲ್ಲಿ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಅವರೇ ಪಾಲ್ಗೊಳ್ಳುತ್ತಿರುವುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ಗರಿಗೆದರಿದೆ.
ಸೋನಿಯಾ ಗಾಂಧಿ ಅವರು ವಿಶೇಷ ವಿಮಾನದ ಮೂಲಕ ಸೋಮವಾರ ಮಧ್ಯಾಹ್ನ ಇಲ್ಲಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಮುಖಂಡರು ಸೋನಿಯಾಗಾಂಧಿ ಅವರನ್ನು ಬರಮಾಡಿಕೊಂಡರು. ನಂತರ ಸೋನಿಯಾ ಗಾಂಧಿ ಅವರು ಇಲ್ಲಿನ ಖಾಸಗಿ ಹೋಟೆಲ್ ವೊಂದಕ್ಕೆ ತೆರಳಿದರು.
ಸೋನಿಯಾ ಗಾಂಧಿ ಅವರು ಕೊಡಗಿನ ರೆಸಾರ್ಟ್ ವೊಂದರಲ್ಲಿ ಸೋಮವಾರದಿಂದ ಮೂರು ದಿನಗಳ ಕಾಲ ವಾಸ್ತವ್ಯ ಹೂಡುವ ವ್ಯವಸ್ಥೆಯಾಗಿತ್ತು. ಆದರೆ, ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟ ರ್ ನಲ್ಲಿ ಕೊಡಗಿಗೆ ತೆರಳಲು ಸಾಧ್ಯವಾಗಲಿಲ್ಲ. ಹೀಗಾಗಿ, ಎಚ್.ಡಿ. ಕೋಟೆ ತಾಲೂಕು ಕಬಿನಿ ರೆಸಾರ್ಟ್ ವೊಂದರಲ್ಲಿ ವಾಸ್ತವ್ಯ ಹೂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.