Mysore; ಮಗಳನ್ನು ರಕ್ಷಿಸಲು ಹೋದ ತಂದೆ-ತಾಯಿಯೂ ನೀರುಪಾಲು; ಅಜ್ಜಿಯ ತಿಥಿಕಾರ್ಯದ ವೇಳೆ ಘಟನೆ
Team Udayavani, Oct 1, 2023, 10:32 AM IST
ಮೈಸೂರು: ಒಂದೇ ಕುಟುಂಬದ ಮೂವರು ನೀರು ಪಾಲಾದ ದಾರುಣ ಘಟನೆಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಚಂಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಪ್ಪ ಮಹಮ್ಮದ್ ಕಪೀಲ್ (42 ವ), ಅಮ್ಮ ಶಾವರ ಭಾನು (35 ವ), ಪುತ್ರಿ ಶಾಹೀರಾ ಭಾನು (20 ವ) ಮೃತ ದುರ್ದೈವಿಗಳು. ಆಕಸ್ಮಿಕವಾಗಿ ಕಾಲು ಜಾರಿ ನಾಲೆಗೆ ಬಿದ್ದ ಪುತ್ರಿಯನ್ನು ರಕ್ಷಿಸಲು ಹೋಗಿ ಅಪ್ಪ, ಅಮ್ಮನೂ ಸಾವನ್ನಪ್ಪಿದ್ದಾರೆ.
ಅಜ್ಜಿಯ ತಿಥಿ ಕಾರ್ಯ ಮುಗಿಸಿ ನುಗು ಜಲಾಶಯದ ಬಲದಂಡೆ ನಾಲೆಯಲ್ಲಿ ಕೈ ಕಾಲು ತೊಳೆಯಲು ಹೋದಾಗ ಈ ಘಟನೆ ನಡೆದಿದೆ.
ಪುತ್ರಿ ಶಾಹೀರಾ ಭಾನು ಮೊದಲಿಗೆ ಕಾಲು ಜಾರಿ ಬಿದಿದ್ದು, ರಕ್ಷಣೆಗೆ ಹೋದ ಅಪ್ಪ, ಅಮ್ಮ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಭೇಟಿ ನೀಡಿ ಕಾರ್ಯಾಚರಣೆ ನಡೆಸಿ, ಮೂವರ ಮೃತ ದೇಹ ಹೊರಕ್ಕೆ ತೆಗೆದಿದ್ದಾರೆ.
ಸರಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.