ಸಹಜ ಸ್ಥಿತಿಯತ್ತ ಮೈಸೂರು


Team Udayavani, Mar 19, 2020, 3:00 AM IST

sahaja-sti

ಮೈಸೂರು: ಕಳೆದ ನಾಲ್ಕೈದು ದಿನಗಳ ಹಿಂದಿನಿಂದ ಕೊರೊನಾ ಭೀತಿಯಿಂದ ನಗರದಲ್ಲಿ ನಿರ್ಮಾಣವಾಗಿದ್ದ ಆತಂಕ ಕೊಂಚಮಟ್ಟಿಗೆ ಕಡಿಮೆಯಾಗಿದ್ದು, ನಗರದ ಕೆಲ ಪ್ರದೇಶಗಳು ಸಹಜ ಸ್ಥಿತಿಗೆ ಮರಳುತ್ತಿವೆ. ಕೊರೊನಾ ವೈರಸ್‌ ಹರಡದಂತೆ ಜಿಲ್ಲಾಡಳಿತ ಈಗಾಗಲೇ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಶಾಪಿಂಗ್‌ಮಾಲ್‌, ಥಿಯೇಟರ್‌, ಕ್ಲಬ್‌, ಶಾಲಾ-ಕಾಲೇಜುಗಳ ಬಂದ್‌ ಮುಂದುವರಿದಿದೆ.

ಇದರ ನಡುವೆಯೂ ಸರ್ಕಾರಿ ಕಚೇರಿಗಳು, ಮಾರುಕಟ್ಟೆ ಇನ್ನಿತರ ಅಗತ್ಯ ವಸ್ತುಗಳ ಅಂಗಡಿಗಳು ಎಂದಿನಂತೆ ತೆರೆದಿರುವ ಕಾರಣ ನಗರದ ಹೃದಯಭಾಗಗಳಲ್ಲಿ ಜನಸಂಚಾರ ಹೆಚ್ಚಾಗಿದ್ದು, ಸಾರಿಗೆ ವಾಹನಗಳಲ್ಲೂ ಪ್ರಯಾಣಿಕರ ಸುಧಾರಿಸಿದೆ. ಶಾಲೆ, ಕಾಲೇಜು, ಖಾಸಗಿ ಕಚೇರಿಗಳಿಗೆ ರಜೆ ಇರುವ ಕಾರಣ ಜನರು ತಮ್ಮ ಆಧಾರ್‌ ಕಾರ್ಡ್‌ಗಳ ತಿದ್ದುಪಡಿಗೆ ಆಧಾರ್‌ ಕೇಂದ್ರಗಳತ್ತ ಮುಗಿಬಿದ್ದ ಪರಿಣಾಮ ಅಲ್ಲಿಯೂ ನೂರಾರು ಮಂದಿ ಜಮಾಯಿಸಿದ ಕಾರಣ,

ಮುಂಜಾಗ್ರತಾ ಕ್ರಮವಾಗಿ ಆಧಾರ್‌ ಸೇವಾ ಕೇಂದ್ರಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಒಂದೇ ಯಂತ್ರದಲ್ಲಿ ಹಲವಾರು ಬೆರಳಚ್ಚು ನೀಡುವುದರಿಂದ ವೈರಸ್‌ ಹರಡುವ ಸಾಧ್ಯತೆ ಇರುವ ಕಾರಣ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಜೊತೆಗೆ ಈಗಾಗಲೇ ಎಲ್ಲಾ ಸರ್ಕಾರಿ ಕಚೇರಿ ಮತ್ತು ಖಾಸಗಿ ಕಂಪನಿಗಳಲ್ಲಿ ಬಯೋಮೆಟ್ರಿಕ್‌ ಹಾಜರಾತಿ ಪದ್ಧತಿಯನ್ನು ಸ್ಥಗಿತಗೊಳಿಸಲು ಜಿಲ್ಲಾಡಳಿತ ಆದೇಶಿಸಿದೆ.

ನ್ಯಾಯಾಲಯಕ್ಕೂ ತೊಡಕು: ಹೈಕೋರ್ಟ್‌ ನಿರ್ದೇಶನದಂತೆ ಬುಧವಾರ ಮೈಸೂರು ವಕೀಲರ ಸಂಘದ ಸಾಮಾನ್ಯ ಸಭೆ ನಡೆಸಿ ಮುಂದಿನ ಆದೇಶ ಬರುವವರೆಗೂ ಮಾ.21ವರೆಗೆ ನ್ಯಾಯಾಲಯಕ್ಕೆ ಹಾಜರಾಗದಂತೆ ವಕೀಲರು ನಿರ್ಧರಿಸಿದ್ದಾರೆ. ವಾರೆಂಟ್‌ ಅಡಿಯಲ್ಲಿ ಹಾಜರಾದ ಆರೋಪಿಗಳಿಗೆ ವಾತ್ರ ವಿನಾಯಿತಿ ನೀಡಲಾಗುತ್ತದೆ. ಇದೇ ನಿಯಮ ಎಸಿ ಮತ್ತು ಡಿಸಿ ನ್ಯಾಯಾಲಯಗಳಿಗೂ ಅನ್ವಯವಾಗಲಿದೆ ಎಂದು ತಿಳಿದುಬಂದಿದೆ.

ಪ್ರಸಾದ ಬದಲು ಮಾಸ್ಕ್ ವಿತರಣೆ: ಕೊರೊನಾ ವೈರಸ್‌ ಹಾಗೂ ಹಕ್ಕಿಜ್ವರದ ಹಿನ್ನೆಲೆ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಪ್ರಸಾದದ ಬದಲು ಮಾಸ್ಕ್ಗಳನ್ನು ವಿತರಣೆ ವಾಡಲಾಯಿತು.

ಪಿ.ಜಿ., ಹಾಸ್ಟೆಲ್‌ಗ‌ಳಲ್ಲಿ ಸ್ವಚ್ಛತೆ: ಬೇರೆ ಬೇರೆ ಊರುಗಳಿಂದ ಬಂದು ಮೈಸೂರಿನ ಪೇಯಿಂಗ್‌ ಗೆಸ್ಟ್‌ (ಪಿಜಿ)ಗಳಲ್ಲಿ ಉಳಿದುಕೊಂಡಿದ್ದು, ಕೊರೊನಾ ಸಂಬಂಧ ಮುಂಜಾಗ್ರತೆ ವಹಿಸಿರುವ ಜಿಲ್ಲಾಧಿಕಾರಿಗಳು ಪಿಜಿಯಲ್ಲಿರುವವರು ಮನೆಗೆ ಮರಳುವುದು ಸೂಕ್ತ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಒಂದು ವೇಳೆ ಮನೆಗೆ ಮರಳದಿದ್ದರೆ ಇರುವ ಜಾಗದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ವೈಯಕ್ತಿಕ ಸ್ವಚ್ಛತೆ ಅವರ ಕರ್ತವ್ಯ, ಮಿಕ್ಕ ಸ್ವಚ್ಛತೆ ಮಾಲಿಕರ ಕರ್ತವ್ಯ. ಒಂದೇ ಕೋಣೆಯಲ್ಲಿ ಹೆಚ್ಚು ಜನರಿರಬಾರದು. ನೈರ್ಮಲ್ಯದ ಆದೇಶಗಳನ್ನು ಪಾಲಿಸದಿದ್ದರೆ ಆ ಹಾಸ್ಟೆಲ್‌ ಅಥವಾ ಪಿಜಿ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.