ಸುಸ್ಥಿರ ಅಭಿವೃದ್ಧಿ ಗುರಿ ಸಾಧಿಸಲು ಬದ್ಧ
Team Udayavani, Mar 26, 2022, 3:13 PM IST
ಮೈಸೂರು: ಭಾರತದ ಎಲ್ಲ ವಿಶ್ವವಿದ್ಯಾನಿಲಯಗಳ ಕುಲಪತಿ ಗಳು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸಲು ಬದ್ಧರಾಗಿದ್ದಾರೆ. ಶಿಕ್ಷಣ, ಸಂಶೋಧನೆ, ಆವಿಷ್ಕಾರ ಮತ್ತು ಆಡಳಿತದಲ್ಲಿ ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಲಿದ್ದಾರೆ ಎಂದು ಮೈಸೂರಿ ನಲ್ಲಿ ಶುಕ್ರವಾರ ಮುಕ್ತಾಯಗೊಂಡ ದೇಶದ ವಿಶ್ವವಿದ್ಯಾನಿಲ ಯಗಳ ಕುಲಪತಿಗಳ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳ ನದಲ್ಲಿ ನಿರ್ಣಯ ಅಂಗೀಕರಿಸಲಾಗಿದೆ.
ಮೈಸೂರು ವಿಶ್ವವಿದ್ಯಾನಿಲಯ ಮತ್ತು ಭಾರತೀಯ ವಿಶ್ವವಿದ್ಯಾನಿಲಯಗಳ ಸಂಘದ ವತಿಯಿಂದ ಶುಕ್ರವಾರ ಇಲ್ಲಿನ ಮಾನಸಗಂಗೋತ್ರಿ ವಿಜ್ಞಾನ ಭವನದಲ್ಲಿ ನಡೆದ ಉನ್ನತ ಶಿಕ್ಷಣ ಸಂಸ್ಥೆಗಳ ಮೂಲಕ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಅರಿತುಕೊಳ್ಳುವ ಕುರಿತು ಕುಲಪತಿಗಳ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಈ ಕುರಿತು ನಿರ್ಣಯ ಅಂಗೀಕರಿಸಲಾಗಿದೆ. ಇದನ್ನು ಮೈಸೂರು ಡಿಕ್ಲೇರೇಷನ್ ಎಂದು ಕರೆಯಲಾಗಿದೆ.
ವಿಶ್ವವಿದ್ಯಾನಿಲಯಗಳು ಮಹಿಳೆಯರ ಸುರಕ್ಷತೆಗೆ ಪ್ರಾಮುಖ್ಯತೆ ನೀಡಬೇಕು. ಭಾರತ ಸರ್ಕಾರದ ಆತ್ಮನಿರ್ಭರ ಸಂಕಲ್ಪವನ್ನು ಬಲಪಡಿಸಬೇಕು. ವಿಶ್ವವಿದ್ಯಾನಿಲಯಗಳು ಹಸಿರು ವಲಯಗಳಾಗಬೇಕು. ಉದ್ಯಮ ಸ್ನೇಹಿ ಆಗಬೇಕು. ಎಲ್ಲ ವಿಶ್ವವಿದ್ಯಾನಿಲಯಗಳು ಸುಸ್ಥಿರ ಅಭಿವೃದ್ಧಿ ಗುರಿ ಸಾಧಿ ಸುವ ನಿಟ್ಟಿನಲ್ಲಿ ತಮ್ಮ ಪ್ರಗತಿಯನ್ನು ಮೇಲ್ವಿಚಾರಣೆ ಮಾಡ ಬೇಕು. ಮೌಲ್ಯಮಾಪನ ಮಾಡಿ ವರದಿಯನ್ನು ಹೊರತರ ಬೇಕು ಎಂಬ ನಿರ್ಣಯವನ್ನು ಕೈಗೊಳ್ಳಲಾಗಿದೆ. ಭಾರತೀಯ ವಿಶ್ವವಿದ್ಯಾನಿಲಯಗಳ ಸಂಘ ಅಧ್ಯಕ್ಷ ಕರ್ನಲ್ ಡಾ.ತಿರುವಾಸಗಂ ಅವರು ಅಧ್ಯಕ್ಷೀಯ ಭಾಷಣ ಮಾಡಿ ರಾಷ್ಟ್ರೀಯ ಶಿಕ್ಷಣ ನೀತಿ ಉತ್ತಮದು. ಆದರೆ, ವಿಶ್ವವಿ ದ್ಯಾನಿಲಯಗಳಿಗೆ ಅನುದಾನ ನೀಡದಿದ್ದರೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುವುದು ಕಷ್ಟಸಾಧ್ಯ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಸಾಕಷ್ಟು ಮೂಲಸೌಕರ್ಯಗಳು ಅಗತ್ಯವಾಗಿದೆ. ಉದ್ಯೋಗ ಆಧರಿತ ಶಿಕ್ಷಣಕ್ಕೆ ವಿಶ್ವವಿದ್ಯಾನಿಲಯಗಳು ಆದ್ಯತೆ ನೀಡಬೇಕಿದೆ ಎಂದು ಹೇಳಿದರು.
ಅಮೆರಿಕಾ, ರಷ್ಯಾ, ಉಕ್ರೇನ್, ಬ್ರಿಟನ್ ಮತ್ತಿತರ ರಾಷ್ಟ್ರಗಳಲ್ಲಿ ಭಾರತದ 12 ಲಕ್ಷ ವಿದ್ಯಾರ್ಥಿಗಳು ಓದುತ್ತಿದ್ದಾರೆ. ವಿದೇಶಗಳ ಸುಮಾರು 26 ಸಾವಿರ ವಿದ್ಯಾರ್ಥಿಗಳು ಭಾರತದ ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಭಾರತೀಯರು ಏಕೆ ವಿದೇಶಗಳ ವಿಶ್ವವಿದ್ಯಾನಿಲಯಗಳಲ್ಲಿ ಇಷ್ಟೊಂದು ಅಧಿಕ ಸಂಖ್ಯೆಯಲ್ಲಿ ಓದುತ್ತಿದ್ದಾರೆ ಎಂಬ ಬಗ್ಗೆ ಪರಾಮರ್ಶೆ ಮಾಡಬೇಕಿದೆ. ಈ ಸಂಖ್ಯೆ ಅದಲು ಬದಲಾಗ ಬೇಕಿದೆ ಎಂದು ಡಾ.ತಿರುವಾಸಗಂ ಹೇಳಿದರು.
ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತಕುಮಾರ್, ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ನ್ಯಾ.ಹುಲುವಾಡಿ ಜಿ.ರಮೇಶ್, ಪ್ರಧಾನ ಕಾರ್ಯದರ್ಶಿ ಡಾ.ಪಂಕಜಾ ಮಿತ್ತಲ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್
MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Waqf Issue: ಶ್ರೀರಂಗಪಟ್ಟಣದ ಸರಕಾರಿ ಶಾಲೆ ಮೇಲೂ ವಕ್ಫ್ ವಕ್ರದೃಷ್ಟಿ!
MUST WATCH
ಹೊಸ ಸೇರ್ಪಡೆ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.