ನಾಡಕಚೇರಿ ಹಣ ದುರುಪಯೋಗ: ನೋಟಿಸ್


Team Udayavani, Jan 14, 2019, 7:00 AM IST

m3-nada.jpg

ಎಚ್‌.ಡಿ.ಕೋಟೆ: ರೈತರು ನಾಡ ಕಚೇರಿಯಲ್ಲಿರುವ ಅಟಲ್‌ ಜೀ ಜನಸ್ನೇಹಿ ಕೇಂದ್ರದಲ್ಲಿ ಸರ್ಕಾರಕ್ಕೆ ಪಾವತಿಸಬೇಕಾಗಿದ್ದ ವಿವಿಧ ಶುಲ್ಕಗಳ ಬಾಬ್ತು 6.26 ಲಕ್ಷ ರೂ.ಗಳನ್ನು ಇಲ್ಲಿನ ಅಧಿಕಾರಿಗಳೇ ದುರುಪಯೋಗ ಪಡಿಸಿಕೊಂಡಿರುವುದು ಲೆಕ್ಕಪರಿಶೋಧನೆ ವೇಳೆ ಬೆಳಕಿಗೆ ಬಂದಿದೆ. ಅಧಿಕಾರಿಗಳಿಗೆ ಪ್ರಾದೇಶಿಕ ಆಯುಕ್ತರಿಂದ ನೋಟಿಸ್‌ ಜಾರಿ ಮಾಡಲಾಗಿದೆ.

ತಾಲೂಕಿನ ಹಂಪಾಪುರ ಹೋಬಳಿ ನಾಡಕಚೇರಿಯ ಉಪತಹಶೀಲ್ದಾರ್‌ ಎಲ್‌.ಎಸ್‌.ಮಾದೇಶ್‌ ಹಾಗೂ ಗ್ರಾಮ ಲೆಕ್ಕಿಗ ರಾಜಕುಮಾರ್‌ ಎಂಬುವವರೇ ರೈತರು ಮತ್ತು ಸಾರ್ವಜನಿಕರು ಅಟಲ್‌ ಜೀ ಜನಸ್ನೇಹಿ ಕೇಂದ್ರದಲ್ಲಿ ಸರ್ಕಾರಕ್ಕೆ ಕಟ್ಟಿದ್ದ ಸರ್ಕಾರದ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದು, ಅಡಿಟ್‌ (ಲೆಕ್ಕ ಪರಿಶೋಧನೆ) ವೇಳೆ ಸಿಕ್ಕಿ ಬಿದ್ದಿದ್ದಾರೆ.

ನಾಡ ಕಚೇರಿಯಲ್ಲಿರುವ ಅಟಲ್‌ ಜೀ ಜನಸ್ನೇಹಿ ಕೇಂದ್ರದಲ್ಲಿ ಸ್ವೀಕೃತವಾಗುವ ಮೋಜಿಣಿ ಅರ್ಜಿಗಳು, ಆರ್‌ಟಿಸಿ ವಿತರಣೆ ಶುಲ್ಕ, ಆರ್‌ಡಿಎಸ್‌ ಶುಲ್ಕ, ಇ-ಜನ್ಮ ಹಾಗೂ 94ಸಿ ಅರ್ಜಿ ಶುಲ್ಕ, ಪಹಣಿ ಮತ್ತು ಮ್ಯುಟೇಷನ್‌ ಶುಲ್ಕ ಸೇರಿದಂತೆ ಇನ್ನಿತರ ಬಾಬ್ತುಗಳ ಶುಲ್ಕಗಳನ್ನು ಸ್ವೀಕರಿಸಲಾಗುತ್ತದೆ. ಹೀಗೆ ಸಾರ್ವಜನಿಕರಿಂದ ಸ್ವೀಕೃತವಾಗುವ ಶುಲ್ಕಗಳನ್ನು ಅಂದಿನ ದಿನವೇ ನಿಗದಿತ ಬ್ಯಾಂಕ್‌ ಖಾತೆ ಅಥವಾ ಅಂಚೆ ಕಚೇರಿಗೆ ಜಮಾ ಮಾಡಬೇಕು.

ಅದರೆ, ಇಲ್ಲಿನ ಅಧಿಕಾರಿಗಳು ಆರ್‌ಟಿಸಿ ವಿತರಣೆ ಮತ್ತು ಆರ್‌ಡಿಎಸ್‌ ಶುಲ್ಕ ಹಾಗೂ ಮೋಜಿಣಿ ಅರ್ಜಿಗಳ ಶುಲ್ಕ ಸೇರಿ ಒಟ್ಟು 6.26 ಲಕ್ಷ ರೂ.ಗಳನ್ನು ಬ್ಯಾಂಕ್‌ ಮತ್ತು ಅಂಚೆ ಕಚೇರಿಯಲ್ಲಿ ಸರ್ಕಾರದ ನಿಗದಿತ ಖಾತೆಗಳಿಗೆ ಜಮಾ ಮಾಡಿಲ್ಲ. ರೈತರು, ಸಾರ್ವಜನಿಕರು ಸರ್ಕಾರಕ್ಕೆ ಸಲ್ಲಿಸಿದ್ದ ಸರ್ಕಾರಿ ಹಣವನ್ನು ಉಪತಹಶೀಲ್ದಾರ್‌ ಹಾಗೂ ಗ್ರಾಮಲೆಕ್ಕಿಗರು ಸ್ವಂತಕ್ಕೆ ಬಳಸಿಕೊಂಡಿರುವುದು ಕಂಡು ಬಂದಿದೆ.

ಕರ್ತವ್ಯ ಲೋಪ: ಜೊತೆಗೆ ಶಾಸನ ಬದ್ಧ ಶುಲ್ಕಗಳ ಸ್ವೀಕೃತಿಗೆ ಸಂಬಂಧಪಟ್ಟ ಇರಸಾಲು ವಹಿಗಳನ್ನು ಕ್ರಮಬದ್ಧವಾಗಿ ನಿರ್ವಹಣೆ ಮಾಡದೇ ಕರ್ತವ್ಯ ಲೋಪವೆಸಗಿರುವುದು ಕಂಡು ಬಂದಿದೆ. ಹೀಗಾಗಿ ಸರ್ಕಾರಿ ಹಣ ದುರುಪಯೋಗದ ಮತ್ತು ಕರ್ತವ್ಯ ಲೋಪವೆಸಗಿರುವ ಕುರಿತು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಾರ್ಯಾಲಯ ನೋಟಿಸ್‌ ಜಾರಿ ಮಾಡಿ ಒಂದು ವಾರದೊಳಗೆ ಲಿಖೀತ ಸಮಜಾಯಿಸಿ ನೀಡಬೇಕು, ತಪ್ಪಿದಲ್ಲಿ ಸರ್ಕಾರಿ ಹಣ ದುರುಪಯೋಗಪಡಿಸಿಕೊಂಡು ಕರ್ತವ್ಯ ಲೋಪವೆಸಗಿರುವ ನಿಮ್ಮ ವಿರುದ್ಧ ನಿಯಮಾನುಸಾರ ಶೀಘ್ರದಲ್ಲೇ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಸರ್ಕಾರಿ ಹಣ ದುರುಪಯೋಗಪಡಿಸಿಕೊಂಡಿದ್ದೀರಿ ಎಂದು ಪ್ರದೇಶಿಕ ಆಯುಕ್ತರ ಕಚೇರಿಯಿಂದ ನೋಟಿಸ್‌ ಬಂದಿದೆ. ಆ ರೀತಿ ಏನೂ ಆಗಿಲ್ಲ. ರಶೀದಿ ನಿರ್ವಹಣೆ ಕೊರತೆಯಿಂದಾಗಿ ತಪ್ಪಾಗಿದೆ. ನನಗೆ ದರಖಾಸ್ತು ಮತ್ತು ಚುನಾವಣೆ ಶಿರಸ್ತೇದಾರ್‌ ಆಗಿ ಎರಡು ಜವಾಬ್ದಾರಿ ನೀಡಿರುವುದರಿಂದ ಅಲ್ಲಿ ಹೋಗಿ ಗಮನಿಸಲು ಆಗಿಲ್ಲ. ಬ್ಯಾಂಕ್‌ ಮತ್ತು ಪೋಸ್ಟ್‌ ಆಫೀಸ್‌ಗೆ ಸ್ಟೇಟ್‌ಮೆಂಟ್‌ ಕೇಳಿ ಪತ್ರ ಬರೆದಿದ್ದೇನೆ.
-ಎಲ್‌.ಎಸ್‌.ಮಾದೇಶ್‌, ಉಪತಹಶೀಲ್ದಾರ್‌

ಟಾಪ್ ನ್ಯೂಸ್

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

Loka-SP-Udesh–CM

MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್‌

CM-siddu

MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ

2-hunsur

Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

11-kushtagi

Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

10-kodagu

Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್‌ ಮೇಜರ್‌

9–Niveus-Mangalore-Marathon

Niveus Mangalore Marathon 2024: ನ.10: ನೀವಿಯಸ್‌ ಮಂಗಳೂರು ಮ್ಯಾರಥಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.