ನಾಡಹಬ್ಬ ದಸರೆಗೆ ವ್ಯಾಪಕ ಪ್ರಚಾರಕ್ಕೆ ಆದ್ಯತೆ


Team Udayavani, Jul 22, 2017, 11:41 AM IST

mys1.jpg

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ವ್ಯಾಪಕ ಪ್ರಚಾರ ನೀಡಿ ಮೈಸೂರಿಗೆ ಹೆಚ್ಚು ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ರಾಜ್ಯಮಟ್ಟದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಗೆ ಪ್ರಚಾರದ ಜವಾಬ್ದಾರಿವಹಿಸುವಂತೆ ಸರ್ಕಾರವನ್ನು ಕೋರಲು ನಿರ್ಧರಿಸಿದೆ.

ಜು.24ರಂದು ಸಿಎಂ ಸಿದ್ದರಾಮಯ್ಯ  ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ದಸರಾ ಉನ್ನತಮಟ್ಟದ ಸಭೆ ನಡೆಯಲಿರುವ ಹಿನ್ನೆಲೆ ಜಿಲ್ಲಾಧಿಕಾರಿ ರಂದೀಪ್‌ ಡಿ., ಶುಕ್ರವಾರ ಜಿಲ್ಲಾಮಟ್ಟದ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದರು.

ಐತಿಹಾಸಿಕ ದಸರಾ ಮಹೋತ್ಸವ ಆಚರಣೆಯ ಹಿನ್ನೆಲೆ ರಾಜಾದ್ಯಂತ ಬಸ್‌, ರೈಲು, ವಿಮಾನ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ವ್ಯಾಪಕ ಪ್ರಚಾರ ಮಾಡಬೇಕಿರುವುದರಿಂದ ಈ ಎರಡೂ ಇಲಾಖೆಗಳಿಗೆ ರಾಜ್ಯಮಟ್ಟದ ಜವಾಬ್ದಾರಿವಹಿಸಿ ಇಲಾಖಾ ವೆಚ್ಚದಲ್ಲಿ ಪ್ರತ್ಯೇಕ ಆಯವ್ಯಯ ಮಾಡಿಕೊಂಡು ಪ್ರಚಾರಕ್ಕೆ ಕ್ರಮ ಕೈಗೊಳ್ಳುವುದು ಸೂಕ್ತ, ಈ ಬಗ್ಗೆ ಉನ್ನತಮಟ್ಟದ ಸಭೆಗೆ ಮನವರಿಕೆ ಮಾಡಿಕೊಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಗಜಪಡೆಗೆ ವಿಶೇಷ ಆದ್ಯತೆ: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಗಜಪಡೆಯನ್ನು ಕಾಡಿನಿಂದ ಅರಮನೆಗೆ ಕರೆತರಲು ಸಂಪ್ರದಾಯದಂತೆ ಅರ್ಚಕರು ಆಗಸ್ಟ್‌ 2, 4, 6, 10 ಹಾಗೂ 14ನೇ ತಾರೀಖು ಸೂಕ್ತ ಎಂದು ತಿಳಿಸಿರುವುದರಿಂದ ಈ ಐದು ದಿನಗಳಲ್ಲಿ ಉನ್ನತಮಟ್ಟದ ಸಮಿತಿ ಸಭೆ ಒಪ್ಪಿದ ದಿನಾಂಕ ಗಜಪಯಣ ಏರ್ಪಡಿಸಲಾಗುವುದು.

ನಗರದ ರಸ್ತೆಗಳಲ್ಲಿನ ಗುಂಡಿ ಮುಚ್ಚಲು ಪಾಲಿಕೆವತಿಯಿಂದ 5 ಕೋಟಿ ರೂ.ಗೆ ಪ್ರಸ್ತಾವನೆ ಸಲ್ಲಿಸುವ ಬಗ್ಗೆ ಪಾಲಿಕೆ ಆಯುಕ್ತ ಜಿ.ಜಗದೀಶ್‌ ಸಭೆಯ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ರಂದೀಪ್‌, ಕಳೆದ ವರ್ಷ ದಸರಾ ಉದ್ಘಾಟನೆ ನಂತರವೂ ನಗರದಲ್ಲಿ ರಸ್ತೆ ಗುಂಡಿಮುಚ್ಚುವ ಕೆಲಸ ನಡೆಯುತ್ತಿತ್ತು. ಆದರೆ, ಈ ವರ್ಷ ಮುಂಚಿತವಾಗಿ ರಸ್ತೆ ಗುಂಡಿ ಮುಚ್ಚುವ ಕೆಲಸ ಮುಗಿಸುವಂತೆ ತಿಳಿಸಿದರು.

ಬನ್ನಿಮಂಟಪ ಪಂಜಿನ ಕವಾಯತು ಮೈದಾನದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಅಂದಾಜು 30 ಸಾವಿರ ಜನರಿಗೆ ಆಸನ ವ್ಯವಸ್ಥೆ ಕಲ್ಪಿಸಬಹುದು ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಸಭೆಗೆ ತಿಳಿಸಿದರು. ಬರಗಾಲದ ಹಿನ್ನೆಲೆ ಕಳೆದ ಎರಡು ವರ್ಷಗಳಿಂದ ಪಂಜಿನ ಕವಾಯತು ವೇಳೆ ಲೇಸರ್‌ ಶೋ ಕೈ ಬಿಡಲಾಗಿತ್ತು. ಈ ವರ್ಷ ಲೇಸರ್‌ ಶೋ ಆಯೋಜಿಸುವ ಪ್ರಸ್ತಾವನೆ ಇಡಬಹುದು ಎಂದು ಡಿಸಿಪಿ ವಿಕ್ರಂ ಅಮಟೆ ಸಲಹೆ ನೀಡಿದರು.

ಕಳೆದ ವರ್ಷ ದಸರಾ ಭದ್ರತೆಗಾಗಿ ಪೊಲೀಸ್‌ ಇಲಾಖೆಗೆ 1.33 ಕೋಟಿ ನೀಡಲಾಗಿದೆ. ಈ ವರ್ಷ ಅನಾವಶ್ಯಕ ವೆಚ್ಚಗಳನ್ನು ತಡೆಗಟ್ಟಿ, ವಿಜಯದಶಮಿ ಮೆರವಣಿಗೆಯ ದಿನ ಹೆಚ್ಚಿನ ಪೊಲೀಸ್‌ ಸಿಬ್ಬಂದಿ ನಿಯೋಜಿಸುವಂತೆ ಹೇಳಿದರು. ಕಳೆದ ವರ್ಷ ನಗರದ ವಿದ್ಯುತ್‌ ದೀಪಾಲಂಕಾರಕ್ಕೆ ಸೆಸ್ಕ್ 72 ಲಕ್ಷ ರೂ. ಖರ್ಚು ಮಾಡಿದ್ದು, ಸಯ್ನಾಜಿರಾವ್‌ ವೃತ್ತ, ಕೆ.ಆರ್‌.ವೃತ್ತ ಹೊರತುಪಡಿಸಿ ಉಳಿದೆಡೆ ಎಲ್‌ಇಡಿ ಬಲ್ಬ್ ಹಾಕಲಾಗಿತ್ತು. ಈ ವರ್ಷ ಸಂಪೂರ್ಣವಾಗಿ ಎಲ್‌ಇಡಿ ಬಲ್ಬ್ ಬಳಸುವುದಾಗಿ ತಿಳಿಸಿದ ಸೆಸ್ಕ್ ಎಂಜಿನಿಯರ್‌, ಅನುದಾನಕ್ಕಾಗಿ ಜಿಲ್ಲಾಧಿಕಾರಿಗಳಿಗೆ ಬೇಡಿಕೆ ಇಟ್ಟರು.

ವಿಶ್ವ ಪ್ರವಾಸೋದ್ಯಮ ದಿನ: ದಸರಾ ಮಹೋತ್ಸವದ ಮಧ್ಯೆಯೇ ಸೆ.27ರಂದು ವಿಶ್ವ ಪ್ರವಾಸೋದ್ಯಮ ದಿನ ಬರುವುದರಿಂದ ರಾಜ್ಯಮಟ್ಟದ ಕಾರ್ಯಕ್ರಮವನ್ನು ಮೈಸೂರಿನಲ್ಲೇ ಆಯೋಜಿಸಲು ಸರ್ಕಾರವನ್ನು ಕೋರಲು ನಿರ್ಧರಿಸಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ್‌, ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲ, ಮುಡಾ ಆಯುಕ್ತ ಡಾ.ಮಹೇಶ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್‌.ಚೆನ್ನಪ್ಪ, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಜನಾರ್ದನ್‌, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಆರ್‌.ರಾಜು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಸೂಕ್ತ ವ್ಯವಸ್ಥೆ ಕಲ್ಪಿಸಬೇಕು: ಈ ಬಾರಿ ವಿಶೇಷವಾಗಿ ದಸರಾ ಆನೆಗಳನ್ನು ಹೆಚ್ಚು ಜನರು ಕಣ್ತುಂಬಿಕೊಳ್ಳಲಿ ಎಂಬ ಕಾರಣಕ್ಕೆ ಹುಣಸೂರು ತಾಲೂಕು ನಾಗಾಪುರ ಗಿರಿಜನ ಆಶ್ರಮ ಶಾಲೆಯ ಆವರಣದಲ್ಲಿ ನಡೆಯುವ ಗಜಪಯಣ ಕಾರ್ಯಕ್ರಮಕ್ಕೆ ಹೆಚ್ಚಿನ ಜನರನ್ನು ಸೇರಿಸುವುದು ಹಾಗೂ ಕಾಡಿನಿಂದ ಕರೆತರಲಾದ ಆನೆಗಳನ್ನು ಅರಮನೆಗೆ ಸ್ವಾಗತಿಸುವ ದಿನ ಕೂಡ ಹೆಚ್ಚಿನ ಜನರನ್ನು ಸೇರಿಸುವ ಜತೆಗೆ ದಸರಾ ಆನೆಗಳ ಜತೆಗೆ ಬರುವ ಮಾವುತರು, ಕಾವಾಡಿಗಳ ಕುಟುಂಬಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು.

ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆಯುವ ದಸರಾ ಉನ್ನತಮಟ್ಟದ ಸಭೆಯಲ್ಲಿ ಅದ್ಧೂರಿ, ಸರಳ, ಸಾಂಪ್ರದಾಯಿಕ ಹೀಗೆ ಯಾವ ದಸರಾ ಆಚರಣೆಗೆ ನಿರ್ಧರಿಸಲಾಗುತ್ತದೆಯೋ ಅದರಂತೆ ಅನುದಾನ ಕೋರಲಾಗುವುದು. ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಿ ಪ್ರವಾಸಿಗರಿಗೆ ದಸರಾ ಪರಿಣಾಮಕಾರಿ ಅನುಭವವಾಗುವಂತೆ ಕ್ರಮ ಕೈಗೊಳ್ಳಲಾಗುವುದು.
-ರಂದೀಪ್‌ ಡಿ., ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.