ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು : ಕಟೀಲ್ ವಿಶ್ವಾಸ


Team Udayavani, Apr 12, 2022, 8:29 PM IST

ಅಭಿವೃದ್ಧಿ ಆಧಾರದಲ್ಲಿ 150ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಗೆಲುವು : ಕಟೀಲ್ ವಿಶ್ವಾಸ

ಮೈಸೂರು: ರಾಜ್ಯದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಕ್ಕಿಂತ ಹೆಚ್ಚು ಗೆಲ್ಲಲು ಸಿದ್ಧತೆ ಮಾಡಿಕೊಂಡಿದ್ದೇವೆ. ಬಿಜೆಪಿ ಅಭಿವೃದ್ಧಿ ಮೇಲೆ ವಿಶ್ವಾಸ ಹೊಂದಿದೆ. ಅಭಿವೃದ್ಧಿ ಮತ್ತು ಸಂಘಟನೆಯ ಆಧಾರದಲ್ಲೇ ಚುನಾವಣೆ ಎದುರಿಸುತ್ತೇವೆ ಎಂದು ಬಿಜೆಪಿ ಸಂಸದರು ಮತ್ತು ರಾಜ್ಯಾಧ್ಯಕ್ಷರೂ ಆದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು.

ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇನ್ನೊಂದು ವರ್ಷದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. 3 ವರ್ಷಗಳ ಕಾಲ ಬಿಜೆಪಿ ಆಡಳಿತವಿದ್ದು, ಪಕ್ಷವು ಸಂಘಟನಾತ್ಮಕವಾಗಿ ಬೆಳೆದಿದೆ ಎಂದು ವಿವರಿಸಿದರು.

ಕೋವಿಡ್‍ನ ಸುಮಾರು ಎರಡರಿಂದ ಎರಡೂವರೆ ವರ್ಷಗಳ ನಡುವೆಯೂ ಪಕ್ಷವು ಸಂಘಟನಾತ್ಮಕವಾಗಿ ಬೆಳೆದಿದೆ. ಗ್ರಾಮ ಪಂಚಾಯತ್, ವಿಧಾನಸಭೆ ಉಪ ಚುನಾವಣೆ, ಇತರ ಚುನಾವಣೆಗಳಲ್ಲಿ ಪಕ್ಷ ಹೆಚ್ಚು ಸ್ಥಾನಗಳನ್ನು ಗೆದ್ದುಕೊಂಡಿದೆ. ಇದೀಗ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ 3 ತಂಡಗಳ ಪ್ರವಾಸ ಹಮ್ಮಿಕೊಳ್ಳಲಾಗಿದೆ. ತಾವು, ಬಸವರಾಜ ಬೊಮ್ಮಾಯಿ, ಅರುಣ್ ಸಿಂಗ್ ಹಾಗೂ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಈ ಪ್ರವಾಸ ನಡೆಯುತ್ತಿದೆ ಎಂದರು.

ಇಂದಿನ ರಾಜಕೀಯ ಸ್ಥಿತಿಗತಿ, ಕಾರ್ಯಕರ್ತರ ಅಭಿಪ್ರಾಯ, ವ್ಯತ್ಯಾಸಗಳ ಮಾಹಿತಿ ಸಂಗ್ರಹ ಮಾಡಲಾಗುವುದು. ವಿಭಾಗದಿಂದ ಆರಂಭಿಸಿ ಶಕ್ತಿಕೇಂದ್ರಗಳ ವರೆಗೆ ಪ್ರಮುಖರ ಸಮಾವೇಶವನ್ನೂ ನಡೆಸಲಾಗುವುದು. ಇದರಿಂದ ಎಲ್ಲ ಸ್ತರದ ಕಾರ್ಯಕರ್ತರ ಜೊತೆ ಸಂವಹನ ಸಾಧ್ಯವಾಗಲಿದೆ. ಮುಂದಿನ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಬ್ಲೂಪ್ರಿಂಟ್ ತಯಾರಿಸಲು ಇದು ಪೂರಕ ಎಂದು ತಿಳಿಸಿದರು.

ಇದನ್ನೂ ಓದಿ : ಜಾತ್ರೆಯಲ್ಲಿ ಸರ್ವ ಧರ್ಮಿಯರಿಗೂ ವ್ಯಾಪಾರಕ್ಕೆ ಅವಕಾಶ ನೀಡುವಂತೆ ಮನವಿ

ಬೂತ್ ಮತ್ತು ಪೇಜ್ ಕಮಿಟಿಗಳನ್ನು ಬಲಪಡಿಸಲಾಗುತ್ತಿದೆ. ಬೂತ್ ಅಧ್ಯಕ್ಷರ ಮನೆಗಳಿಗೆ ನಾಮಫಲಕ ಜೋಡಣೆ ಯಶಸ್ವಿಯಾಗಿದೆ. ವಿಸ್ತಾರಕ್ ಯೋಜನೆಯೂ ಯಶಸ್ಸು ಪಡೆದಿದೆ. ರಾಜ್ಯದಲ್ಲಿ ಶೇ 60ರಷ್ಟು ಪೇಜ್ ಕಮಿಟಿ ಸಂಘಟಿಸಲಾಗಿದೆ ಎಂದರು.

ಕೋವಿಡ್ ವೇಳೆ ಕೈಗೊಂಡ ಕ್ರಮಗಳು, ಲಸಿಕಾಕರಣ, ಉಕ್ರೇನ್ ಸಂದರ್ಭದಲ್ಲಿ 22 ಸಾವಿರ ಭಾರತೀಯರನ್ನು ಮರಳಿ ಕರೆತಂದಿರುವುದು, ಆರ್ಥಿಕ ಚೇತರಿಕೆ ಮನಗಂಡು ಜನರು ಬಿಜೆಪಿಯತ್ತ ಹೆಚ್ಚಿನ ಒಲವು ತೋರುತ್ತಿದ್ದಾರೆ. ರಾಜ್ಯ ಸರಕಾರದ ಸಾಧನೆಯೂ ಅತ್ಯುತ್ತಮವಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಬಗ್ಗೆ ಆ ಪಕ್ಷಗಳ ನಾಯಕರು ಮತ್ತು ಕಾರ್ಯಕರ್ತರು ಭ್ರಮನಿರಸನಗೊಂಡಿದ್ದಾರೆ. ಅಂಥವರ ಪಕ್ಷ ಸೇರ್ಪಡೆ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ವಿವರಿಸಿದರು.

14ರಂದು ಅಂಬೇಡ್ಕರ್ ಜಯಂತಿ ಕಾರಣ ಎಲ್ಲರೂ ತಮ್ಮ ಕ್ಷೇತ್ರಗಳಿಗೆ ತೆರಳಲಿದ್ದಾರೆ. ಅಲ್ಲದೆ, 15ರಂದು ಯಾತ್ರೆ ಇರುವುದಿಲ್ಲ. 16- 17ರಂದು ಪಕ್ಷದ ರಾಜ್ಯ ಕಾರ್ಯಕಾರಿಣಿ ಇರುವ ಕಾರಣ ಯಾತ್ರೆ ಇರುವುದಿಲ್ಲ. 18ರ ಬಳಿಕ 24ರವರೆಗೆ ಯಾತ್ರೆ ಮುಂದುವರಿಯಲಿದೆ. 3 ತಂಡಗಳಲ್ಲಿ 10 ವಿಭಾಗಗಳು, ಎಲ್ಲ ಜಿಲ್ಲೆಗಳಿಗೆ ತಂಡಗಳು ತೆರಳಲಿವೆ ಎಂದು ನುಡಿದರು.
ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ರಾಜ್ಯದ ಸಚಿವರಾದ ಕೆ.ಎಸ್. ಈಶ್ವರಪ್ಪ, ವಿ. ಸೋಮಣ್ಣ, ಕೆ.ಸಿ. ನಾರಾಯಣಗೌಡ, ಕೆ. ಗೋಪಾಲಯ್ಯ, ರಾಜ್ಯ ಉಪಾಧ್ಯಕ್ಷರು ಮತ್ತು ಸಂಸದರಾದ ಪ್ರತಾಪ್‍ಸಿಂಹ, ರಾಜ್ಯ ಉಪಾಧ್ಯಕ್ಷರಾದ ಎಂ. ರಾಜೇಂದ್ರ, ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು, ರಾಜ್ಯ ಕಾರ್ಯದರ್ಶಿಗಳಾದ ತುಳಸಿ ಮುನಿರಾಜುಗೌಡ, ರಾಜ್ಯ ಮುಖ್ಯ ವಕ್ತಾರರಾದ ಎಂ.ಜಿ. ಮಹೇಶ್, ಶಾಸಕರಾದ ಎಸ್.ಎ. ರಾಮದಾಸ್, ಎಲ್. ನಾಗೇಂದ್ರ, ಮೈಸೂರು ಜಿಲ್ಲಾ ಅಧ್ಯಕ್ಷರಾದ ಮಂಗಳಾ ಸೋಮಶೇಖರ್ ಅವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

School-Chikki

Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!

HC-Mahadevappa

Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ

Sathish-sail–court

Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್‌ ಸೇರಿ ನಾಲ್ವರು ಹೈಕೋರ್ಟ್‌ಗೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

7-bunts

Mangaluru: ಡಿ. 7: ಮುಂಬಯಿಯಲ್ಲಿ ವಿಶ್ವ ಬಂಟರ ಸಮಾಗಮ

6-udupi

Udupi: ಪ್ರಧಾನಿ ಸಹೋದರ ಸೋಮು ಬಾೖ ಶ್ರೀ ಕೃಷ್ಣಮಠಕ್ಕೆ ಭೇಟಿ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

5-MAHE

MAHE Convocation: ನ. 8-10: ಮಾಹೆ ಘಟಿಕೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.