Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
"ಸಿದ್ದರಾಮಯ್ಯ ಆರೋಗ್ಯ ಮಾರ್ಗ' ಕುರಿತು ಮುಖ್ಯಮಂತ್ರಿ ಹೇಳಿದ್ದೇನು? ವಿಡಿಯೋ ನೋಡಿ..
Team Udayavani, Jan 10, 2025, 9:43 PM IST
ಮೈಸೂರು: ನಗರದ ರಸ್ತೆಯೊಂದಕ್ಕೆ ನನ್ನ ಹೆಸರನ್ನು ನಾಮಕರಣ ಮಾಡಿ ಎಂದು ಯಾರಿಗೂ ನಾನು ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, 45 ವರ್ಷದ ರಾಜಕೀಯದ ಅವಧಿಯಲ್ಲಿ ಎಂದಿಗೂ ತನ್ನ ಹೆಸರಿನ್ನಿಡುವಂತೆ ಯಾರಿಗೂ ಹೇಳಿಲ್ಲ. ಈ ಹಿಂದೆ ಮೈಸೂರು ವಿವಿ ಡಾಕ್ಟರೇಟ್ ಕೊಟ್ಟಾಗಲೇ ನಾನು ಬೇಡ ಎಂದಿದ್ದೆ. ಇನ್ನೂ ರಸ್ತೆಗೆ ನಾಮಕರಣ ವಿಚಾರವಾಗಿ ಯಾರ ಜತೆಗೂ ಚರ್ಚೆಯನ್ನೇ ಮಾಡಿಲ್ಲ. ಆ ರಸ್ತೆಗೆ ಬೇರೆ ಹೆಸರಿದ್ದರೆ ಬದಲಾವಣೆ ಮಾಡುವುದು ಬೇಡ ಎಂದರು. ಈ ಮೂಲಕ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಾಮಕರಣ ವಿಚಾರವಾಗಿ ನಡೆಯುತ್ತಿದ್ದ ವಾದ-ವಿವಾದ, ಚರ್ಚೆ, ಗೊಂದಲಗಳಿಗೆ ಮುಖ್ಯಮಂತ್ರಿ ತೆರೆ ಎಳೆದಿದ್ದಾರೆ.
ಮೈಸೂರು ವಿಶ್ವವಿದ್ಯಾಲಯದವರು ಡಾಕ್ಟರೇಟ್ ನೀಡಲು ಮುಂದೆ ಬಂದಾಗ ಅದನ್ನೇ ವಿನಯವಾಗಿ ಬೇಡ ಅಂದಿದ್ದೆ. ನಾನೇನು ನಿನ್ನೆ ಮೊನ್ನೆ ರಾಜಕಾರಣಕ್ಕೆ ಬಂದವನಲ್ಲ, ಕಳೆದ 45 ವರ್ಷಗಳಿಂದ ಅಧಿಕಾರದ ವಿವಿಧ ಸ್ಥಾನಗಳಲ್ಲಿ ಇದ್ದೇನೆ. ಯಾವತ್ತೂ ನನ್ನ ಹೆಸರನ್ನು ರಸ್ತೆಗೋ, ಕಟ್ಟಡಗಳಿಗೋ ಇಡಿ ಎಂದು ಯಾರ ಬಳಿ ಹೇಳಿಲ್ಲ. ಅದರ ಅಗತ್ಯವೂ ನನಗಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಶರಣಾದ ನಕ್ಸಲರ ಶಸ್ತ್ರಾಸ್ತ್ರಗಳು ಎಲ್ಲಿವೆ ಅಂತ ಗೊತ್ತು:
ಶರಣಾಗತರಾದ ನಕ್ಸಲರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳುವ ಬಗ್ಗೆ ಹಾಗೂ ನಕ್ಸಲರ ಶರಣಾಗತಿಯ ಬಗ್ಗೆ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ನಕ್ಸಲಿಸಂ ಅನ್ನು ಸಂಪೂರ್ಣ ತೊಡೆದುಹಾಕವುದು ಕಾಂಗ್ರೆಸ್ ಸರ್ಕಾರದ ಉದ್ದೇಶ ಎಂದರು. ಶರಣಾದ ನಕ್ಸಲರ ಶಸ್ತ್ರಾಸ್ತ್ರಗಳು ಎಲ್ಲಿವೆ ಎಂದು ಗೊತ್ತಿದೆ. ಅದನ್ನು ಪೊಲೀಸರು ಮಹಜರಿಗೆ ಒಳಪಡಿಸಿ ವಶಕ್ಕೆ ತೆಗೆದುಕೊಳ್ತಾರೆ. ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ. ಈ ಕರ್ತವ್ಯವನ್ನು ನಾವು ಚಾಚೂ ತಪ್ಪದೆ ಪಾಲನೆ ಮಾಡುತ್ತಿದ್ದೇವೆ ಎಂದು ಹೇಳಿದರು.
ಕೇಂದ್ರ ಸರ್ಕಾರ ರೈತರ ಪರವಾದ ಸರ್ಕಾರವಲ್ಲ. ಬೆಳೆಗಳಿಗೆ ಎಂಎಸ್ಪಿ ನೀಡುವುದಕ್ಕೆ ಕಾನೂನು ರಚಿಸುವಂತೆ ರೈತರ ಬೇಡಿಕೆಯಾಗಿದ್ದು, ಈ ಬೇಡಿಕೆಗೆ ಮಣಿಯದ ಅಮಾನವೀಯ ಹಾಗೂ ರೈತವಿರೋಧಿ ಸರ್ಕಾರವಾಗಿದೆ ಎಂದು ಕಿಡಿಕಾರಿದರು.
ಮೈಸೂರು ವಿಶ್ವವಿದ್ಯಾಲಯದವರು ಡಾಕ್ಟರೇಟ್ ನೀಡಲು ಮುಂದೆ ಬಂದಾಗ ಅದನ್ನೇ ವಿನಯವಾಗಿ ಬೇಡ ಅಂದಿದ್ದೆ. ನಾನೇನು ನಿನ್ನೆ ಮೊನ್ನೆ ರಾಜಕಾರಣಕ್ಕೆ ಬಂದವನಲ್ಲ, ಕಳೆದ 45 ವರ್ಷಗಳಿಂದ ಅಧಿಕಾರದ ವಿವಿಧ ಸ್ಥಾನಗಳಲ್ಲಿ ಇದ್ದೇನೆ. ಯಾವತ್ತೂ ನನ್ನ ಹೆಸರನ್ನು ರಸ್ತೆಗೋ, ಕಟ್ಟಡಗಳಿಗೋ ಇಡಿ ಎಂದು ಯಾರ ಬಳಿ ಹೇಳಿಲ್ಲ. ಅದರ ಅಗತ್ಯವೂ ನನಗಿಲ್ಲ.
— CM of Karnataka (@CMofKarnataka) January 10, 2025
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.