ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆ: ಜೆಡಿಎಸ್ ಸ್ಪರ್ಧೆ
Team Udayavani, Feb 19, 2017, 3:45 AM IST
ಮೈಸೂರು: ನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡೂ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕ ಸದ್ಯದಲ್ಲೇ ಪ್ರಕಟವಾಗಲಿರುವುದರಿಂದ ಇಲ್ಲಿ ಸಭೆ ನಡೆಸಿ ಕಾರ್ಯಕರ್ತರ ಭಾವನೆ ತಿಳಿದುಕೊಂಡಿದ್ದೇನೆ. ಜೆಡಿಎಸ್‌ನಲ್ಲಿ ಅಭ್ಯರ್ಥಿಗಳಿಗೇನು ಕೊರತೆ ಇಲ್ಲ. ಎರಡೂ ಕ್ಷೇತ್ರದಲ್ಲಿ ಹಲವು ಮಂದಿ ಸ್ಪರ್ಧಾಕಾಂಕ್ಷಿಗಳಿದ್ದಾರೆ. ಅಲ್ಲದೇ, ಜನರ ಒಲವು ಕೂಡ ಜೆಡಿಎಸ್ ಪರವಾಗಿದೆ. ಹಿಂದೆ ಬಿಜೆಪಿ ಆಪರೇಷನ್ ಕಮಲ ಮಾಡಿದ್ದ ಸಂದರ್ಭದಲ್ಲಿಯೇ 20 ಉಪ ಚುನಾವಣೆ ಎದುರಿಸಿದ ತನಗೆ ಈ ಎರಡು ಉಪ ಚುನಾವಣೆ ಎದುರಿಸುವ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಹೇಳಿದರು.
ಪಕ್ಷಕ್ಕೆ ದ್ರೋಹ ಎಸಗಿದ ಕಳಲೆ:
ಕಾಂಗ್ರೆಸ್ ಸೇರಿರುವ ಕಳಲೆ ಕೇಶವಮೂರ್ತಿ, ಪಕ್ಷ ಬಿಡುವ ಕುರಿತು ತನ್ನೊಡನೆ ಮಾತುಕತೆ ನಡೆಸಿರಲಿಲ್ಲ. ಅಲ್ಲದೆ, ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಪಕ್ಷಕ್ಕೆ ದ್ರೋಹ ಬಗೆಯುವುದಿಲ್ಲ ಎಂದು ಎಲ್ಲರೆದರು ಹೇಳಿದ್ದ ಕೇಶವಮೂರ್ತಿ, ಪಕ್ಷ ಬಿಟ್ಟು ಹೋಗಿದ್ದಾರೆ. ಆ ಬಗ್ಗೆ ತಾನು ತಲೆಕೆಡಿಸಿಕೊಂಡಿಲ್ಲ. ಪಕ್ಷದಲ್ಲಿ ಕ್ರಿಯಾಶೀಲರಾಗಿರುವ ಹೊಸ ಮುಖಗಳಿಗೆ ಅವಕಾಶ ನೀಡುತ್ತೇನೆ ಎಂದು ತಿಳಿಸಿದರು.
ನಂಜನಗೂಡು ಕ್ಷೇತ್ರದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗ ಇನ್ನಿಲ್ಲದ ಪ್ರೀತಿ ಬಂದಿದೆ. ಶ್ರೀನಿವಾಸಪ್ರಸಾದ್ ಕಾಂಗ್ರೆಸ್‌ನಲ್ಲಿ ಇರುವವರೆಗೂ ಇಲ್ಲದ ಪ್ರೀತಿ, ಈಗ ಹೆಚ್ಚಾಗಿದೆ. ನಿಯಮ ಗಾಳಿಗೆ ತೂರಿ ನೂರಾರು ಕೋಟಿ ಯೋಜನೆಗೆ ಅನುಮೋದನೆ ನೀಡುತ್ತಿದ್ದಾರೆ.
ಶ್ರೀನಿವಾಸಪ್ರಸಾದ್ ಜೊತೆಗಿದ್ದಾಗಲೇ ಇಷ್ಟು ಅನುದಾನ ನೀಡಿದ್ದರೆ ಬದ್ಧತೆ ಇರುತ್ತಿತ್ತು. ಈಗ ಜನರ ದುಡ್ಡನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಅವರು ದೂರಿದರು.
ಚಾಮರಾಜನಗರ ಜಿಲ್ಲೆಯ ಸ್ಥಿತಿ ಇನ್ನೂ ಶೋಚಿನೀಯವಾಗಿದೆ. ಅಲ್ಲಿನ ಜನ ವೀರಪ್ಪನ್ ಬದುಕಿದ್ದಾಗಲೇ ಚೆನ್ನಾಗಿತ್ತು ಎಂದು ಮಾತನಾಡಿಕೊಳ್ಳುತ್ತಿದ್ದಾರೆ ಎಂದರೆ ಈ ಸರ್ಕಾರದಲ್ಲಿ ವೀರಪ್ಪನ್‌ಗಿಂತಲೂ ಕೆಟ್ಟ ದರೋಡೆಕೋರರು ಇದ್ದಾರೆ ಎಂದಾಯಿತು ಎಂದು ಅವರು ಲೇವಡಿ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದಂತೆ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ಹೋಲಿಕೆ ಮಾಡುವುದು ಸರಿಯಲ್ಲ ಎಂಬುದು ಸತ್ಯ, ಏಕೆಂದರೆ ತಮಗೆ ಬೇರೆ ಪಕ್ಷದಿಂದ ಅಭ್ಯರ್ಥಿಗಳನ್ನು ಕರೆತಂದು ಚುನಾವಣೆಯಲ್ಲಿ ಕಣಕ್ಕಿಳಿಸಬೇಕಾದಷ್ಟು ದಾರಿದ್ರé ಬಂದಿಲ್ಲ. ಇತ್ತೀಚೆಗೆ ನಡೆದ ಅಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯುಲ್ಲಿ ಕೂಡ ಕಾಂಗ್ರೆಸ್ ಠೇವಣಿ ಕಳೆದುಕೊಂಡಿದೆ, ಹೀಗಿರುವಾಗ ಕಾಂಗ್ರೆಸ್‌ಗೆ ಜೆಡಿಎಸ್ ಅನ್ನು ಹೇಗೆ ಹೋಲಿಕೆ ಮಾಡಲು ಸಾಧ್ಯ ಎಂದು ಕುಮಾರಸ್ವಾಮಿ ತಿರುಗೇಟು ನೀಡಿದರು.
ದಬ್ಟಾಳಿಕೆ:
ನಂಜನಗೂಡಿಗೆ ತೆರಳಿದ ತನ್ನನ್ನು ಬರಮಾಡಿಕೊಳ್ಳಲು ಬಂದ ಪಕ್ಷದ ಕಾರ್ಯಕರ್ತರ ಬೈಕ್, ಕಾರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಚುನಾವಣೆಗೆ ಮುನ್ನವೇ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇನ್ನು ಮುಂದೆ ಹೇಗೋ ಎಂಬ ಆತಂಕ ಕಾಡುತ್ತಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರಕಾರ 2018 ರಲ್ಲಿ ಜಿ.ಟಿ.ದೇವೇಗೌಡರನ್ನು ಬಂಧಿಸಲು ಮುಂದಾಗಿತ್ತು: ರೇವಣ್ಣ ಬಾಂಬ್
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress ಸರಕಾರ 2018 ರಲ್ಲಿ ಜಿ.ಟಿ.ದೇವೇಗೌಡರನ್ನು ಬಂಧಿಸಲು ಮುಂದಾಗಿತ್ತು: ರೇವಣ್ಣ ಬಾಂಬ್
Simple Life: ಬದುಕು ನಿರಾಡಂಬರವಾಗಿರಲಿ
Mangaluru: Spam Call ಪತ್ತೆಗೆ ಎಐ ತಂತ್ರಜ್ಞಾನ ಬಳಕೆ… ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ
BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು
Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.