ನಂಜನಗೂಡಲ್ಲಿ ವೀರಶೈವ ಹಿತಾರಕ್ಷಣಾ ವೇದಿಕೆ ಅಸ್ತಿತ್ವಕ್ಕೆ


Team Udayavani, Jul 31, 2017, 12:23 PM IST

mys5.jpg

ನಂಜನಗೂಡು: ನಗರದ ಕಬ್ಬಳ್ಳಿ ವಿದ್ಯಾರ್ಥಿ ನಿಲಯದಲ್ಲಿ ಮೈಸೂರು ವಿಭಾಗ ಮಟ್ಟದ ವೀರಶೈವ ಹಿತಾರಕ್ಷಣಾ ವೇದಿಕೆಗೆ ಚಾಲನೆ ನೀಡಲಾಯಿತು. ಭಾನುವಾರ ಕಾರ್ಯಕ್ರಮವನ್ನು ಉದ್ಘಾಟಿಸಿದ ವೀರಶೈವ ಹಿತಾರಕ್ಷಣಾ ವೇದಿಕೆಯ ಮುಖಂಡ ಸಿ.ಪಿ.ತಮ್ಮಣ್ಣ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಪಿ.ಮಹದೇವಸ್ವಾಮಿ, ಖಜಾಂಚಿ ಉಡಿಗಾಲ ಯು.ಎಂ. ಪ್ರಭುಸ್ವಾಮಿ ಅವರುಗಳು ಮಾತನಾಡಿದರು.

ಮೈಸೂರು ವಿಭಾಗದಲ್ಲಿನ 49 ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು 12 ಲಕ್ಷಕ್ಕೂ ಅಧಿಕ ವೀರಶೈವ ಮತದಾರರು ಇದ್ದು, ಮುಂಬರುವ ವಿಧಾನಸಭಾ, ಲೋಕಸಭಾ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ವೀರಶೈವ ಮತದಾರರು ಅಧಿಕ ಸಂಖ್ಯೆಯಲ್ಲಿರುವ ಹಾಗೂ ಗೆಲ್ಲುವ ಅವಕಾಶವಿರುವ ಕ್ಷೇತ್ರಗಳಲ್ಲಿ ಸಮಾಜದ ಅಭ್ಯರ್ಥಿಗಳಿಗೆ ಹೆಚ್ಚಿನ ಸ್ಥಾನಗಳನ್ನು ಕಲ್ಪಿಸಿಕೊಡಲು ಕಾರ್ಯತಂತ್ರ ರೂಪಿಸಬೇಕು ಎಂದರು.

ನಮ್ಮ ಸಮಾಜವನ್ನು ಕಡೆಗಣಿಸುವ ಅಭ್ಯರ್ಥಿಗಳ ವಿರುದ್ಧ ಒಗ್ಗಟ್ಟಾಗಿ ಮತ ಚಲಾಯಿಸುವುದು ಹಾಗೂ ಇತರೆ ಕ್ಷೇತ್ರಗಳಲ್ಲಿ ನಮ್ಮ ಸಮಾಜವನ್ನು ಆಧರಿಸಿ, ಗೌರವಿಸಿ, ಮನ್ನಣೆ ನೀಡಿ, ವಿಶ್ವಾಸದಿಂದ ಕಾಣುವಂತಹ ಪಕ್ಷದ ಅಭ್ಯರ್ಥಿಯನ್ನು ಒಗ್ಗಟ್ಟಾಗಿ ಬೆಂಬಲಿಸುವಂತೆ ಮಹತ್ವದ ನಿರ್ಣಯ ಕೈಗೊಂಡರು, ವೀರಶೈವರು ಇನ್ನು ಮುಂದಾದರು ರಾಜಕೀಯವಾಗಿ, ಶೈಕ್ಷಣಿಕವಾಗಿ,ಔದ್ಯೋಗಿಕವಾಗಿ,ಸುಸಂಸ್ಕೃತರಾಗಿ ಮುಂದೆ ಬಂದು ಸಮಾಜದ ಅಭಿವೃದ್ದಿಗೆ ಸಹಕರಿಸ ಬೇಕೆಂದರು. ಈ ನಿಟ್ಟಿನಲ್ಲಿ ಯುವ ಜನತೆ ಸಂಕಲ್ಪ ಮಾಡಬೇಕಾಗಿದೆ ಎಂದರು.

ಸಭೆಯಲ್ಲಿ ನಂಜನಗೂಡು ಕ್ಷೇತ್ರದ ವೀರಶೈವ ಮುಖಂಡರುಗಳಾದ ಕಪ್ಪಸೋಗೆ ಮಲ್ಲಿಕಾರ್ಜುನಪ್ಪ, ಮಸಗೆ ರಾಜಪ್ಪ, ಚಂದ್ರವಾಡಿ ನಾಗಣ್ಣ, ಚಿಕ್ಕಮಾದಪ್ಪ, ಕೆ ಆರ್‌ ಪುರ ಸಿದ್ದಪ್ಪ, ಎ.ಬಿ. ನಂಜುಂಡಸ್ವಾಮಿ ಮುಂತಾದವರು ಸಂಘಟನೆ ಬಗ್ಗೆ ಉತ್ತಮ ಸಲಹೆ ಸೂಚನೆಯನ್ನು ವ್ಯಕ್ತಪಡಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಅಧ್ಯಕ್ಷ ಮಡುವಿನಹಳ್ಳಿ ಶಂಕರಪ್ಪ ವಹಿಸಿ ಮಾತನಾಡಿದರು. ಸಭೆಯಲ್ಲಿ ಮುದ್ದಳ್ಳಿ ಶಿವರಾಜಪ್ಪ, ಕುರಿಹುಂಡಿ ಮಹೇಶ್‌,ವೀರಶೈವ ಬ್ಯಾಂಕ್‌ ಅಧ್ಯಕ್ಷ ಕೆ.ವಿ.ಶಿವಕುಮಾರ್‌, ಶೆಟ್ಟಹಳ್ಳಿ ಗುರುಸ್ವಾಮಿ, ತರಗನಹಳ್ಳಿ ನಂಜುಂಡಸ್ವಾಮಿ, ಎಳವರಹುಂಡಿ ಸಿದ್ದಪ್ಪ, ಕಸುವಿನಹಳ್ಳಿ ಗುರುಸಿದ್ದಪ್ಪ, ಹಲರೆ ಶಿವಬುದ್ದಿ, ಶಿವಸ್ವಾಮಿ, ಸೇರಿದಂತೆ ನೂರಾರು ಪ್ರಮುಖರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-jyo

Asian Weightlifting: ಜೋಶ್ನಾ ನೂತನ ದಾಖಲೆ

1-bcc

U-19 ವನಿತಾ ಏಷ್ಯಾ ಕಪ್‌: ಫೈನಲ್‌ಗೆ ಭಾರತ

1-J-PP

Pro Kabaddi: ಜೈಪುರ್‌ 12ನೇ ವಿಜಯ

1-bangla

T20;ಮೂರೂ ಪಂದ್ಯ ಗೆದ್ದ ಬಾಂಗ್ಲಾ: ವಿಂಡೀಸಿಗೆ ವೈಟ್‌ವಾಶ್‌

1-pak

ODI; ತವರಲ್ಲೇ ಎಡವಿದ ದಕ್ಷಿಣ ಆಫ್ರಿಕಾ: ಸರಣಿ ಗೆದ್ದ ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.