ಹೆಣ್ಣು ಮಕ್ಕಳ ಕಾಳಜಿ ಬಗ್ಗೆ ಪಾಲಕರಲ್ಲಿ ಅರಿವು ಅತ್ಯಗತ್ಯ: ಬಿ.ಡಿ.ರೋಹಿಣಿ
Team Udayavani, Jan 24, 2022, 5:17 PM IST
ಪಿರಿಯಾಪಟ್ಟಣ: ಪಾಲಕರು ಹೆಣ್ಣು ಮಗುವಿಗೆ ಶಿಕ್ಷಣ, ಉತ್ತಮ ಭವಿಷ್ಯ ರೂಪಿಸುವುದರ ಜೊತೆಗೆ ಅವರನ್ನು ಸಮಾಜದ ಶಕ್ತಿಯನ್ನಾಗಿ ಮಾರ್ಪಾಡು ಮಾಡಬೇಕು ಎಂದು ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶೆ ಬಿ.ಡಿ.ರೋಹಿಣಿ ತಿಳಿಸಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ವಕೀಲರ ಸಂಘ, ಕಾನೂನು ಸೇವಾ ಸಮಿತಿ ವತಿಯಿಂದ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹೆಣ್ಣಿನ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟಲು 2008ರಲ್ಲಿ ಹೊಸ ಕಾಯ್ದೆಯೊಂದನ್ನು ತಂದಿದ್ದು ಅದಕ್ಕಾಗಿ ಪ್ರತ್ಯೇಕ ಮೀಸಲಾತಿ ನೀಡಲಾಗಿದೆ. ದೇಶದಲ್ಲಿ ಹೆಣ್ಣು ಮತ್ತು ಗಂಡು ಲಿಂಗ ತಾರತಮ್ಯವಿಲ್ಲದೆ ಇಬ್ಬರು ಸಮಾಜದಲ್ಲಿ ಸರಿಸಮಾನರು ಎಂಬಂತೆ ಇರಬೇಕು. ಹೆಣ್ಣುಮಕ್ಕಳು ಸಮಯವನ್ನು ವ್ಯರ್ಥ ಮಾಡದೆ ಅವರ ವಿದ್ಯಾಭ್ಯಾಸದ ಕಡಗೆ ಹೆಚ್ಚಿನ ಗಮನವನ್ನು ವಹಿಸಬೇಕು. ತಂತ್ರಜ್ಞಾನಗಳನ್ನು ಅವಶ್ಯಕತೆ ಮಾತ್ರ ಉಪಯೋಗಿಸಿ ಅದರ ಅವಶ್ಯಕತೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಹಾಗೂ ಕಲಿಕೆಯನ್ನು ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಹೆಣ್ಣಿಗೆ ಕಾನೂನಿನಲ್ಲಿ ಹೆಚ್ಚಿನ ಭದ್ರತೆ ಎದ್ದುಕಾಣುತ್ತಿದೆ. ಪೋಷಕರು ಮಕ್ಕಳ ಮೇಲೆ ಹೆಚ್ಚಿನ ಕಾಳಜಿ ವಹಿಸಿ ವಿದ್ಯಾಭ್ಯಾಸ ಮತ್ತು ಮುಂದಿನ ಜೀವನಕ್ಕೆ ದಾರಿದೀಪವಾಗಬೇಕು. ಸಮಾಜದಲ್ಲಿ ಹೆಣ್ಣು ಮಗುವನ್ನು ಗೌರವಿಸಬೇಕು, ಭ್ರೂಣ ಹತ್ಯೆ ತಡೆಗಟ್ಟಿ ಹೆಣ್ಣು ಮಗುವನ್ನು ರಕ್ಷಿಸಬೇಕು, ಎಂಬ ನಿಟ್ಟಿನಲ್ಲಿ ಸರ್ಕಾರಗಳು ಹೆಣ್ಣು ಮಗುವಿನ ಉತ್ತಮ ಭವಿಷ್ಯಕ್ಕಾಗಿ ಉತ್ತಮ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಕಾರ್ಯದರ್ಶಿ ಬಿ.ಎನ್.ಹರೀಶ್ ಮಾತನಾಡಿ ಸಮಾಜದಲ್ಲಿ ವಿಜ್ಞಾನ, ತಂತ್ರಜ್ಞಾನ, ಉಡಿಗೆ, ತೊಡಿಗೆ ಮಾತ್ರ ಬದಲಾವಣೆಯಾಗಿದೆಯೇ ಹೊರತು ಹೆಣ್ಣು ಮಕ್ಕಳನ್ನು ನೋಡುವ ದೃಷ್ಠಿಕೋನ ಮಾತ್ರ ಬದಲಾಗುತ್ತಿಲ್ಲ. ಇದರ ಬದಲಾವಣೆ ಮತ್ತು ಮಹಿಳೆಯರ ಶಿಕ್ಷಣ, ಸುರಕ್ಷತೆ ಕುರಿತು ಅರಿವು ಮೂಡಿಸುವುದೇ ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಮುಖ್ಯ ಉದ್ದೇಶ ಹೆಣ್ಣು ಮಕ್ಕಳ ಪೋಷಣೆ, ರಕ್ಷಣೆ ಮನೆಯಿಂದಲೇ ಆರಂಭವಾಗಬೇಕು, ಮಹಿಳೆ ಪುರುಷನಿಗೆ ಸರಿ ಸಮನಾಗಿ ಕೆಲಸ ಮಾಡುತ್ತಿದ್ದರೂ ಸಹ ಮಹಿಳೆಯರನ್ನು ತಾತ್ಸಾರ ಭಾವದಿಂದ ನೋಡಲಾಗುತ್ತಿದೆ. ಇದನ್ನು ಹೋಗಲಾಡಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಖಜಾಂಚಿ ಮಾದೇಗೌಡ, ಕಾನೂನು ಸಲಹೆಗಾರರ ಎಚ್.ಕೆ.ಶ್ರೀನಿವಾಸ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸೋಮಚಂದ್ರ ಮಾತನಾಡಿದರು.
ಈ ಸಂದರ್ಭದಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ಸುಭಾಷ್, ಉಪ ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.