![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Sep 6, 2019, 3:09 PM IST
ಜಿಲ್ಲಾಧಿಕಾರಿಗಳ ಕಚೇರಿಯ ಕಂಟ್ರೋಲ್ ರೂಂನಲ್ಲಿ ಗುರುವಾರ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಕರೆಯೊಂದನ್ನು ಸ್ವೀಕರಿಸುವ ಮೂಲಕ ದಸರಾ ಸಹಾಯವಾಣಿಗೆ ಚಾಲನೆ ನೀಡಿದರು.
ಮೈಸೂರು: ಹಲೋ ದಸರಾ ಸಹಾಯವಾಣಿ ನಾನು ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಎಂದು ಹೇಳುವ ಮೂಲಕ 2019ರ ದಸರಾ ಸಹಾಯ ವಾಣಿಗೆ ಚಾಲನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕಂಟ್ರೋಲ್ ರೂಂನಲ್ಲಿ ಗುರುವಾರ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಕರೆಯೊಂದನ್ನು ಸ್ವೀಕರಿಸುವ ಮೂಲಕ ದಸರಾ ಸಹಾಯವಾಣಿಗೆ ಚಾಲನೆ ನೀಡಿ, ದಸರಾ ಸಹಾಯವಾಣಿ ಸಂಖ್ಯೆ 0821-2444777 ಸಂಪರ್ಕಿಸಿ ದಸರಾ ಮಹೋತ್ಸವದ ಕಾರ್ಯಕ್ರಮ ಗಳು, ಪ್ರವಾಸೋದ್ಯಮ ಸಂಬಂಧಿಸಿದಂತೆ ಮಾಹಿತಿ ಪಡೆಯಬಹುದು. ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದ ಮೇರೆಗೆ ಕಾರ್ಯಾರಂಭ ಮಾಡಿರುವ ಸಹಾಯವಾಣಿ ದಸರಾ ಮುಗಿಯುವವರೆಗೂ ಚಾಲ್ತಿಯಲ್ಲಿರಲಿದೆ ಎಂದು ಹೇಳಿದರು.
ತರಬೇತಿ: ಮಹಾಜನ ಕಾಲೇಜಿನ ಪ್ರವಾಸೋದ್ಯಮ ಅಧ್ಯಯನ ವಿಭಾಗದ ವಿದ್ಯಾರ್ಥಿಗಳು ಬೆಳಗ್ಗೆ 9ರಿಂದ ರಾತ್ರಿ 10ರವರೆಗೆ ಕರ್ತವ್ಯ ನಿರ್ವಹಿಸಲಿದ್ದಾರೆ. ವಿದ್ಯಾರ್ಥಿಗಳಿಗೆ ದಸರಾ ಮಹೋತ್ಸವ, ಮೈಸೂರು ಇತಿಹಾಸ, ಪ್ರವಾಸೋದ್ಯಮ ಕುರಿತಂತೆ ತರಬೇತಿ ನೀಡಲಾಗಿದೆ.
ವಿದ್ಯಾರ್ಥಿಗಳಿಗೆ ಅವಕಾಶ: ಈ ಬಗ್ಗೆ ಮಾಹಿತಿ ನೀಡಿದ ಮಹಾಜನ ಕಾಲೇಜಿನ ಪ್ರವಾಸೋದ್ಯಮ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಸತೀಶ್ ಜಿ.ಶೆಟ್ಟಿ ಪ್ರವಾಸೋದ್ಯಮ ವಿದ್ಯಾರ್ಥಿಗಳಿಗೆ ಈ ಅವಕಾಶ ಲಭಿಸಿರುವುದು ಪ್ರಾಯೋಗಿಕವಾಗಿ ಕಲಿಯಲು ಸಿಕ್ಕ ಸದಾವಕಾಶ. ವಿಶ್ವಮಟ್ಟದ ಕಾರ್ಯಕ್ರಮದಲ್ಲಿ ಭಾಗ ವಾಗುವ ಅವಕಾಶವೂ ಲಭಿಸಿದೆ. 100 ವಿದ್ಯಾರ್ಥಿ ಗಳನ್ನು ಸಹಾಯವಾಣಿಯಲ್ಲಿ ಕಾರ್ಯ ನಿರ್ವಹಿಸ ಲಿದ್ದಾರೆ ಎಂದು ತಿಳಿಸಿದರು.
ಮಾಹಿತಿ: ದಸರಾ ಮಹೋತ್ಸವ ಕಾರ್ಯಕ್ರಮಗಳೂ, ಜಂಬೂ ಸವಾರಿ, ಅಂಬಾವಿಲಾಸ ಅರಮನೆ, ಶ್ರೀ ಚಾಮರಾಜೇಂದ್ರ ಮೃಗಾಲಯ, ಟಿಕೆಟ್ ದರಗಳು, ಹೋಟೆಲ್ ಕೊಠಡಿಗಳು, ಆಹಾರ, ಮೈಸೂರು ಸುತ್ತಲಿನ ಪ್ರೇಕ್ಷಣಿಯ ಸ್ಥಳಗಳ ಮಾಹಿತಿ, ರೈಲು ಮತ್ತು ವಿಮಾನ ಸೇವೆಗಳ ಬಗ್ಗೆಯೂ ಮಾಹಿತಿ ನೀಡಲಿದ್ದಾರೆ ಎಂದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು, ಪ್ರವಾಸಿ ಗರಿಗೆ ಮಾಹಿತಿ ಕೊರತೆಯಾಗಬಾರದೆಂಬ ಹಿನ್ನೆಲೆ ಯಲ್ಲಿ ದಸರಾ ಸಹಾಯವಾಣಿ ಪ್ರಾರಂಭಿಸಲಾಗಿದೆ. ತರಬೇತಿ ಪಡೆದ 100 ವಿದ್ಯಾರ್ಥಿಗಳು ಕಾರ್ಯ ನಿರ್ವಹಿಸಲಿದ್ದು, ದಸರಾ ಮಹೋತ್ಸವ ಪೂರ್ಣ ಮಾಹಿತಿಯನ್ನು ನೀಡಲಿದ್ದಾರೆ.
ದಸರಾ ಪಾರಂಪರಿಕ ಹಬ್ಬ ತುಂಬ ಚೆನ್ನಾಗಿ ಆಗಬೇಕೆಂಬ ಹಿನ್ನೆಲೆಯಲ್ಲಿ ಹಲವು ಸಭೆ ನಡೆಸಿದ್ದೇನೆ. ಈ ಉತ್ಸವದ ಯಶಸ್ಸಿಗೆ ಎಲ್ಲರ ಸಹಕಾರ ಕೋರ ಲಿದ್ದೇನೆ. ಅ.8ರ ನಂತರ ಮೈಸೂರು ಅಭಿವೃದ್ಧಿ ಕುರಿ ತಂತೆ ಚರ್ಚಿಸಲಾಗುವುದು. ಅಲ್ಲಿಯವರೆಗೆ ಯಶಸ್ವಿ ದಸರಾ ಆಚರಣೆಗೆ ಆದ್ಯತೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್‌ಸಿಂಹ, ಜಿಲ್ಲಾಧಿ ಕಾರಿ ಅಭಿರಾಮ್ ಜಿ.ಶಂಕರ್, ಪ್ರವಾ ಸೋದ್ಯಮ ಇಲಾಖೆ ಉಪ ನಿರ್ದೇಶಕ ಜನಾರ್ಧನ್, ಅಪರ ಜಿಲ್ಲಾಧಿ ಕಾರಿ ಪೂರ್ಣಿಮಾ ಮತ್ತಿತರರು ಉಪಸ್ಥಿತರಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.