ಸ್ವಾತಂತ್ರ್ಯ ಹೋರಾಟದ ಬಗ್ಗೆ ಜಾಗೃತಿ ಮೂಡಿಸಬೇಕು


Team Udayavani, Jul 25, 2017, 11:37 AM IST

mys2.jpg

ಮೈಸೂರು: ಬ್ರಿಟಿಷರ ದೌರ್ಜನ್ಯ, ದಬ್ಟಾಳಿಕೆ ವಿರುದ್ಧ ಹೋರಾಡಿದ ದಂಡಿ ಸತ್ಯಾಗ್ರಹವನ್ನು ಸ್ಮರಿಸುವಂತಹ ಕಾರ್ಯಕ್ರಮಗಳು ಸಾಂಕೇತಿಕವಾಗಿರದೆ ಯುವಜನರಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಹೋರಾಟಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವಾಗಬೇಕು ಎಂದು ಗಾಂಧಿವಾದಿ ಸುರೇಂದ್ರ ಕೌಲಗಿ ಹೇಳಿದರು.

ಮೈಸೂರು ವಿವಿ ಗಾಂಧಿ ಅಧ್ಯಯನ ಕೇಂದ್ರ ಹಾಗೂ ಶೇಷಾದ್ರಿಪುರಂ ಪದವಿ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ ನಡೆದ 88ನೇ ದಂಡಿಯಾತ್ರೆ ನೆನಪು ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಯುವ ಜನರಲ್ಲಿ ಇಂತಹ ಸತ್ಯಾಗ್ರಹದ ಪ್ರಭಾವ ಬೀರಬೇಕಿದೆ ಎಂದರು.

ಸಬರಮತಿ ಆಶ್ರಮದಲ್ಲಿ 78 ಮಂದಿಯಿಂದ ಆರಂಭಗೊಂಡ ಸತ್ಯಾಗ್ರಹಕ್ಕೆ 10 ಸಾವಿರಕ್ಕಿಂತಲೂ ಹೆಚ್ಚು ಮಂದಿ ಸೇರಿಕೊಂಡರು, ಜನತೆಯ ಏಳಿಗೆ ಉದ್ದೇಶವನ್ನಿಟ್ಟುಕೊಂಡು ಸತ್ಯಾಗ್ರಹ ನಡೆಸಿದರೆ, ಜನಬೆಂಬಲ ತಾನಾಗಿಯೇ ದೊರೆಯುತ್ತದೆ ದಂಡಿ ಸತ್ಯಾಗ್ರಹ ಉತ್ತಮ ಉದಾಹರಣೆ ಎಂದು ತಿಳಿಸಿದರು.

ಸರಕು ಮತ್ತು ಸೇವಾ ತೆರಿಗೆ ಮೂಲಕ ಸಂಗ್ರಹವಾಗುವ ಕರ ಸದ್ಬಳಕೆ ಯಾಗುತ್ತಿದೆಯೇ ಎಂಬುದನ್ನು ಪ್ರಶ್ನಿಸುವುದು ಕೂಡ ನಮ್ಮ ಹಕ್ಕಾಗಿದೆ. ಜಿಎಸ್‌ಟಿ ಹಣ ಜನರಿಗೆ ಸಹಾಯ ಆಗಬೇಕಿದೆ. ಪ್ರಶ್ನಿಸುವ ಹಕ್ಕನ್ನು ಬೆಳೆಸುವ ಇಂತಹ ಕಾರ್ಯಕ್ರಮಗಳು ಮತ್ತಷ್ಟು ನಡೆಸಬೇಕಿದೆ ಎಂದು ಸಲಹೆ ನೀಡಿದರು.

ಮೈಸೂರು ವಿವಿ ಗಾಂಧಿ ಭವನದ ನಿರ್ದೇಶಕ ಡಾ.ಎಸ್‌. ಶಿವರಾಜಪ್ಪ ಮಾತನಾಡಿ, ಗಾಂಧಿಜೀ ದಿನಕ್ಕೆ 10 ಮೈಲಿಯಂತೆ 24 ದಿನಗಳ ಕಾಲ 240 ಮೈಲಿ ನಡೆದು ಸತ್ಯಾಗ್ರಹದ ಮೂಲಕ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದರು ಎಂದು ಹೇಳಿದರು.

ಗಾಂಧಿ ವಿಚಾರಗಳ ಚಿಂತಕ ವೇಮಗಲ್‌ ಸೋಮಶೇಖರ್‌, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಡಾ. ವೂಡೇ ಪಿ.ಕೃಷ್ಣ, ಶೇಷಾದ್ರಿಪುರಂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಅರ್ಚನಾ ಸ್ವಾಮಿ, ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಬಿ.ಎ.ಅನಂತರಾಮ್‌, ಪೊ›.ಕೆ.ಸೌಮ್ಯ ಈರಪ್ಪ ಇತರರು ಇದ್ದರು.

ಜಾಗೃತಿ ಜಾಥಾ: ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ನಡೆದ ಪ್ರಮುಖ ಸತ್ಯಾಗ್ರಹಗಳ ಕುರಿತು ಅರಿವು ಮೂಡಿಸಲು ನಗರದ ಪ್ರಮುಖ ರಸ್ತೆಗಳಲ್ಲಿ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿದರು.

ಟಾಪ್ ನ್ಯೂಸ್

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

rape

Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.