ಮೈಸೂರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ನೆಗೆಟಿವ್‌ ವರದಿ ಕಡ್ಡಾಯ?

ಏ.10 ರಿಂದ 20ರವರೆಗೆ ಸಾಲು ಸಾಲು ರಜೆ ಹಿನ್ನೆಲೆ ಪ್ರವಾಸಿಗರ ನಿಯಂತ್ರಿಸಲು ಕ್ರಮ: ಜಿಲ್ಲಾಧಿಕಾರಿ ಸಿಂಧೂರಿ

Team Udayavani, Apr 9, 2021, 8:53 PM IST

gewe

ಮೈಸೂರು: ಜಿಲ್ಲೆಯಲ್ಲಿ ಕೊರೊನಾ 2ನೇ ಅಲೆ ಪ್ರಭಾವ ಹೆಚ್ಚಿರುವುದರಿಂದ, ಹೆಚ್ಚು ಜನ ಸೇರುವ ಸ್ಥಳಗಳಿಗೆ ಭಾಗವಹಿಸುವವರಿಗೆ ಕೊರೊನಾ ನೆಗೆಟಿವ್‌ ವರದಿಯನ್ನು ಮಾಡುವುದು ಸೂಕ್ತವಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಏ.10ರಿಂದ ಸಾಲು ಸಾಲು ರಜೆಗಳು ಇರುವುದರಿಂದ, ಪ್ರವಾಸಿಗರು ಹಾಗೂ ಬೇರೆ ಊರುಗಳಿಂದ ಮೈಸೂರಿಗೆ ಬರುವವರ ಸಂಖ್ಯೆ ಹೆಚ್ಚಾಗಲಿದೆ. ಇದರಿಂದ ಕೋವಿಡ್‌ ಹರಡುವ ಸಾಧ್ಯತೆ ಇದೆ. ಹೀಗಾಗಿ, ಮುನ್ನೆಚ್ಚರಿಕೆ ಕ್ರಮವಾಗಿ ಏ.10 ರಿಂದ 20ರವರೆಗೆ ಮೈಸೂರು ನಗರ ಮತ್ತು ಜಿಲ್ಲಾ ವ್ಯಾಪ್ತಿಯ ಪ್ರವಾಸಿ ಸ್ಥಳಗಳು, ರೆಸಾರ್ಟ್‌ಗಳು, ಕನ್ವೆಷನ್‌ಹಾಲ್‌, ಪಾರ್ಟಿ ಹಾಲ್‌, ರೀಕ್ರೇಷನ್‌ ಕ್ಲಬ್‌ ಮತ್ತು ಚಿತ್ರಮಂದಿರಗಳಿಗೆ ಬರುವವರು ಕೋವಿಡ್‌ ನೆಗೆಟಿವ್‌ ರಿಪೋರ್ಟ್‌ ಹೊಂದಿರುವುದು ಕಡ್ಡಾಯಗೊಳಿಸಿ ಆದೇಶಿಸಲಾಗಿದೆ ಎಂದರು.

 ಜಿಲ್ಲೆಯ ಪ್ರವಾಸಿ ತಾಣಗಳನ್ನು ಮುಚ್ಚುತ್ತಿಲ್ಲ.

ಬದಲಿಗೆ ಕೊರೊನಾ ನೆಗೆಟಿವ್‌ ವರದಿ ಕಡ್ಡಾಯ ಮಾಡಲಾಗಿದೆ. ಕೋವಿಡ್‌ ರಿಪೋರ್ಟ್‌ 72 ಗಂಟೆಯೊಳಗಿನದ್ದಾಗಿರಬೇಕು. ಈ ವರದಿ ಪರಿಶೀಲಿಸಿದ ನಂತರ ಅಂತಹ ವ್ಯಕ್ತಿಗಳಿಗೆ ಪ್ರವೇಶಿಸಲು ಅನುಮತಿ ನೀಡಲಾಗುವುದು. ಇದಕ್ಕಾಗಿ 300 ಮಂದಿ ಗೃಹರಕ್ಷಕರನ್ನು ಪರಿಶೀಲಿಸಲು ನಿಯೋಜಿಸಿಸಲಾಗುವುದು ಎಂದರು.

ಏ.10ರಿಂದ ರಜೆಗಳು ಹೆಚ್ಚು ಇರುವುದರಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಲಿದೆ. ಜೊತೆಗೆ ಬೇರೆ ಊರುಗಳಿಂದ ಮೈಸೂರಿಗೆ ಬರುವವರ ಸಂಖ್ಯೆ ಹೆಚ್ಚಾಗಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿ ಸ್ಥಳಗಳು, ರೆಸಾರ್ಟ್‌ಗಳು, ಕನ್ವೆಷನ್‌ ಹಾಲ್‌, ಪಾರ್ಟಿ ಹಾಲ್‌ ಮತ್ತು ಚಿತ್ರಮಂದಿರಗಳಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್‌ ಇಲಾಖೆ ಗೃಹರಕ್ಷಕರನ್ನು ನಿಯೋಜಿಸಿ ಕೋವಿಡ್‌ ನೆಗೆಟಿವ್‌ ವರದಿ ಪರಿಶೀಲಿಸಲು ಕ್ರಮ ವಹಿಸಲಾಗುತ್ತದೆ ಎಂದು ತಿಳಿಸಿದರು.

ನಿಯಮ ಉಲ್ಲಂ ಸಿದರೆ ಕ್ರಮ:

ನಿಯಮ ಉಲ್ಲಂ ಸಿದಲ್ಲಿ ಸ್ಥಳಗಳ ಮಾಲಿಕರೇ ಜವಾಬ್ದಾರರಾಗಿರುತ್ತಾರೆ. ಹಾಗೂ ಉಲ್ಲಂ ಸಿದ ಪ್ರಕರಣಗಳಲ್ಲಿ ಕೋವಿಡ್‌ ಸಾಂಕ್ರಾಮಿಕ ಪರಿಸ್ಥಿತಿ ಕೊನೆಗೊಳ್ಳುವವರೆಗೂ ಆ ಸ್ಥಳವನ್ನು ಮುಚ್ಚಲಾಗುವುದು. ಜೊತೆಗೆ ಯಾವುದೇ ವ್ಯಕ್ತಿಗಳು ಉಲ್ಲಂ ಸಿದರೆ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಸಿದರು. ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್‌ ಪ್ರಮಾಣ ಶೇ.3.1 ರಷ್ಟಿದೆ. 240 ಸೋಂಕಿನ ಪ್ರಕರಣ ಬಂದರೇ ಅದರಲ್ಲಿ 200 ಪ್ರಕರಣವು ನಗರಕ್ಕೆ ಸೇರಿದ್ದೆ. ನಗರ ಪ್ರದೇಶದಲ್ಲಿ ಸೋಂಕು ಹೆಚ್ಚಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಅಷ್ಟಾಗಿಲ್ಲ. ಹೀಗಾಗಿ, ಕೊರೋನಾ ವೈರಸ್‌ ಅನ್ನು ಹಳ್ಳಿಗಳಿಗೆ ತೆಗೆದುಕೊಂಡು ಹೋಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.

ಹೈ ಅಲರ್ಟ್‌:

ನಗರ ಪೊಲೀಸ್‌ ಆಯುಕ್ತ ಡಾ. ಚಂದ್ರಗುಪ್ತ ಮಾತನಾಡಿ, ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿದ್ದು, ಗಡಿ ಭಾಗದಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. ಕೋವಿಡ್‌ ನೆಗೆಟಿವ್‌ ಇದ್ದರೆ ಮಾತ್ರ ಒಳಗೆ ಪ್ರವೇಶ ನೀಡಲಾಗುತ್ತಿದೆ. ಮೈಸೂರಿನಲ್ಲಿ ಕಳೆದ ವರ್ಷ ಜನರೇ ಬಹಳ ಜಾಗೃತರಾಗಿದ್ದರು. ಆಗ ಸಾರ್ವಜನಿಕರು ಕೊರೊನಾ ನಿಯಮ ಪಾಲಿಸುತ್ತಿದ್ದರು. ಈಗ ರಿಲ್ಯಾಕ್ಸ್ ಆಗುವುದು ಬೇಡ ಎಂದು ಮನವಿ ಮಾಡಿದರು. ಹಳ್ಳಿಗಳಲ್ಲಿ ಜಾತ್ರೆ, ಹಬ್ಬ, ಸಮಾರಂಭ ಕಾರ್ಯಕ್ರಮಗಳಿಗೆ ನಿರ್ಬಂಧವಿದ್ದು, ಅನುಮತಿ ಇಲ್ಲದೇ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮದುವೆ, ಸಭೆ, ಸಮಾರಂಭಗಳಿಗೆ ಅನುಮತಿ ಕಡ್ಡಾಯವಾಗಿದೆ. ನಿಯಮ ಉಲ್ಲಂ ಸಿದ್ದಲ್ಲಿ ಅನುಮತಿ ಪಡೆದವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು. ಹೀಗಾಗಿ, ಪ್ರತಿ ಠಾಣಾ ಮಟ್ಟದಲ್ಲಿ ಇವುಗಳನ್ನು ಪರಿಶೀಲಿಸಲು ಅಧಿಕಾರಿಯೊಬ್ಬರನ್ನು ನೇಮಿಸಲಾಗಿದೆ ಎಂದರು.

ಪ್ರಧಾನ ಕಾರ್ಯದರ್ಶಿ ಆದೇಶ: ಸ್ಥಳೀಯ ಜಿಲ್ಲಾಡಳಿತ ಕೊರೊನಾ ಸಂಬಂಧ ಯಾವುದೇ ನಿರ್ಬಂಧಗಳನ್ನು ಪ್ರಕಟಿಸುವಂತಿಲ್ಲ ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿ ಎನ್‌. ಮಂಜುನಾಥ್‌ ಪ್ರಸಾದ್‌ ಆದೇಶ ಹೊರಡಿಸಿದ್ದಾರೆ.

ಟಾಪ್ ನ್ಯೂಸ್

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.